AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾವಿ ನೀರಿಗೆ ಬೆಂಕಿ ಕಡ್ಡಿ ಗೀರಿದರೆ ಉರಿಯುತ್ತೆ ಬೆಂಕಿ! ವಿಚಿತ್ರ ವಿದ್ಯಮಾನಕ್ಕೆ ಸಾಕ್ಷಿಯಾದ ಶಿರಸಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ಬಾವಿ ನೀರಿಗೆ ಬೆಂಕಿ ಹಚ್ಚಿದರೆ ಉರಿಯುತ್ತಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ನೀರಿನಲ್ಲಿ ತೈಲ ಮಿಶ್ರಣವಾಗಿ ಕಪ್ಪು ಬಣ್ಣಕ್ಕೆ ತಿರುಗಿದ್ದು, ಪವರ್ ಗ್ರಿಡ್‌ನಿಂದ ಆಯಿಲ್ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ವರದಿಯಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಬಾವಿ ನೀರಿಗೆ ಬೆಂಕಿ ಕಡ್ಡಿ ಗೀರಿದರೆ ಉರಿಯುತ್ತೆ ಬೆಂಕಿ! ವಿಚಿತ್ರ ವಿದ್ಯಮಾನಕ್ಕೆ ಸಾಕ್ಷಿಯಾದ ಶಿರಸಿ
ಬಾವಿ ನೀರಿಗೆ ಬೆಂಕಿ ಕಡ್ಡಿ ಗೀರಿದರೆ ಉರಿಯುತ್ತೆ ಬೆಂಕಿ! ವಿಚಿತ್ರ ವಿದ್ಯಮಾನಕ್ಕೆ ಸಾಕ್ಷಿಯಾದ ಶಿರಸಿ
ಅಶೋಕ್​ ಪೂಜಾರಿ
| Edited By: |

Updated on: Nov 08, 2026 | 12:46 PM

Share

ಮುಖ್ಯಾಂಶಗಳು

  • ಉತ್ತರ ಕನ್ನಡದ ದೊಡ್ನಳ್ಳಿಯಲ್ಲಿ ಬಾವಿ ನೀರಿಗೆ ಬೆಂಕಿ ಹಚ್ಚಿದರೆ ಧಗಧಗನೆ ಉರಿಯುತ್ತದೆ
  • ಆರು ಬಾವಿಗಳಲ್ಲಿ ಕಪ್ಪು ಬಣ್ಣದ ನೀರು ಹಾಗೂ ಪೆಟ್ರೋಲ್ ವಾಸನೆ ಕಾಣಿಸಿಕೊಂಡಿದೆ
  • ಪವರ್ ಗ್ರಿಡ್ ಆಯಿಲ್ ಸೋರಿಕೆಯಿಂದ ಅಂತರ್ಜಲ ಕಲುಷಿತಗೊಂಡಿರಬಹುದು ಎಂದು ಶಂಕಿಸಲಾಗಿದೆ

ಉತ್ತರ ಕನ್ನಡ, ನವೆಂಬರ್ 08: ಸಾಮಾನ್ಯವಾಗಿ ಬಾವಿ ನೀರನ್ನು ಬೆಂಕಿ ನಂದಿಸಲು ಬಳಸುತ್ತಾರೆ. ಆದರೆ ಇಲ್ಲೊಂದು ಗ್ರಾಮದಲ್ಲಿ ಬಾವಿ ನೀರಿಗೆ ಬೆಂಕಿ ಕಡ್ಡಿ ಗೀರಿದರೆ ಸಾಕು, ನೀರೇ ಧಗಧಗನೆ ಉರಿಯುತ್ತದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದ ಓಂಕಾರ ನಗರದಲ್ಲಿ ಇಂತಹ ವಿಚಿತ್ರ ಹಾಗೂ ಆತಂಕಕಾರಿ ವಿದ್ಯಮಾನ ಬೆಳಕಿಗೆ ಬಂದಿದೆ. ಇಲ್ಲಿನ ಸುಮಾರು ಆರು ಬಾವಿಗಳ ನೀರಿನಲ್ಲಿ ಆಯಿಲ್ ಮಿಶ್ರಣವಾಗಿದ್ದು, ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಅಷ್ಟೇ ಅಲ್ಲ, ಬಾವಿ ನೀರಿನಲ್ಲಿ ಪೆಟ್ರೋಲ್ ಅಥವಾ ಡೀಸೆಲ್‌ನಂತಹ ವಾಸನೆ ಬರುತ್ತಿದ್ದು, ಬೆಂಕಿ ತಾಗಿಸಿದರೆ ಹೊತ್ತಿ ಉರಿಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಆರು ಬಾವಿಗಳ ನೀರಿನಲ್ಲಿ ಆಯಿಲ್ ಮಿಶ್ರಣ; ಬೆಂಕಿ ಹಚ್ಚಿದರೆ ಉರಿ!

ದೊಡ್ನಳ್ಳಿ ಗ್ರಾಮದ ಓಂಕಾರ ನಗರದ ಹಲವು ಬಾವಿಗಳಲ್ಲಿ ಈ ಸಮಸ್ಯೆ ಕಾಣಿಸಿಕೊಂಡಿದೆ. ಬಾವಿಯ ನೀರಿನ ಮೇಲೆ ಎಣ್ಣೆಯ ಪದರ ತೇಲುತ್ತಿದ್ದು, ನೀರು ಸಂಪೂರ್ಣ ಕಪ್ಪು ಬಣ್ಣಕ್ಕೆ ತಿರುಗಿದೆ. ಬಾವಿಯ ನೀರನ್ನು ಖಾಲಿ ಮಾಡಿದರೂ ಮತ್ತೆ ಆಯಿಲ್ ಮಿಶ್ರಿತ ನೀರು ತುಂಬಿಕೊಳ್ಳುತ್ತಿದೆ ಎನ್ನಲಾಗಿದೆ. ನೀರಿನಲ್ಲಿ ಪೇಪರ್ ಅದ್ದಿ ಬೆಂಕಿ ಹಚ್ಚಿದಾಗ ಪೇಪರ್ ಹೊತ್ತಿ ಉರಿಯುತ್ತಿರುವುದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳ ತಂಡವೂ ನೀರಿನಲ್ಲಿ ಆಯಿಲ್ ತೇಲುತ್ತಿರುವುದನ್ನು ಕಂಡು ಅಚ್ಚರಿ ವ್ಯಕ್ತಪಡಿಸಿದೆ. ಬಾವಿಗಳ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಾಥಮಿಕ ವರದಿಯಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಗ್ರಾಮ ಪಂಚಾಯತ್ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಮುಂದಾಗಿದೆ.

ಪವರ್ ಗ್ರಿಡ್‌ನಿಂದ ಆಯಿಲ್ ಸೋರಿಕೆ ಶಂಕೆ!

ಓಂಕಾರ ನಗರದ ಪಕ್ಕದಲ್ಲೇ ಬೃಹತ್ ವಿದ್ಯುತ್ ಪ್ರಸರಣ ಪವರ್ ಗ್ರಿಡ್ ಇದೆ. ಇಲ್ಲಿನ ಟ್ರಾನ್ಸ್‌ಫಾರ್ಮರ್‌ಗಳಿಂದ ಆಯಿಲ್ ಸೋರಿಕೆಯಾಗಿ ಭೂಮಿಯೊಳಗೆ ಸೇರಿ ಅಂತರ್ಜಲ ಕಲುಷಿತಗೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ತಜ್ಞರ ತಂಡ ಪವರ್ ಗ್ರಿಡ್ ಆವರಣಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆದರೆ ಬಾವಿಗಳ ನೀರಿಗೆ ಆಯಿಲ್ ಸೇರುತ್ತಿರುವ ನಿಖರ ಮೂಲ ಇನ್ನೂ ಪತ್ತೆಯಾಗಿಲ್ಲ. ಪ್ರಯೋಗಾಲಯದ ಸಂಪೂರ್ಣ ವರದಿ ಬಂದ ಬಳಿಕವಷ್ಟೇ ನೀರಿನಲ್ಲಿ ಮಿಶ್ರಣವಾಗಿರುವ ವಸ್ತುವಿನ ಸ್ವರೂಪ ಮತ್ತು ಅದರ ಮೂಲದ ಬಗ್ಗೆ ಸ್ಪಷ್ಟತೆ ಸಿಗಬೇಕಿದೆ. ಸದ್ಯ ಕುಡಿಯುವ ನೀರಿನ ಸುರಕ್ಷತೆ ಬಗ್ಗೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ಕಾರ್ತಿಕ ಮಾಸದ ಆರಂಭದಲ್ಲೇ ಈ 4 ರಾಶಿಗಳಿಗೆ ರಾಜಯೋಗ! ನಿಮ್ಮ ರಾಶಿ ಹೇಗಿದೆ?
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ದೀಪಾವಳಿ ಹಬ್ಬದ ಖರೀದಿ ಭರಾಟೆ:  ಕೆ.ಆರ್.ಮಾರ್ಕೆಟ್‌ನಲ್ಲಿ ಜನಸಾಗರ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ಇಂದು ಈ ರಾಶಿಯವರು ಸಂಗಾತಿಯ ಸಲಹೆಯನ್ನು ಪಡೆದು ನಿರ್ಧಾರ ತೆಗೆದುಕೊಳ್ಳಿ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದ ಯುವಕ: ಗಂಭೀರ ಗಾಯ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಡಿಪಿಆರ್‌ ತಿರಸ್ಕರಿಸಲು ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಪೋಲೆಂಡ್‌ನ ಕ್ರಾಕೋವ್‌ನಲ್ಲಿ ಗುಂಡಿನ ದಾಳಿ; 5 ಜನ ಸಾವು
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್
ಸ್ಟಿಂಗ್​​​ನಿಂದ ಕರ್ನಾಟಕ ತಲೆ ತಗ್ಗಿಸುವಂತಾಗಿದೆ ಎಂದ ಡಾ. ಕೆ. ಸುಧಾಕರ್