AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು

ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದ ಘಟನೆ ಜಿಲ್ಲೆಯ ಶಿರಸಿ-ಕುಮಟಾ(Sirsi-Kumta) ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ನಡೆದಿದೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದ್ದು, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿರಸಿಯಲ್ಲಿ ಭೀಕರ ಅಪಘಾತ; ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಹರಿದ ಕಾರು
ಶಿರಸಿ ಅಪಘಾತ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 09, 2024 | 4:50 PM

Share

ಉತ್ತರ ಕನ್ನಡ, ಏ.09: ಜಿಲ್ಲೆಯ ಶಿರಸಿ-ಕುಮಟಾ(Sirsi-Kumta) ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ(Accident) ವಾಗಿದ್ದು, ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದಿದೆ. ಘಟನೆಯಲ್ಲಿ ಓರ್ವ ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಕೆಆರ್​​​ಟಿಸಿ ಬಸ್​ ಹರಿದು ವ್ಯಕ್ತಿಯ ಕಾಲು ನಜ್ಜುಗುಜ್ಜು

ವಿಜಯನಗರ: ಜಿಲ್ಲೆಯ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಕೆಕೆಆರ್​​​ಟಿಸಿ ಬಸ್​ ಹರಿದು ವ್ಯಕ್ತಿಯ ಕಾಲು ನಜ್ಜುಗುಜ್ಜಾಗಿದೆ. ಹರಪನಹಳ್ಳಿ ತಾಲೂಕಿನ ಆಲದಹಳ್ಳಿಯ ಓಂಕಾರಪ್ಪ(52) ಅವರ ಕಾಲು ಕಟ್​ ಆಗಿದೆ. ರೇಷನ್ ಖರೀದಿಸಲು ಕೊಟ್ಟೂರು ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಗಾಯಾಳುವಿಗೆ ಕೊಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓಂಕಾರಪ್ಪ ಅಣ್ಣನ ಮಗ ಅಶೋಕ್ ನೀಡಿದ ದೂರಿನ ಮೇರೆಗೆ ಬಸ್ ಚಾಲಕ ಚಂದ್ರಕಾಂತ್ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: 2023ರಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಪುರುಷರೇ ಅಧಿಕ

ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್​ನಲ್ಲಿದ್ದ ತಂದೆ, ಮಗ ದುರ್ಮರಣ

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ತಂದೆ ಗಂಗಿರೆಡ್ಡಿ, ಮಗ ಆದರ್ಶ್​ ಮೃತರು. ಯುಗಾದಿ ಪ್ರಯುಕ್ತ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 9 April 24

Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ