ಕಾರವಾರದಲ್ಲಿ ನವರಾತ್ರಿ ಸಂಭ್ರಮ‌; ದಾಂಡಿಯ ನೃತ್ಯದಲ್ಲಿ ಪಾಲ್ಗೊಂಡ ಸಾವಿರಾರು ಜನ

ನವರಾತ್ರಿ ಅಂದಾಕ್ಷಣ ಕರಾವಳಿ ನಗರಿ ಕಾರವಾರದ ಜನತೆಗೆ ಮೊದಲು ನೆನಪಾಗುವುದು ದಾಂಡಿಯಾ. ಕೇವಲ ಗುಜರಾತ್, ಮಹಾರಾಷ್ಟ್ರ ಭಾಗದಲ್ಲಿ ಆಚರಣೆಯಲ್ಲಿರುವ ಈ ದಾಂಡಿಯಾ, ಗರ್ಬಾ ನೃತ್ಯವನ್ನು ಕಾರವಾರಿಗರೂ ಸಹ ಆಚರಿಸಿಕೊಂಡು ಬರುತ್ತಿರುವುದು ವಿಶೇಷ. ನವರಾತ್ರಿಯ ಒಂಭತ್ತು ದಿನಗಳ ಕಾಲವೂ ನಗರದ ವಿವಿಧೆಡೆ ದಾಂಡಿಯಾ ಆಯೋಜಿಸುವ ಮೂಲಕ ಜನರು ಸಂಭ್ರಮದಿಂದ ಹಬ್ಬವನ್ನು ಆಚರಿಸಿ ಗಮನ ಸೆಳೆದಿದ್ದಾರೆ.

ಕಾರವಾರದಲ್ಲಿ ನವರಾತ್ರಿ ಸಂಭ್ರಮ‌; ದಾಂಡಿಯ ನೃತ್ಯದಲ್ಲಿ ಪಾಲ್ಗೊಂಡ ಸಾವಿರಾರು ಜನ
ಕಾರವಾರ ನವರಾತ್ರಿ ಸಂಭ್ರಮ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 21, 2023 | 12:45 PM

ಉತ್ತರ ಕನ್ನಡ, ಅ.21: ಜಿಲ್ಲೆಯ ಕರಾವಳಿ ನಗರಿಯಲ್ಲಿಯೂ ನವರಾತ್ರಿ ಸಂಭ್ರಮ‌ ಜೋರಾಗಿದೆ. ಉತ್ಸವದ ನಿಮಿತ್ತ ದಾಂಡಿಯ ಹಾಗೂ ಗರ್ಬಾ ನೃತ್ಯವನ್ನು ನಿತ್ಯವೂ ಆಡುವ ಮೂಲಕ ಜನರು ಸಂಭ್ರಮಿಸುತ್ತಿದ್ದಾರೆ. ಪ್ರತಿ ವರ್ಷ ನವರಾತ್ರಿ ಬಂದಾಗ ನಗರದ ವಿವಿಧೆಡೆ ರಾತ್ರಿ ವೇಳೆ ದಾಂಡಿಯಾ (Dandiya)ನೃತ್ಯವನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗುತ್ತದೆ. ಕಾರವಾರದ ಬಹುತೇಕ ಎಲ್ಲಾ ವಾರ್ಡ್‌ಗಳಲ್ಲಿ ಆಯೋಜಕರು ದಾಂಡಿಯಾ ನೃತ್ಯವನ್ನು ಆಯೋಜಿಸುವುದರಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಸಂಭ್ರಮಿಸುವುದು ವಿಶೇಷವಾಗಿದೆ.

ಕಳೆದ 16 ವರ್ಷಗಳಿಂದ ದಾಂಡಿಯಾ ಆಯೋಜನೆ

ಕೇವಲ ರಾಜಸ್ಥಾನ, ಗುಜರಾತ್, ಪಂಜಾಬ್‌ನಂತಹ ಕೆಲವೇ ರಾಜ್ಯಗಳಿಗೆ ಸೀಮಿತ ಎನ್ನಲಾದ ದಾಂಡಿಯಾ, ಗರ್ಬಾ ನೃತ್ಯವನ್ನು ಹಲವಾರು ವರ್ಷದಿಂದ ಕಾರವಾರದ ಜನರೂ ಆಡುತ್ತಾ ಬರುತ್ತಿದ್ದಾರೆ. ನಗರದ ದೇವಳಿವಾಡದಲ್ಲಿ ಕಳೆದ 16 ವರ್ಷಗಳಿಂದ ದಾಂಡಿಯಾ ಆಯೋಜಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಸಹ ಅದ್ದೂರಿಯಾಗಿ ನಡೆಯುತ್ತಿದೆ. ಅಲ್ಲದೇ ಈ ಬಾರಿ ದಸರಾ ರಜೆ ಕೂಡ ಇರುವ ಹಿನ್ನಲೆ ವಿವಿಧೆಡೆಗಳಿಂದ ಸಾಕಷ್ಟು ಜನರು ಆಗಮಿಸುತ್ತಿದ್ದು, ಸಂಭ್ರಮದಿಂದ ದಾಂಡಿಯಾ ಆಡುವ ಮೂಲಕ ಸಕತ್ ಎಂಜಾಯ್ ಮಾಡುತ್ತಿದ್ದಾರೆ.

ಇದನ್ನೂ ಓದಿ:ಮೈಸೂರಲ್ಲಿ ನವರಾತ್ರಿ ಸಂಭ್ರಮ, ಕರಾವಳಿಯಲ್ಲಿ ದಾಂಡಿಯಾ ಕಿಚ್ಚು: ಎಲ್ಲೆಲ್ಲಿ ಹೇಗಿದೆ ದಸರಾ ಸಂಭ್ರಮ?

ಒಂಭತ್ತು ದಿನಗಳ ಕಾಲವೂ ಕಾರವಾರದ ವಿವಿಧೆಡೆ ದಾಂಡಿಯಾ ಆಯೋಜನೆ

ಇನ್ನು ನವರಾತ್ರಿ ಉತ್ಸವದ ಒಂಬತ್ತೂ ದಿನಗಳಲ್ಲಿ ಕಾರವಾರ ತಾಲ್ಲೂಕಿನಲ್ಲಿ ದಾಂಡಿಯಾ ನೃತ್ಯವನ್ನು ಆಯೋಜನೆ ಮಾಡಲಾಗುತ್ತದೆ. ಇಲ್ಲಿನ ಪ್ರಮುಖ ದೇವತೆಗಳಾದ ದುರ್ಗಾದೇವಿ, ಸಂತೋಷಿಮಾತಾ, ಕುಂಠಿ ಮಹಾಮಾಯಿ ಸೇರಿದಂತೆ ಅನೇಕ ದೇವಾಲಯಗಳ ಆವರಣದಲ್ಲಿ ದಾಂಡಿಯಾವನ್ನ ಆಯೋಜಿಸಲಾಗುತ್ತದೆ. ಇದರೊಂದಿಗೆ ದುರ್ಗಾದೇವಿಯನ್ನ ಆರಾಧಿಸುವ ತಲೆಯ ಮೇಲೆ ಕಳಸ ಹೊತ್ತು ಆಡುವ ಗರ್ಬಾ ನೃತ್ಯವನ್ನು ಸಹ ಮಾಡಲಾಗುತ್ತದೆ. ದಾಂಡಿಯಾ ಜೊತೆಗೆ ವಿವಿಧ ಸ್ಪರ್ಧೆಗಳನ್ನೂ ಆಯೋಜಿಸುವುದರಿಂದ ಎಲ್ಲರೂ ನೃತ್ಯ ಆಡಿ ಸಂಭ್ರಮಿಸುತ್ತಾರೆ.

ಇನ್ನು ಈ ನೃತ್ಯದಲ್ಲಿ ಯಾವುದೇ ಜಾತಿ, ಧರ್ಮ ಭೇದ ಭಾವವಿಲ್ಲದೇ ಮಹಿಳೆಯರು ಮಕ್ಕಳು, ಪುರುಷರು ಒಟ್ಟಾಗಿ ಪಾಲ್ಗೊಂಡು ಸಂತಸಪಡುತ್ತಾರೆ. ಕಾರವಾರದ ದೇವಳಿವಾಡ, ಸೋನಾರವಾಡ, ಕಳಸವಾಡ ಸೇರಿದಂತೆ ವಿವಿಧೆಡೆ ಆಯೋಜಿಸುವ ದಾಂಡಿಯಾದಲ್ಲಿ ನಗರದ ವಿವಿಧ ಭಾಗಗಳ ಜನರು ಪಾಲ್ಗೊಂಡು ಸಂಭ್ರಮಿಸುತ್ತಾರೆ. ಒಟ್ಟಾರೇ ಕರ್ನಾಟಕದ ಕಾಶ್ಮೀರ ಖ್ಯಾತಿಯ ಕಾರವಾರದಲ್ಲಿ ಜನರು ನವರಾತ್ರಿ ಉತ್ಸವವನ್ನ ದಾಂಡಿಯಾ ನೃತ್ಯದ ಮೂಲಕ ಸಂಭ್ರಮಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ