AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ

ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿದ್ದ ಕುಟುಂಬ ದುರಂತ ಸಾವು ಕಂಡಿದೆ. ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಓವರಟೇಕ್ ಮಾಡುವ ಭರದಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಲಾರಿ ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.

ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ: ಪ್ರವಾಸಕ್ಕೆ ಹೊರಟ್ಟಿದ್ದ ಇಡೀ ಕುಟುಂಬವೇ ದುರಂತ ಅಂತ್ಯ
ಅಪಘಾತ
ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Feb 19, 2025 | 8:04 PM

Share

ಕಾರವಾರ, (ಫೆಬ್ರವರಿ 19): ಓವರಟೇಕ್ ಮಾಡುವ ಭರದಲ್ಲಿ ಲಾರಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದೆ. ಪರಿಣಾಮ ಒಂದೇ ಕಟುಂಬದ ಮೂವರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಪ್ರವಾಸಕ್ಕೆಂದು ಕೊಪ್ಪಳದಿಂದ ಅಂಕೋಲಾ ಕಡೆಗೆ ಹೊರಟಿದ್ದ ಇಡೀ ಕುಟುಂಬ ಗಂಡ, ಹೆಂಡ್ತಿ ಹಾಗೂ ಮಗು ದುರಂತ ಅಂತ್ಯಕಂಡಿದ್ದಾರೆ. ಪತಿ ಆರ್ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳದ ಚಿಕ್ಕ ಮಗು ಶ್ರೀಹಾನ್ ಮೃತ ದುರ್ದೈವಿಗಳು.

ಮೃತ ಕುಟುಂಬ ಕೊಪ್ಪಳದಿಂದ ಪ್ರವಾಸಕ್ಕೆಂದು ಅಂಕೋಲಾ ಕಡೆಗೆ ಹೊರಟಿತ್ತು. ಆದ್ರೆ, ದುರದೃಷ್ಟವಶಾತ್ ಅರಬೈಲ್ ಘಟ್ಟ ಬಳಿ ಲಾರಿಯೊಂದು ಓವರಟೇಕ್ ಮಾಡುವ ಭರದಲ್ಲಿ ಎದುರಿನ ಕಾರಿಗೆ ಗುದ್ದಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನುಜ್ಜಗುಜ್ಜಾಗಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮಗು ಸಹ ಮೃತಪಟ್ಟಿದೆ. ಇನ್ನು ಮೃತ ವೆಂಕಟೇಶನ ಸಹೋದರ ಶ್ರೀಕಾಂತ ರೆಡ್ಡಿಗೂ ಸಹ ಎರಡು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಗವಾಗಿ ಕಾರಿಗೆ ಗುದ್ದಿದ ಲಾರಿ ಚಾಲಕ ಪ್ರಶಾಂತ ಕುಂಬಾರ ವಿಜಯಪುರ ಮೂಲದವನಾಗಿದ್ದು, ಇದೀಗ ಪ್ರಶಾಂತ ಕುಂಬಾರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:08 pm, Wed, 19 February 25

Follow Us
Suraj Mahaveer Utture
Suraj Mahaveer Utture

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದ ಸೂರಜ ಉತ್ತೂರೆ. ಕಸ್ತೂರಿ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಪತ್ರಿಕೊದ್ಯಮ ಪ್ರವೇಶಿಸಿದ ಇವರು. ಡಿಸೆಂಬರ್ 2022 ರಂದು ಹಾವೇರಿ ಜಿಲ್ಲೆ tv9 ವರದಿಗಾರನಾಗಿ ಕೆಲಸ ಆರಂಭಿಸಿದ್ರು ನವೆಂಬರ್ 2023 ರಂದು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಆಗಿದ್ದೂ ಸದ್ಯ ಉತ್ತರ ಕನ್ನಡ ಜಿಲ್ಲೆಯ tv9 ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?