ಉತ್ತರ ಕನ್ನಡ, ಏ.09: ಜಿಲ್ಲೆಯ ಶಿರಸಿ-ಕುಮಟಾ(Sirsi-Kumta) ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ(Accident) ವಾಗಿದ್ದು, ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದ ರಸ್ತೆ ಕಾರ್ಮಿಕರ ಮೇಲೆ ಕಾರೊಂದು ಹರಿದಿದೆ. ಘಟನೆಯಲ್ಲಿ ಓರ್ವ ಮಗು ಸೇರಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರು ಹೈದರಾಬಾದ್ ಮೆಹಬೂಬ ನಗರದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನು ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಜಯನಗರ: ಜಿಲ್ಲೆಯ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಕೆಕೆಆರ್ಟಿಸಿ ಬಸ್ ಹರಿದು ವ್ಯಕ್ತಿಯ ಕಾಲು ನಜ್ಜುಗುಜ್ಜಾಗಿದೆ. ಹರಪನಹಳ್ಳಿ ತಾಲೂಕಿನ ಆಲದಹಳ್ಳಿಯ ಓಂಕಾರಪ್ಪ(52) ಅವರ ಕಾಲು ಕಟ್ ಆಗಿದೆ. ರೇಷನ್ ಖರೀದಿಸಲು ಕೊಟ್ಟೂರು ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಗಾಯಾಳುವಿಗೆ ಕೊಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓಂಕಾರಪ್ಪ ಅಣ್ಣನ ಮಗ ಅಶೋಕ್ ನೀಡಿದ ದೂರಿನ ಮೇರೆಗೆ ಬಸ್ ಚಾಲಕ ಚಂದ್ರಕಾಂತ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರು: 2023ರಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಪುರುಷರೇ ಅಧಿಕ
ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ತಂದೆ ಗಂಗಿರೆಡ್ಡಿ, ಮಗ ಆದರ್ಶ್ ಮೃತರು. ಯುಗಾದಿ ಪ್ರಯುಕ್ತ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:42 pm, Tue, 9 April 24