ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಪದ್ಮಶ್ರೀ ಪ್ರಶಸ್ತಿ ಮರಳಿ ನೀಡುವೆ: ಸುಕ್ರಿ ಬೊಮ್ಮಗೌಡ

Sukri Bommagowda: ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿರುವ, ಕಾಡನ್ನು ನಂಬಿ ಬದುಕು ಕಟ್ಟಿಕೊಂಡ ಹಾಲಕ್ಕಿ ಜನಾಂಗ ಈ ವರೆಗೂ ಸಂಕಷ್ಟದಲ್ಲಿದೆ. ನಮ್ಮಲ್ಲಿ ಶಿಕ್ಷಣ ಪಡೆದವರೇ ಕಮ್ಮಿ ಜನರಿದ್ದಾರೆ. ಅವರಿಗೆ ಉತ್ತಮ ಕೆಲಸ ಸಹ ಇಲ್ಲ ಎಂದು ಸುಕ್ರಿ ಬೊಮ್ಮಗೌಡ ತಿಳಿಸಿದ್ದಾರೆ

ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಪದ್ಮಶ್ರೀ ಪ್ರಶಸ್ತಿ ಮರಳಿ ನೀಡುವೆ: ಸುಕ್ರಿ ಬೊಮ್ಮಗೌಡ
ಸುಕ್ರಿ ಬೊಮ್ಮಗೌಡ
Follow us
TV9 Web
| Updated By: Digi Tech Desk

Updated on:Oct 01, 2021 | 12:04 AM

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೀಮಿತವಾಗಿರುವ ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ತನಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿ ನೀಡಲು ಜನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ನಿರ್ಧರಿಸಿದ್ದಾರೆ. ಹಾಗೂ ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.

ಈ ಕುರಿತು ವರದಿಗಾರರ ಜೊತೆ ಮಾತನಾಡಿದ ಅವರು ಕ್ಕೆ ಸೇರಿಸಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿರುವ, ಕಾಡನ್ನು ನಂಬಿ ಬದುಕು ಕಟ್ಟಿಕೊಂಡ ಹಾಲಕ್ಕಿ ಜನಾಂಗ ಈ ವರೆಗೂ ಸಂಕಷ್ಟದಲ್ಲಿದೆ. ನಮ್ಮಲ್ಲಿ ಶಿಕ್ಷಣ ಪಡೆದವರೇ ಕಮ್ಮಿ ಜನರಿದ್ದಾರೆ. ಅವರಿಗೆ ಉತ್ತಮ ಕೆಲಸ ಸಹ ಇಲ್ಲ. ಹೀಗಿರುವಾಗ ಕಳೆದ 20 ವರ್ಷದಿಂದ ನಮ್ಮ ಜನಾಂಗವನ್ನು ಪರಿಶಿಷ್ಟ ಪಂಗಡಬೇಕು ಎಂಬ ಹೋರಾಟ ನಡೆಯುತ್ತಲೇ ಇದೆ. ಈ ಕುರಿತು ಕೇಂದ್ರ ಸರ್ಕಾರ ಈವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಇಂಥಾ ಸಂದರ್ಭದಲ್ಲಿ ಉಪಯೋಗಕ್ಕೆ ಬಾರದ ಈ ಪ್ರಶಸ್ತಿಯನ್ನು ಇಟ್ಟುಕೊಂಡು ಏನು ಮಾಡಲಿ. ನಮ್ಮ ಜನರಿಗೆ ಸಿಗಬೇಕಾದ ಹಕ್ಕು ಸಿಗದಿದ್ದರೆ ನಾನು ಇದ್ದು ಏನು ಪ್ರಯೋಜನ ಹೀಗಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ. ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ವಿಧಾನಸೌದಕ್ಕೆ ತೆರಳಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸುಕ್ರಿ ಬೊಮ್ಮಗೌಡ ಯಾರು?

ಸುಕ್ರಿ ಬೊಮ್ಮಗೌಡ ಉತ್ತರ ಕನ್ನಡ ಜಿಲ್ಲೆಯ ಬಡಿಗೇರಿ ಎಂಬಲ್ಲಿನವರು. ಅವರು ಬುಡಕಟ್ಟು ಸಮುದಾಯವಾದ ಹಾಲಕ್ಕಿ ಒಕ್ಕಲಿಗ ಪಂಗಡಕ್ಕೆ ಸೇರಿದವರು. ಸಾಂಪ್ರದಾಯಿಕ ಬುಡಕಟ್ಟು ಸಂಗೀತ ಕ್ಷೇತ್ರದಲ್ಲಿನ ಅವರ ಕೆಲಸಗಳಿಗೆ ಪದ್ಮಶ್ರೀ ಸಹಿತ ಹಲವು ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಲಭಿಸಿದೆ. ಅವರು ತಮ್ಮ ಸಮುದಾಯದ ಇತರರಿಗೆ ಸಾಂಪ್ರದಾಯಿಕ ಹಾಡುಗಳನ್ನು ಕಲಿಸಿ ಕೊಡುತ್ತಾರೆ. ಆ ಮೂಲಕ ಅದರ ಉಳಿವಿಗೆ ಶ್ರಮಿಸಿದ್ದಾರೆ. ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದು ಮತ್ತು ಹಾಲಕ್ಕಿ ಕೋಗಿಲೆ/ ಜನಪದ ಕೋಗಿಲೆ ಎಂದೂ ಕರೆಯಲ್ಪಟ್ಟಿದ್ದಾರೆ.

ಹಾಲಕ್ಕಿ ಸಮುದಾಯ

ಹಾಲಕ್ಕಿ ಸಮುದಾಯದವರು ಉತ್ತರ ಕನ್ನಡದ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಕಾಣಸಿಗುತ್ತಾರೆ. ಈ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎನ್ನುವ ಕೂಗು ಬಹಳ ಹಿಂದಿನಿಂದಲೂ ಇದೆ. ಈ ಸಮುದಾಯವನ್ನು ಆಫ್ರಿಕಾದ ಮಸಾಯಿ ಸಮುದಾಯಕ್ಕೆ ಹೋಲಿಸಲಾಗುತ್ತದೆ.

ಇದನ್ನೂ ಓದಿ: ಅಮೆರಿಕದ ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡದ ದಿನೇಶ್ ವಸಂತ ಹೆಗಡೆ

ಇದನ್ನೂ ಓದಿ: ಉತ್ತರ ಕನ್ನಡಕ್ಕೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ಕನಸು ನನಸಾಗಲು ಬೇಕಿನ್ನೆಷ್ಟು ಕಾಲ?

Published On - 11:11 pm, Thu, 30 September 21

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!