ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ, ಏನಿದು ಯಂತ್ರ?

ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Hill Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಣ್ಣು ತೆರವು ಕಾರ್ಯಾಚರಣೆ ಮುಗಿದಿದೆ. ನದಿಯಲ್ಲಿ ಇನ್ನುಳಿದ ಮೃತ ದೇಹಗಳು ಇರುವ ಶಂಕೆ ವ್ಯಕ್ತವಾಗಿದ್ದು, ನಾಳೆ(ಜು.24)ಯಿಂದ ಗಂಗಾವಳಿ ನದಿಯಲ್ಲಿ ಪೊಕಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ, ಏನಿದು ಯಂತ್ರ?
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದ ಮೂವರ ಮೃತ ದೇಹ ಪತ್ತೆಗೆ ‘ಪೊಕಲೇನ್’ಬಳಕೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 23, 2024 | 9:32 PM

ಉತ್ತರ ಕನ್ನಡ, ಜು.23: ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗುಡ್ಡ ಕುಸಿತ (Hill Collapse) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇನ್ನುಳಿದಂತೆ ನಾಪತ್ತೆಯಾದ ಮೂವರ ಮೃತದೇಹ ಪತ್ತೆಗೆ ನಾಳೆ(ಜು.24)ಯಿಂದ ಗಂಗಾವಳಿ ನದಿಯಲ್ಲಿ ಪೊಕಲೇನ್ (poclain) ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಇಂದು(ಮಂಗಳವಾರ) ಅಂಕೋಲಾದಲ್ಲಿ ಮಾತನಾಡಿದ ಅವರು, ಮಣ್ಣು ತೆರವು ಕಾರ್ಯಾಚರಣೆ ಇಂದು ಮುಗಿದಿದೆ. ಗುಡ್ಡದ ಪಕ್ಕ ಕೇರಳದ ಲಾರಿ ಸಿಕ್ಕಿಲ್ಲ. ನದಿ ಪಕ್ಕದಲ್ಲಿ ಲಾರಿ ಬಿದ್ದಿರುವ ಸಾಧ್ಯತೆಯಿದೆ. ನಾಳೆ ಗೋಕಾಕ್​ನಿಂದ ಪೋಕ್​ಲೇನ್ ವಾಹನ ಬರುತ್ತಿದೆ. ನದಿಯೊಳಗೆ ಮಣ್ಣು ತೆಗೆದು ಕಾರ್ಯಾಚರಣೆ ನಡೆಸಲಿದೆ. ನಾಳೆ ಬಹುತೇಕ ಕೇರಳದ ಲಾರಿ ಸಿಗುವ ಸಾಧ್ಯತೆಯಿದ್ದು, ಕೇರಳದವರು ಕೇಸ್ ಮಾಡುವ ಬದಲು ನಮಗೆ ಸಹಕರಿಸಬೇಕು ಎಂದರು.

ಇದನ್ನೂ ಓದಿ:ಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕನ ಕುಟುಂಬ

ಏನಿದು ಪೊಕಲೇನ್ ಯಂತ್ರ?

ಈ ಪೊಕಲೇನ್ ವೆಹಿಕಲ್, ‘ನದಿಯ ಆಳದಲ್ಲಿರುವ ಮಣ್ಣನ್ನು ತೆರವು ಮಾಡುವ ಯಾಂತ್ರಿಕ ವಾಹನವಾಗಿದೆ. ನದಿಯಲ್ಲಿ ಇನ್ನುಳಿದ ಮೃತ ದೇಹಗಳು ಇರುವ ಶಂಕೆ ವ್ಯಕ್ತವಾಗಿದ್ದು, ಕರ್ನಾಟಕದ ಇರ್ವರು ಹಾಗೂ ಓರ್ವ ಕೇರಳ ಮೂಲದ ವ್ಯಕ್ತಿಯ  ಮೃತ ದೇಹಗಳನ್ನು ಪತ್ತೆ ಮಾಡಬೇಕಿರುವ ಹಿನ್ನಲೆ ಶಾಸಕ ಸತೀಶ್ ಸೈಲ್ ‘ಪೊಕಲೇನ್’ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ 60 ಅಡಿ ಉದ್ದವಾದ ಡೀಪ್ ಪೊಕಲೇನ್ ಗೋಕಾಕಲ್ಲಿತ್ತು. ರಾಷ್ಟ್ರೀಯ ಹೆದ್ದಾರಿಯ ಮೇಲಿನ ಮಣ್ಣನ್ನು ತೆರವು ಮಾಡಲಾಗಿದ್ದು, ದೊಡ್ಡ ವಾಹನ ಸಂಚಾರಕ್ಕೆ ಅನುವು ಮಾಡಲಾಗಿದೆ. ಹೀಗಾಗಿ  ಪೊಕಲೇನ್ ಮೂಲಕ ನಾಳೆಯಿಂದ ಕಾರ್ಯಚರಣೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್