AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರೂರು ಗುಡ್ಡ ಕುಸಿತ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕನದ್ದು ಎಂಬ ಶಂಕೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದು 23 ದಿನಗಳು ಕಳೆದಿವೆ. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದಾರೆ. ಈ ಗುಡ್ಡ ಕುಸಿತದಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್​ ನಾಪತ್ತೆಯಾಗಿದ್ದಾರೆ. ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇದೀಗ ಕೊಚ್ಚಿ ಹೋದವರ ಬಗ್ಗೆ ಮಹತ್ವದ ಅಪ್ಡೇಟ್​​ ಸಿಕ್ಕಿದೆ.

ಶಿರೂರು ಗುಡ್ಡ ಕುಸಿತ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕನದ್ದು ಎಂಬ ಶಂಕೆ
ಗುಡ್ಡ ಕುಸಿತ, ಲಾರಿ ಚಾಲಕ ಅರ್ಜುನ್​
ವಿವೇಕ ಬಿರಾದಾರ
|

Updated on:Aug 07, 2024 | 8:36 AM

Share

ಉತ್ತರ ಕನ್ನಡ, ಆಗಸ್ಟ್​​ 07: ಅಂಕೋಲಾ (Ankola) ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು (Shirur landslide) 11 ಜನ ಮೃತಪಟ್ಟಿದ್ದಾರೆ. ಎಂಟು ಮಂದಿ ಮೃತದೇಹ ಪತ್ತೆಯಾಗಿದ್ದು, ಇನ್ನೂ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಇದೀಗ ಶಿರೂರು ಗುಡ್ಡ ಕುಸಿತದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಅಂತ ಇನ್ನೂ ದೃಢವಾಗಿಲ್ಲ.

ಮೃತದೇಹವು ಗುಡ್ಡ ಕುಸಿತದಲ್ಲಿ ಮೃತಪಟ್ಟದವರದ್ದೇ ಅಥವಾ ಅಲ್ಲವೇ ಎಂಬುದನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ.

ಜುಲೈ 16 ರಂದು ಸಂಭಿವಿಸಿದ್ದ ಗುಡ್ಡ ಭೂಕುಸಿತದಲ್ಲಿ ಕೇರಳದ ಕೋಝಿಕ್ಕೋಡ್ ಮೂಲದ ಲಾರಿ ಚಾಲಕ ಅರ್ಜುನ್ ನಾಪತ್ತೆಯಾಗಿದ್ದಾರೆ. ಅರ್ಜುನ್​ ಲಾರಿ ಸಮೇತ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಮೇರೆಗೆ ಹುಡುಕಾಟ ನಡೆಸಲಾಗಿತ್ತು. ಸತತ 13 ದಿನಗಳ ಕಾಲ ಹುಡುಕಾಟ ನಡೆಸಿದರೂ ಅರ್ಜುನ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಪ್ರತಿಕೂಲ ಹವಾಮಾನದಿಂದಾಗಿ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ:  ಶಿರೂರು ಗುಡ್ಡ ಕುಸಿತ: ಮೃತ ದೇಹ ಹುಡುಕಿ ಕುಟುಂಬಸ್ಥರಿಗೆ ನೀಡುವ ಪಣತೊಟ್ಟ ಈಜು ತಜ್ಞ

ಭೂಕುಸಿತದಿಂದ ನದಿಯಲ್ಲಿ ಶೇಖರಣೆಯಾದ ಮಣ್ಣಿನಡಿ ಹೂತು ಹೋಗಿದ್ದ ಲಾರಿಯೊಳಗೆ ಅರ್ಜುನ್ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಏತನ್ಮಧ್ಯೆ, ವಿವಿಧ ಸಾಧನಗಳನ್ನು ಬಳಸಿ ಶೋಧ ನಡೆಸಿದಾಗ ನದಿಪಾತ್ರದಲ್ಲಿ ಯಾವುದೇ ದೇಹ ಪತ್ತೆಯಾಗಿಲ್ಲ. ಗಂಗಾವಳಿ ನದಿಯಲ್ಲಿ ಹೆಚ್ಚಿನ ನೀರಿನ ಪ್ರವಾಹ ಮತ್ತು ನದಿಯ ಆಳವು ರಕ್ಷಣಾ ತಂಡಗಳಿಗೆ ಪ್ರಮುಖ ಸವಾಲಾಗಿದೆ.

ರಕ್ಷಣಾ ಕಾರ್ಯ ನಿಂತಿಲ್ಲ ಮುಂದುವರೆದಿದೆ

ಗುಡ್ಡ ಕುಸಿತದಲ್ಲಿ ನಾಪತ್ತೆಯಾದವರಿಗಾಗಿ ಪತ್ತೆ ಕಾರ್ಯ ಮುಂದುವರೆದಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​ಗೆ ತಿಳಿಸಿದೆ. ಸರ್ಕಾರ ಪರ ವಕೀಲ ಅಡ್ವೋಕೇಟ್​ ಜನರಲ್​ ಶಶಿಕಿರಣ್ ​ಅವರು ಸೋಮವಾರ ನ್ಯಾಯಮೂರ್ತಿ ಎನ್​. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್​ ಅವರಿದ್ದ ವಿಭಾಗೀಯ ಪೀಠಕ್ಕೆ ತಿಳಿಸಿದರು.

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸಿಬ್ಬಂದಿ ಎಲ್ಲ ರೀತಿಯ ಅಗತ್ಯವಿರುವ ಕ್ರಮಗಳನ್ನು ಕೊಂಡಿದ್ದಾರೆ. ಮೂವರು ಕಣ್ಮರೆಯಾಗಿದ್ದು 19 ದಿನಗಳು ಕಳೆದಿವೆ. ಜೊತೆಗೆ ಅತೀ ಹೆಚ್ಚು ಮಳೆಯ ಕಾರಣದಿಂದ ಹವಾಮಾನ ಇಲಾಖೆ ರೆಡ್​ ಅಲರ್ಟ್​ ನೀಡಿದೆ. ಹೀಗಾಗಿ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಳಿಕ ಮುಂದುವರೆಸಲಾಗುವುದು ಎಂದು ಪೀಠಕ್ಕೆ ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Wed, 7 August 24

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ