ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ

ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗೆ ಆಗ್ರಹಿಸಿ ಉತ್ತರಕನ್ನಡದ ಜನರು ಮಾಡುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಉತ್ತರ ಕನ್ನಡ: ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಬೆಂಬಲ ಸೂಚಿಸಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
Edited By: ವಿವೇಕ ಬಿರಾದಾರ

Updated on: Jul 24, 2022 | 8:46 PM

ಉತ್ತರ ಕನ್ನಡ: ಸುಸಜ್ಜಿತ ತುರ್ತು ಚಿಕಿತ್ಸಾ ಆಸ್ಪತ್ರೆಗೆ (Multi Specialty Hospital for Uttara Kannada District) ಆಗ್ರಹಿಸಿ ಉತ್ತರಕನ್ನಡದ (Uttar Kannada) ಜನರು ಮಾಡುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಹೇಳಿದ್ದಾರೆ.

“ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ.” ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು  ಎನ್ನುವ ಮಾತಿಗೆ ಇದೀಗ ಹೊಸ ಬಲ ಬಂದಿದೆ. ಇಷ್ಟು ದಿನ ನಾಲ್ಕು ಜನರು ಒಂದೆಡೆ ಸೇರಿದಾಗಲೆಲ್ಲಾ ಕೇಳಿ ಬರುತ್ತಿದ್ದ ಒತ್ತಾಯ ಇದೀಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಹೋರಾಟಕ್ಕಾಗಿ ಅಗಸ್ಟ್ 1ರಿಂದ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನವನ್ನು ಜಿಲ್ಲೆಯ ಜನರು ಆರಂಭಿಸಲಿದ್ದಾರೆ. ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಅಭಿಯಾನ ಶುರುಮಾಡಲು ಕಾರವಾರ ನಿವಾಸಿಗಳೂ ಸೇರಿದಂತೆ ಜಿಲ್ಲೆಯ ಜನರು ಮುಂದಾಗಿದ್ದಾರೆ.

Published On - 8:46 pm, Sun, 24 July 22

TV9 Web

TV9 Kannada

Read More
Loading...
Unable to load recommendations.
Follow Us