ಶಿರೂರು ಗುಡ್ಡ ಕುಸಿತ; ಲಾರಿ ಕೊಚ್ಚಿ ಹೋದ 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಬಿಡಿ ಭಾಗ ಪತ್ತೆ

ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಇಂದು(ಮಂಗಳವಾರ) ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿದೆ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ.

ಶಿರೂರು ಗುಡ್ಡ ಕುಸಿತ; ಲಾರಿ ಕೊಚ್ಚಿ ಹೋದ 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಬಿಡಿ ಭಾಗ ಪತ್ತೆ
ಶಿರೂರು ಗುಡ್ಡ ಕುಸಿತ; ಲಾರಿ ಕೊಚ್ಚಿ ಹೋದ 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಬಿಡಿ ಭಾಗ ಪತ್ತೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 13, 2024 | 6:25 PM

ಉತ್ತರ ಕನ್ನಡ, ಆ.13: ಜುಲೈ 16 ರಂದು ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಗುಡ್ಡ ಕುಸಿತದಲ್ಲಿ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿತ್ತು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ರವರಿಗಾಗಿ ಮುಳುಗು ತಜ್ಞರಿಂದ ಶೋಧಕಾರ್ಯ ನಡೆಯುತ್ತಿದೆ. ಈ ವೇಳೆ ನಾಪತ್ತೆಯಾಗಿದ್ದ ಲಾರಿಯ ಜಾಕ್ ಪತ್ತೆಯಾಗಿದೆ.

ಲಾರಿ ಕೊಚ್ಚಿ ಹೋದ 28 ದಿನಗಳ ಬಳಿಕ ಬಿಡಿ ಭಾಗ ಪತ್ತೆ

ಇನ್ನು ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಇಂದು(ಮಂಗಳವಾರ) ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿದೆ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದಾರೆ. 29 ನೇ ದಿನ ಗಂಗಾವಳಿ ನದಿಯಲ್ಲಿ ಈಜು ತಜ್ಞ ಈಶ್ವರ ಮಲ್ಪೆ ತಂಡದಿಂದ ಶೋಧ ಕಾರ್ಯ ಮುಂದುವರೆದಿದ್ದು, ಲಾರಿಯ ಎರಡು ಬಿಡಿ ಭಾಗಗಳಾದ ಲಾರಿ ಬಾಗಿಲಿನ ಕೀಲು ಹಾಗೂ ಜಾಕ್ ಪತ್ತೆಯಾಗಿದೆ.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಮೃತ ದೇಹ ಹುಡುಕಿ ಕುಟುಂಬಸ್ಥರಿಗೆ ನೀಡುವ ಪಣತೊಟ್ಟ ಈಜು ತಜ್ಞ‘

ಕಳೆದ ತಿಂಗಳು ಪತ್ತೆಯಾಗಿತ್ತು ಕಾಣೆಯಾದ ಟ್ರಕ್​ನಲ್ಲಿದ್ದ ಅಕೇಶಿಯ ಮರದ ತುಂಡು

ಗಂಗಾವಳಿ ನದಿಯಲ್ಲಿ ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಿದ್ದ ವೇಳೆ ಫೋಕ್ಲೇನ್ ಬಕೆಟ್​ಗೆ ಕಬ್ಬಿಣ ಬಡಿದಿತ್ತು. ಈ ಹಿನ್ನಲೆ ನದಿಯಲ್ಲಿ ವಾಹನ ಇದೆ ಎನ್ನಲಾಗಿತ್ತು. ಬಳಿಕ ಕಳೆದ ಜಲೈ 25 ಗಂಗಾವಳಿ ನದಿಯಲ್ಲಿ ಅರ್ಜುನ್ ಟ್ರಕ್​ನಲ್ಲಿದ್ದ ಅಕೇಶಿಯ ಮರದ ತುಂಡೊಂದು ಪತ್ತೆಯಾಗಿತ್ತು. ತೇಲಿಬಂದ ಅಕೇಶಿಯ ತುಂಡಲ್ಲಿ ಅರಣ್ಯ ಇಲಾಖೆಯ ಮಾರ್ಕ್​ ಇರುವುದರಿಂದ ಸ್ಥಳಕ್ಕೆ ಕಾಣೆಯಾದ ಟ್ರಕ್ ಚಾಲಕ ಅರ್ಜುನ್ ಕಡೆಯ ಟ್ರಕ್ ಮಾಲೀಕರು ತೆರಳಿ ದೃಢಪಡಿಸಿದ್ದರು. ಆ ಮೂಲಕ ಲಾರಿ ನದಿಯಲ್ಲಿಯೇ ಇರುವುದು ಖಚಿತವಾಗಿತ್ತು. ಇದೀಗ ಲಾರಿಯ ಜಾಕ್​ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Tue, 13 August 24

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ