ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್

ಶಿರಸಿ ಮಾರ್ಗವಾಗಿ ಕುಮಟಾಗೆ ತೆರಳುವ ಪ್ರಯಾಣಿಕರೇ ಗಮನಿಸಿ. ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಶಿರಸಿ- ಕುಮಟಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ (NH 766E) ಬಂದ್ ಮಾಡಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ ಹೊರಡಿಸಿದೆ.

ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್
ರಾಷ್ಟ್ರೀಯ ಹೆದ್ದಾರಿ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಸುಷ್ಮಾ ಚಕ್ರೆ

Updated on:Nov 27, 2024 | 10:29 PM

ಶಿರಸಿ: ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ರಾಷ್ಟ್ರೀಯ ಹೆದ್ದಾರಿ 766E ಬಂದ್ ಆಗಲಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಶಿರಸಿ ನಡುವಿನ NH 766E ಬಂದ್ ಆಗಲಿದೆ. ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಎಸ್​ಪಿ ಎಂ. ನಾರಾಯಣ ಪ್ರಕಟಣೆ ಹೊರಡಿಸಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

ಉತ್ತರ ಕನ್ನಡ ಜಿಲ್ಲಾಧಿಕಾರಿಯಾದ ಲಕ್ಷ್ಮೀಪ್ರಿಯಾ ಅವರ ಸೂಚನೆ ಮೇರೆಗೆ ಎಸ್​ಪಿ ನಾರಾಯಣ ಈ ಕ್ರಮ ಕೈಗೊಂಡಿದ್ದಾರೆ. ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ 766Eನಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗುವುದು. ಶಿರಸಿ-ಕುಮಟಾ ಪ್ರಯಾಣಿಕರಿಗೆ ಸಿದ್ದಾಪುರ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ: ಶಿರಸಿಯಲ್ಲಿ ಹಣ್ಣು ಮಾರುವ ಮೋಹಿನಿ ಗೌಡರನ್ನು ಭೇಟಿಯಾದ ಪ್ರಧಾನಿ ಮೋದಿ; ಈ ಮಹಿಳೆಯ ಸಾಧನೆ ಏನು?

ಹಾಗೇ, ಅಂಕೋಲಾ-ಶಿರಸಿ ಮೂಲಕ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ಯಲ್ಲಿ ಸಂಚರಿಸಬಹುದು. ಹಾಗೂ ರಾಜ್ಯ ಹೆದ್ದಾರಿ 93ರಲ್ಲಿ ಎಲ್ಲ ಮಾದರಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Wed, 27 November 24

6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್