ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ
ಜುಲೈ 16 ರಂದು ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ.
ಉತ್ತರ ಕನ್ನಡ, ಸೆ.25: ಅಂಕೋಲಾ(Ankola) ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಪತ್ತೆ ಮಾಡಲಾಗಿತ್ತು. ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ ಪತ್ತೆಯಾಗಿದೆ. ಇನ್ನೂ ಇಬ್ಬರು ಕಣ್ಮರೆಯಾದವರ ಬಗ್ಗೆ ಶೋಧ ನಡೆಯಬೇಕಿದೆ
72 ದಿನಗಳ ನಂತರ ನದಿಯಲ್ಲಿ ಲಾರಿ, ಇಬ್ಬರು ಮೃತದೇಹಗಳು ಪತ್ತೆ
ಹೌದು, ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿ ಪತ್ತೆಯಾಗಿತ್ತು. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಗಂಗಾವಳಿ ನದಿಯಿಂದ ಲಾರಿ ಹಾಗೂ ಸಿಕ್ಕಿರುವ ಮೃತದೇಹವನ್ನು ಎತ್ತುವ ಕಾರ್ಯ ಮುಂದುವರೆದಿದೆ. ಕಳೆದ 72 ದಿನಗಳ ನಂತರ ನದಿಯಲ್ಲಿ ಲಾರಿ ಹಾಗೂ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಗುಡ್ಡ ಕುಸಿತದ ರಭಸಕ್ಕೆ ನದಿಗೆ ಬಿದ್ದು ಲಾರಿ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಯ್ತು ಅರ್ಜುನ್ ಲಾರಿ
ಇಬ್ಬರು ಕಣ್ಮರೆಯಾದವರ ಬಗ್ಗೆ ನಡೆಯಬೇಕಿದೆ ಶೋಧ
ಕಳೆದ ಆರು ದಿನಗಳಿಂದ ಈ ಕಾರ್ಯಾಚರಣೆ ನಡೆಯುತ್ತಿದ್ದು, ಬಾರ್ಜ್ ಮೂಲಕ ನದಿಯಲ್ಲಿ ಲಾರಿ ಹಾಗೂ ನಾಪತ್ತೆಯಾದ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಮೊನ್ನೆಯಷ್ಟೇ ನದಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಅರ್ಜುನ್ ಲಾರಿ ಪತ್ತೆಯಾಗಿತ್ತು. ಇದೀಗ ಅರ್ಜುನ ಮೃತದೇಹ ಸಿಕ್ಕಿದ್ದು, ಗುಡ್ಡಕುಸಿತದಲ್ಲಿ ಸಿಕ್ಕು ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ. ಈ ಮೂಲಕ ಗುಡ್ಡಕುಸಿತ ಭೀಕರತೆಯನ್ನು ಈ ಲಾರಿ ತೋರಿಸುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:54 pm, Wed, 25 September 24