AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 19 ರಿಂದ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಪುರಾಣ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆಯು ಮಾರ್ಚ್​ 19 ರಿಂದ ಆರಂಭವಾಗಲಿದ್ದು, ಮಾರ್ಚ್ 27ರ ವರೆಗೆ ನಡೆಯಲಿದೆ.

ಮಾರ್ಚ್ 19 ರಿಂದ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ
ಶಿರಸಿ ಮಾರಿಕಾಂಬಾ ದೇವಿ ಜಾತ್ರೆ 2024 ದಿನಾಂಕ ಪ್ರಕಟ
TV9 Web
| Edited By: Rakesh Nayak Manchi|

Updated on: Jan 14, 2024 | 9:48 PM

Share

ಕಾರವಾರ, ಜ.14: ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ (Sirsi Marikamba Devi Fair) ದಿನಾಂಕ ನಿಗದಿಯಾಗಿದ್ದು, ದೇಗುಲದ ಆವರಣದಲ್ಲಿ ನಡೆದ ಸಭೆಯ ನಂತರ ದಿನಾಂಕ ಪ್ರಕಟಿಸಲಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಪುರಾಣ ಪ್ರಸಿದ್ಧ ಮಾರಿಕಾಂಬಾ ದೇವಿ ಜಾತ್ರೆಯು ಮಾರ್ಚ್​ 19 ರಿಂದ ಆರಂಭವಾಗಲಿದ್ದು, ಮಾರ್ಚ್ 27ರ ವರೆಗೆ ನಡೆಯಲಿದೆ.

ಜಾತ್ರಾ ಪೂರ್ವ ವಿಧಿ ವಿಧಾನಗಳು ಜನವರಿ 31 ರಿಂದ ನಡೆಯಲಿದೆ. ಮಾರ್ಚ್ 19 ರಂದು ದೇವಿಯ ರಥದ ಕಲಶ ಪ್ರತಿಷ್ಠೆ, ಕಲ್ಯಾಣ ಪ್ರತಿಷ್ಠೆ ನಡೆಯಲಿದೆ. ಮಾರ್ಚ್ 20 ರಂದು ಮಾರಿಕಾಂಬಾ ದೇವಿಯ ಅದ್ದೂರಿ ರಥೋತ್ಸವ ನಡೆಯಲಿದೆ. ಮಾರ್ಚ್ 21 ರಂದು ಜಾತ್ರಾ ಗದ್ದುಗೆಯಲ್ಲಿ ದೇವಿಯ ಪ್ರತಿಷ್ಠಾಪನೆಯಾಗಲಿದ್ದು, ಸೇವೆಗೆ ಅವಕಾಶ ಮಾಡಿಕೊಡಲಾಗುತ್ತದೆ.

ಇದನ್ನೂ ಓದಿ: ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ

ಒಟ್ಟು ಎಂಟು ದಿನಗಳ ಕಾಲ ಲಕ್ಷಾಂತರ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರಲಿದ್ದು, ಇದೇ ವೇಳೆ ಹರಕೆ ಸೇವೆ ಸಲ್ಲಿಸಲಾಗುತ್ತದೆ. ಜಿಲ್ಲೆ, ಹೊರ ಜಿಲ್ಲೆಗಳಿಂದ ಮಾತ್ರವಲ್ಲದೆ, ದೇಶ ವಿದೇಶಗಳಿಂದಲೂ ಭಕ್ತರು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ. ಮಾರ್ಚ್ 27 ರಂದು ಜಾತ್ರಾ ವಿಧಿ ವಿಧಾನಗಳು ಮುಕ್ತಯಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ