ಶಿರೂರು ಗುಡ್ಡ ಕುಸಿತ: 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಯ್ತು ಅರ್ಜುನ್ ಲಾರಿ

ಜುಲೈ 16 ರಂದು ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಗುಡ್ಡ ಕುಸಿತದಲ್ಲಿ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಉಳಿದ ಮೂವರಿಗಾಗಿ ಶೋಧಕಾರ್ಯ ನಡೆಸಲಾಗಿತ್ತು. ಇದೀಗ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆಯಾಗಿದೆ.

ಶಿರೂರು ಗುಡ್ಡ ಕುಸಿತ: 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಯ್ತು ಅರ್ಜುನ್ ಲಾರಿ
ಶಿರೂರು ಗುಡ್ಡಕುಸಿತ; ಅರ್ಜುನ್ ಲಾರಿ ಪತ್ತೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 21, 2024 | 3:50 PM

ಉತ್ತರ ಕನ್ನಡ, ಸೆ.21: ಜಿಲ್ಲೆಯ ಅಂಕೋಲಾ(Ankola) ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಮೂರನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಅರ್ಜುನ್ ಲಾರಿ ಪತ್ತೆಯಾಗಿದೆ.

ಹೌದು, ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಲಾರಿ, ಇಂದು ನಡೆಸಿದ 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಲಾರಿಗೆ ಹಗ್ಗ ಕಟ್ಟಿ ಮೇಲೆ ಎಳೆಯಲು ವ್ಯವಸ್ಥೆ ಮಾಡಿದ್ದು, ಲಾರಿ ಮೇಲೆತ್ತುವ ಕಾರ್ಯಾಚರಣೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ; ಲಾರಿ ಕೊಚ್ಚಿ ಹೋದ 28 ದಿನಗಳ ಬಳಿಕ ಗಂಗಾವಳಿ ನದಿಯಲ್ಲಿ ಬಿಡಿ ಭಾಗ ಪತ್ತೆ

ಇನ್ನು ಕಳೆದ ಆಗಸ್ಟ್​ 13 ರಂದು ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಪತ್ತೆಯಾಗಿತ್ತು. ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿದೆ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದರು. ಬಳಿಕ ಲಾರಿಯ ಎರಡು ಬಿಡಿ ಭಾಗಗಳಾದ ಲಾರಿ ಬಾಗಿಲಿನ ಕೀಲು ಕೂಡ ಪತ್ತೆಯಾಗಿತ್ತು. ಅದರಂತೆ ಇಂದು ಲಾರಿ ಸಿಕ್ಕಿದ್ದು, ಮೇಲೆತ್ತುವ ಕಾರ್ಯ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Sat, 21 September 24

ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!