ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ

ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಇಲ್ಲಿಯವರೆಗೆ ಒಟ್ಟು ಹತ್ತು ಜನರು ಮೃತಪಟ್ಟಿದ್ದು, ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಈ ಮಧ್ಯೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಪತ್ತೆಯಾಗಿದ್ದ ಮೃತದೇಹ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಅವರದು ಎಂದು ತಿಳಿದುಬಂದಿದೆ.

ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ
ಮೃತ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 25, 2024 | 7:41 PM

ಉತ್ತರ ಕನ್ನಡ, ಜು.25: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತದೇಹ ಪತ್ತೆಯಾಗಿದ್ದು, ಡಿಎನ್​ಎ ವರದಿಯಲ್ಲಿ ಶರವಣನ್ ಬಾಡಿ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಕಳೆದ ನಾಲ್ಕು ದಿನಗಳ ಹಿಂದೆ ಗಂಗೆಕೊಳದಲ್ಲಿ ಹೊಟ್ಟೆಯ ಕೆಳಭಾಗದ ದೇಹ ಮಾತ್ರ ಪತ್ತೆಯಾಗಿತ್ತು. ಇದೀಗ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್ ಮೃತ ದೇಹ ಎಂದು ಉತ್ತರ ಕನ್ನಡ ಎಸ್​ಪಿ ನಾರಾಯಣ್ ದೃಢ ಪಡಿಸಿದ್ದಾರೆ.

ಅಂಕೋಲಾ ಪೊಲೀಸ್ ಠಾಣೆಗೆ ಮೃತ ಶರವಣನ್​ ಕುರಿತು ದೂರು ನೀಡಿದ್ದ ಮಾವ

ಗುಡ್ಡ ಕುಸಿತವಾದ ಪಕ್ಕದಲ್ಲೆ ಆತನ ಟ್ಯಾಂಕರ್ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಚಾಲಕ ಶರವಣನ್​ ನಾಪತ್ತೆ ಆಗಿದ್ದಾರೆ ಎಂದು ಅವರ ಮಾವ ಸೆಂದೀಲ್ ಎಂಬುವವರು ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕುರಿತು ಮಾತನಾಡಿದ್ದ ಸೆಂದೀಲ್ , ‘ಶರವಣನ್ ಮೊಬೈಲ್​ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದ್ರೆ, ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದಿದ್ದರು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಗಂಗಾವಳಿ ನದಿಯಲ್ಲಿ ತೇಲಿಬಂತು ಅರ್ಜುನ್ ಟ್ರಕ್​ನಲ್ಲಿದ್ದ ಮರದ ತುಂಡು

ಇನ್ನು ತಮಿಳುನಾಡು ಮೂಲದ ಲಾರಿ ಚಾಲಕ ಶವರಣ ನಾಪತ್ತೆ ಆದ ಕುರಿತು ದೂರು ದಾಖಲಿಸುತ್ತಿದ್ದಂತೆ ಆತನ ಸಂಬಂಧಿಕರು ಶಿರೂರುಗೆ ಬಂದಿದ್ದರು. ಇದೀಗ ನಾಲ್ಕು ದಿನದ ಹಿಂದೆ ಸಿಕ್ಕಿದ್ದ ಅರ್ಧ ದೇಹ, ಶರವಣನ್​​ ಅವರದ್ದಾಗಿದೆ ಎಂದು ಎಸ್ಪಿ ಖಚಿತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Thu, 25 July 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ