AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಆರಂಭ ಆಗುತ್ತಿದ್ದಂತೆ ಉತ್ತರ ಕನ್ನಡದಲ್ಲಿ ಹೆಚ್ಚಿದ ಆತಂಕ: ಭರವಸೆ ಈಡೆರಿಸದ ಸಿಎಂ

ಕಳೆದ ವರ್ಷದ ಶಿರೂರು ಗುಡ್ಡ ಕುಸಿತದ ನಂತರ, ಗುಡ್ಡ ಕುಸಿತಕ್ಕೆ ಶಾಶ್ವತ ಪರಿಹಾರ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸ ನೀಡಿದ್ದರು. ಆದರೆ, ಇನ್ನೂವರೆಗೂ ಯಾವುದೇ ನಿರ್ದಿಷ್ಟ ಕ್ರಮ ಕೈಗೊಳ್ಳಲಾಗಿಲ್ಲ. ಈಗ ಮತ್ತೆ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಜನರು ಆತಂಕದಲ್ಲಿದ್ದಾರೆ. ಶಿರೂರು ದುರಂತದ ಪುನರಾವರ್ತನೆಯನ್ನು ತಪ್ಪಿಸಲು ತಕ್ಷಣದ ಕ್ರಮ ಅಗತ್ಯ.

ಮಳೆ ಆರಂಭ ಆಗುತ್ತಿದ್ದಂತೆ ಉತ್ತರ ಕನ್ನಡದಲ್ಲಿ ಹೆಚ್ಚಿದ ಆತಂಕ: ಭರವಸೆ ಈಡೆರಿಸದ ಸಿಎಂ
ಶಿರೂರು ಗುಡ್ಡ ಕುಸಿತ, ಸಿಎಂ ಸಿದ್ದರಾಮಯ್ಯ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:May 19, 2025 | 1:21 PM

Share

ಕಾರವಾರ, ಮೇ 19: ರಾಜ್ಯದ ಹಲವು ಕಡೆ ಜೋರು ಮಳೆಯಾಗಿತ್ತಿದೆ (Rain). ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ, ಕಳೆದ ವರ್ಷ ಮಳೆಗಾಲದ  ಸಂದರ್ಭದಲ್ಲಿ ಸಂಭವಿಸಿದ್ದ ಶಿರೂರು ಗುಡ್ಡ ಕುಸಿತ (Shirur Landslide) ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ದುರಂತ ಸಂಭವಿಸಿದಾಗ ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಗುಡ್ಡ ಕುಸಿತಕ್ಕೆ ಶಾಶ್ವತ ಪರಿಹಾರ ನೀಡುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಭರವಸೆ ಕಾರ್ಯರೂಪಕ್ಕೆ ಬಂದಿಲ್ಲ.

ಕಳೆದ ವರ್ಷ ಸುರಿದ ಅಬ್ಬರದ ಮಳೆಯಿಂದ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಸಾವು ನೋವು ಸಂಭವಿಸಿದ್ದವು. ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ 11 ಜನರ ಪೈಕಿ ಇಬ್ಬರ ಸಣ್ಣ ಸುಳಿವು ಕೂಡ ಇದುವರೆಗೂ ಸಿಕ್ಕಿಲ್ಲ. ಇದರ ಬೆನ್ನಲ್ಲೆ, ಈ ವರ್ಷ ಮೇ ಎರಡನೇ ವಾರದಿಂದ ರಾಜ್ಯದಲ್ಲಿ ಅಬ್ಬರದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಹೇಳಿದಂತೆ ಕಳೆದ ಬಾರಿಗಿಂತ, ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಿಳುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

ಈ ವರ್ಷ ಮತ್ತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಅವಾಂತರ ಆಗುವ ಆತಂಕ ಜಿಲ್ಲೆಯ ಜನರನ್ನು ಕಾಡುತ್ತಿದೆ. ಕಳೆದ ವರ್ಷ ಶಿರೂರುಗೆ ಭೇಟಿ ನೀಡಿದ್ದ ಸಿಎಂ ಸಿದ್ಧರಾಮಯ್ಯ ಅವರು, ಜಿಲ್ಲೆಯಲ್ಲಿನ 339 ಗುಡ್ಡ ಕುಸಿತದ ಪೈಕಿ, ಸುಮಾರು 100 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಥಮ ಹಂತದ ಶಾಶ್ವತ ಪರಿಹಾರ ನೀಡುವ ಭರವಸೆ ನೀಡಿದ್ದರು. ಹಣ ಬಿಡುಗಡೆ ಮಾಡುವುದಾಗಿ ಹೇಳಿ, ಮತ್ತೆ ಸರ್ವೇ ಮಾಡಿಸಿ, ಮೂರು ಬಾರಿ ಜಿಲ್ಲಾಡಳಿತದಿಂದ ಮಾಹಿತಿಯನ್ನು ತರಿಸಿಕೊಂಡಿದ್ದರು. ಆದರೆ, ಇದುವರೆಗೂ ಒಂದೇ ಒಂದು ರೂಪಾಯಿ ಹಣ ಸರ್ಕಾರ ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ
Image
ಶಿರೂರು ದುರಂತ: 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಅರ್ಜುನ್ ಲಾರಿ ಪತ್ತೆ
Image
ಶಿರೂರು ಗುಡ್ಡ ಕುಸಿತ: ಕಾಣೆಯಾಗಿರುವ ಜಗನಾಥ್​ ಪುತ್ರಿಗೆ BHELನಲ್ಲಿ ನೌಕರಿ
Image
ಶಿರೂರು ಗುಡ್ಡ ಕುಸಿತ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ
Image
ಶಿರೂರು ಗುಡ್ಡ ಕುಸಿತ: ಸಮುದ್ರದಲ್ಲಿ ಮೃತದೇಹ ಪತ್ತೆ, ಲಾರಿ ಚಾಲಕನದ್ದು?

ಇನ್ನೂ ಈ ವಿಚಾರವಾಗಿ ಕಳೆದ ಎರಡು ತಿಂಗಳ ಹಿಂದೆ ಜಿಲ್ಲಾ ಉಸ್ತುವರಿ ಸಚಿವ ಮಂಕಾಳು ವೈದ್ಯ ಅವರಿಗೆ ಪ್ರಶ್ನಸಿದಾಗ, ರಾಜ್ಯ ಸರ್ಕಾರದಿಂದ 10 ಕೋಟಿ ಹಣ ಬಿಡುಗಡೆ ಆಗಿದ್ದು ಆದಷ್ಟು ಬೇಗ ಕಾಮಗಾರಿ ಆರಂಭ ಮಾಡಲಾಗುವುದು ಎಂದು ತಿಳಿಸಿದ್ದರು. ಈಗ ಮಳೆಗಾಲ ಆರಂಭ ಆಗುತ್ತಿದ್ದಂತೆ ಯೂ ಟರ್ನ್ ಹೊಡೆದಿರುವ ಸಚಿವ ಮಂಕಾಳು ವೈದ್ಯ, ಗುಡ್ಡ ಕುಸಿತ ತಡೆಗೆ ಎನ್.ಎಚ್.ಎ.ಐ ಮತ್ತು ಕೇಂದ್ರ ಸರ್ಕಾರ ಕಾಳಜಿ ವಹಿಸಬೇಕಿತ್ತು. ಆದರೆ, ಇದುವರೆಗೂ ಏನನ್ನು ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ

ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿರುವ ಬೆನ್ನಲ್ಲೆ, ಉತ್ತರ ಕನ್ನಡ ಜಿಲ್ಲೆಯ ಜನರ ರಕ್ಷಣೆಗೆ ಮುಂದಾಗಬೇಕಿದ್ದ ಸಚಿವ ಮಂಕಾಳು ವೈದ್ಯ, ರಾಜಕೀಯ ಮಾಡಲು ಮುಂದಾಗಿರುವುದು ನಿಜಕ್ಕೂ ವಿಷಾದನೀಯ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:29 am, Mon, 19 May 25