ಕಾರವಾರ: 2 ಕಾರುಗಳ ಮಧ್ಯೆ ಡಿಕ್ಕಿ ಹೊಡದ ಪರಿಣಾಮ ಕಾರವಾರ ಮೂಲದ ಮೂವರ ಸಾವನ್ನಪ್ಪಿರುವಂತಹ ಘಟನೆ ಗೋವಾದ ಕಾಣಕೋಣದ ತಾರಿ ಬಳಿ ಅಪಘಾತ ನಡೆದಿದೆ. ಮಾಜಾಳಿ ಮೂಲದ ಹರೀಶ್ ಉಲ್ಲಾಸ ನಾಗೇಕರ್(35), ಉಲ್ಲಾಸ ನಾಗೇಕರ(60), ವೀಣಾ ನಾಗೇಕರ(60) ಮೃತರು. 7 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ ಸಾವು:
ತುಮಕೂರು: ಹರಿಯುವ ನೀರಿನ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಆರ್ ಹೊಸಕೋಟೆ ಬಳಿ ನಡೆದಿದೆ. ಕರೇಕಲ್ಲಪ್ಪ (50) ಮೃತ ದುರ್ದೈವಿ. ಸ್ನಾನ ಮಾಡಲು ಹಳ್ಳಕ್ಕೆ ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ರಾಜವಂತಿ ಕೆರೆ ಕೋಡಿ ಬಿದ್ದು ರಭಸವಾಗಿ ನೀರು ಹರಿಯುತ್ತಿದೆ. ಹರಿಯುವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾನೆ. ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಮನೆ ಗೋಡೆ ಕುಸಿದು ಅಜ್ಜಿ ಸಾವು:
ಗದಗ: ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಅಜ್ಜಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ನೆನೆದು ಮನೆ ಗೋಡೆ ಕುಸಿದು ಲಕ್ಷ್ಮವ್ವ ಮಾದರ(80) ಮೃತಪಟ್ಟಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್ ಅಂದರ್:
ಬೆಂಗಳೂರು: ಪಿಎಸ್ಐಗೆ ರಿವಾಲ್ವರ್ ತೋರಿಸಿ ಪರಾರಿಯಾಗಿದ್ದ ಡ್ರಗ್ಸ್ ಪೆಡ್ಲರ್ ಜಾಫರ್ನನ್ನು ಪೊಲೀಸರು ಬಂಧಿಸಿದ್ದಾರೆ. HSR ಲೇಔಟ್ ಹಾಗೂ ಕೇರಳ ಪೊಲೀಸರ ಜಂಟಿ ಕಾರ್ಯಾಚರಣೆ ಮಾಡಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. HSR ಲೇಔಟ್ನ ಅಲ್ ಬೇಕ್ನಲ್ಲಿ ವಶಕ್ಕೆ ಪಡೆಯಲು ಯತ್ನಿಸಿದಾಗ ಪಿಎಸ್ಐಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದ. ಕೋಲಾರ ಬಳಿ ಆರೋಪಿ ಬಂಧಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸರು ನಡೆಸುತ್ತಿದ್ದಾರೆ.
ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ
ಕಾರವಾರ: ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿರುವಂತಹ ಘಟನೆ ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಮೂಲದ ವಿದ್ಯಾರ್ಥಿಗಳು ಅದೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಸೇರಿ 60 ಜನ ಪ್ರಯಾಣಿಸ್ತಿದ್ರು. ಮುರುಡೇಶ್ವರಕ್ಕೆ ಹೋಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:06 am, Thu, 8 September 22