AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿ ಪೈಪ್ ಕಳ್ಳತನ ಕೇಸ್​: ನಗರಸಭೆ ಸದಸ್ಯರು-ಅಧಿಕಾರಿಗಳೇ ಕಳ್ಳರು, ತನಿಖೆಯಲ್ಲಿ ದೃಢ

ಶಿರಸಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಪೈಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಂಗತಿ ಹೊರಬಿದ್ದಿದೆ. ಪ್ರಕರಣದಲ್ಲಿ ಒಟ್ಟು 7 ಜನ ಆರೋಪಿಗಳಿರುವುದು ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ ಎಂದು ಉತ್ತರ ಕನ್ನಡ ಎಸ್​ಪಿ ಎಂ.ನಾರಾಯಣ್​ ಹೇಳಿದ್ದಾರೆ. ನಗರಸಭೆ ಸದಸ್ಯರು-ಅಧಿಕಾರಿಗಳೇ ಕಳ್ಳರು ಎಂಬುವುದು ತನಿಖೆಯಲ್ಲಿ ದೃಢವಾಗಿದೆ.

ಶಿರಸಿ ಪೈಪ್ ಕಳ್ಳತನ ಕೇಸ್​: ನಗರಸಭೆ ಸದಸ್ಯರು-ಅಧಿಕಾರಿಗಳೇ ಕಳ್ಳರು, ತನಿಖೆಯಲ್ಲಿ ದೃಢ
ಶಿರಸಿ ನಗರಸಭೆ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Jul 07, 2025 | 6:19 PM

Share

ಕಾರವಾರ, ಜುಲೈ 07: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಕುಡಿಯುವ ನೀರು ಪೂರೈಸುವ ಸುಮಾರು 60 ವರ್ಷಗಳ ಹಳೆಯ 900 ಮೀಟರ್ ಉದ್ದದ ಕಬ್ಬಿಣದ ಪೈಪ್​ಗಳನ್ನು ಕಳ್ಳತನ (Pipe Theft) ಮಾಡಿರುವಂತಹ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನ ಆರೋಪಿಗಳಿರುವುದು ಪೊಲೀಸ್ (police) ತನಿಖೆಯಲ್ಲಿ ಗೊತ್ತಾಗಿದೆ. ಪ್ರಕರಣ ದಾಖಲಿಸಿದ ವ್ಯಕ್ತಿಯೇ ಪ್ರಕರಣದ ಪ್ರಮುಖ ಆರೋಪಿ ಎಂಬುವುದು ಸಾಬೀತಾಗಿದೆ.

ಉತ್ತರ ಕನ್ನಡ ಎಸ್​ಪಿ ಎಂ.ನಾರಾಯಣ್ ಹೇಳಿದ್ದಿಷ್ಟು 

ಈ ಬಗ್ಗೆ ಮಾಧ್ಯಮದವರೊಂದಿಗೆ ಶಿರಸಿಯಲ್ಲಿ ಉತ್ತರ ಕನ್ನಡ ಎಸ್​ಪಿ ಎಂ.ನಾರಾಯಣ್ ಹೇಳಿಕೆ ನೀಡಿದ್ದು, ಪ್ರಕರಣದಲ್ಲಿ ಒಟ್ಟು 7 ಜನ ಆರೋಪಿಗಳಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಶಿವಮೊಗ್ಗ ಮೂಲದ ಗುತ್ತಿಗೆದಾರ ಸಯ್ಯದ್ ಜಕ್ರಿಯಾ ಪ್ರಮುಖ ಆರೋಪಿ. 7 ಜನ ಆರೋಪಿಗಳ ಪೈಕಿ 3 ನಗರಸಭೆ ಸದಸ್ಯರು ಮತ್ತು 3 ನಗರಸಭೆ ಅಧಿಕಾರಿಗಳಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಶಿರಸಿ ನಗರಕ್ಕೆ ನೀರು ಪೂರೈಸುತ್ತಿದ್ದ ಪೈಪ್​ಗಳು ಕಳ್ಳತನ: ಮೂವರು ಅಧಿಕಾರಿಗಳು ಪರಾರಿ

ಇದನ್ನೂ ಓದಿ
Image
ಪೊಲೀಸ್ ಐಡಿ ಕಾರ್ಡ್ ಹಿಡಿದು ಓಡಾಡುತ್ತಿದ್ದ ಕಳ್ಳಖಾಕಿ ಅರೆಸ್ಟ್
Image
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
Image
ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ: ರೆಡ್​ ಹ್ಯಾಂಡ್ ಆಗಿ ಸಿಕ್ಕಿಬಿದ್ದರು
Image
ಶಿರಸಿ ನಗರಕ್ಕೆ ನೀರು ಪೂರೈಸುತ್ತಿದ್ದ ಪೈಪ್​ಗಳು ಕಳ್ಳತನ

ಪೈಪ್ ಕಳ್ಳತನ ಪ್ರಕರಣ ಸಂಬಂಧ ಲೊಕಾಯುಕ್ತರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆಯಲ್ಲಿ ಸರ್ಕಾರಿ ಅಧಿಕಾರಿಗಳು ಶಾಮಿಲಾಗಿರುವುದು ಕಂಡು ಬಂದಿದೆ. ಈಗಾಗಲೇ ಚಾರ್ಜ್ ಶೀಟ್ ರೆಡಿಯಾಗಿದ್ದು ಕೋರ್ಟ್​ಗೆ ಸಲ್ಲಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ನಡೆದದ್ದೇನು?

ಕಳೆದ 60 ವರ್ಷಗಳ ಹಿಂದೆ ಶಿರಸಿ ನಗರಕ್ಕೆ ಕುಡಿಯುವ ನೀರು ಪೂರೈಸಲು, ಶಿರಸಿ ತಾಲೂಕಿನ ಕೆಂಗ್ರೆ ಹೊಳೆಯಿಂದ ಶಿರಸಿ ನಗರಕ್ಕೆ, ಸುಮಾರು 8 ಕಿ.ಮೀ ಕಾಸ್ಟ್ ಐರನ್ (ಗಟ್ಟಿ ಕಬ್ಬಿಣ) ಪೈಪ್​ಗಳನ್ನ ನೆಲಕ್ಕೆ ಹಾಕಿ ಪೈಪ್ ಲೈನ್ ಮಾಡಲಾಗಿತ್ತು. ಪೈಪ್ ಲೈನ್ ಬಹಳ ಹಳೆಯದಾಗಿದ್ದರಿಂದ ಕಳೆದ ಕೆಲ ವರ್ಷಗಳಿಂದ, ಪೈಪ್ ಲಿಕೇಜ್ ಜಾಸ್ತಿ ಆಗಿ ನೀರು ಪೊಲಾಗುವುದು ಹಾಗೂ ನೀರು ಪೂರೈಕೆಯಲ್ಲೂ ವ್ಯತ್ಯಯ ಆಗುತಿತ್ತು. ಹಾಗಾಗಿ ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2023 ರಲ್ಲಿ ಕೆಂಗ್ರೆ ಹೊಳೆಯಿಂದಲೆ ಹೊಸ ಪೈಪ್ ಲೈನ್ ಮಾಡಲಾಗಿತ್ತು.

ಇದನ್ನೂ ಓದಿ: ಸರ್ಕಾರಿ ನೌಕರಿ ಕೊಡಿಸುತ್ತೇನೆಂದು 200 ರೂ. ಪಡೆದಿದ್ದವ 30 ವರ್ಷಗಳ ನಂತರ ಅರೆಸ್ಟ್! ಶಿರಸಿಯಲ್ಲೊಂದು ಅಪರೂಪದ ಪ್ರಕರಣ

ಹಳೆಯ ಪೈಪ್ ಲೈನ್ ಕಳೆದ ಎರಡು ವರ್ಷಗಳಿಂದ ಉಪಯೋಗಿಸದೆ ಹಾಗೆ ಇತ್ತು. ಕಳೆದ ಕೆಲ ತಿಂಗಳ ಹಿಂದೆ ನಗರದ ಕೆಲವಡೆ ಅಭಿವೃದ್ಧಿ ಕಾಮಗಾರಿ ಸಂಬಂಧ ಪೈಪ್ ತೆಗೆಯಬೇಕಾದಾಗ, ನಗರಸಭೆಯವರು ಶಿವಮೊಗ್ಗ ಮೂಲದ ಜಕ್ರಿಯಾ ಎಂಬ ಗುತ್ತಿಗೆದಾರನಿಗೆ, ಪೈಪ್ ತೆಗೆದು ಮಾರಾಟ ಮಾಡಲು ಗುತ್ತಿಗೆಯನ್ನ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಸುಮಾರು 6 ಲಕ್ಷ ರೂ ನಗರಸಭೆಗೆ ಕೊಟ್ಟು ಪೈಪ್ ತೆಗೆದು ಮಾರಾಟ ಮಾಡಿದ್ದ ಎನ್ನಲಾಗಿತ್ತು. ಆದರೆ ಅದಾದ ಬಳಿಕ ನಗರಸಭೆಯಿಂದ ಯಾವುದೇ ಪರವಾನಗಿ ಹಾಗೂ ಗುತ್ತಿಗೆ ಪಡೆಯದೆ, ಶಿರಸಿ ನಗರದ ಹೊರವಲಯದಲ್ಲಿರುವ ಸುಮಾರು 116ಕ್ಕೂ ಹೆಚ್ಚು ಪೈಪ್ ಅಂದರೆ ಸುಮಾರು 900 ಮೀಟರ್, ನೆಲದಲ್ಲಿ ಹೊತ್ತಿದ್ದ ಪೈಪ್ ತೆಗೆದು ಮಾರಾಟ ಮಾಡಲಾಗಿತ್ತು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಠಾಣೆಯಲ್ಲಿ ಶಿರಸಿ ನಗರಸಭೆಯಿಂದ ಗುತ್ತಿಗೆದಾರ ಜಕ್ರಿಯಾ ಎಂಬುವವರ ಮೇಲೆ ಪ್ರಕರಣ ದಾಖಲಾಗಿತ್ತು. ಶಿರಸಿ ನಗರ ಸಭೆಯ ಆಯುಕ್ತ ಕಾಂತರಾಜು ಹಾಗೂ ಇಂಜಿನಿಯರ್​ಗಳಾದ ಸುಫಿಯನ್ ಮತ್ತು ಪ್ರಶಾಂತ ತಲೆ ಮರಿಸಿಕೊಂಡು ಪರಾರಿ ಆಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:17 pm, Mon, 7 July 25

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು