ಉತ್ತರ ಕನ್ನಡ: ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದವರಲ್ಲಿ ದುರಂತ ಅಂತ್ಯಕಂಡ ಮೂವರು ಮಹಿಳೆಯರು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಕನ್ನಡ: ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದವರಲ್ಲಿ ದುರಂತ ಅಂತ್ಯಕಂಡ ಮೂವರು ಮಹಿಳೆಯರು
ಬೊಲೆರೊ ಡಿಕ್ಕಿ, ಕ್ರೂಸರ್‌ ವಾಹನದಲ್ಲಿದ್ದ 3 ಮಹಿಳೆಯರು ಸಾವು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 20, 2023 | 11:01 PM

ಉತ್ತರಕನ್ನಡ: ಅಂತ್ಯಕ್ರಿಯೆಗೆ ಹೋಗುತ್ತಿದ್ದವರು ದುರಂತ ಅಂತ್ಯಕಂಡಿದ್ದಾರೆ. ಬೊಲೆರೊ ಡಿಕ್ಕಿಯಾಗಿ ಕ್ರೂಸರ್‌ ವಾಹನದಲ್ಲಿದ್ದ 3 ಮಹಿಳೆಯರು ಮೃತಪಟ್ಟಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು( ಜನವರಿ20) ಉತ್ತರಕನ್ನಡ (Uttara Kannada)ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಗ್ರಾಮದ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರದ ಫಾರ್ಲಿ ಗ್ರಾಮದ ನಿವಾಸಿಗಳಾದ ಪಾರ್ವತಿ ಗಾವಡ, ದುರ್ಗೆ ಕೋಲ್ಸೇಕರ್, ತುಳಸಿ ಗಾವಡ ಮೃತಪಟ್ಟಿದ್ದು, ವಿಪಿನ ತಾಳ್ವೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರು ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತಿದ್ದಾಗ ಈ ಅಪಘಾತ ಸಂಭವಿಸಿದೆ. ಮಿಳುನಾಡಿನಿಂದ ಗೋವಾಕ್ಕೆ ಮಹಿಂದ್ರ ಬೊಲೆರೊ ವೇಗವಾಗಿ ಬಂದು ಕ್ರೂಸರ್​ಗೆ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಕೇರಳ ಮೂಲದ ಬೊಲೆರೊ ವಾಹನದ ಇಬ್ಬರನ್ನು ಪೊಲೀರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಳಗುತ್ತಿದ್ದ ಬೋಟ್‌ನಿಂದ 17 ಜನ ಮೀನುಗಾರರ ರಕ್ಷಣೆ

ಉತ್ತರ ಕನ್ನಡ: ಮುಳಗುತ್ತಿದ್ದ ಬೋಟ್‌ನಿಂದ 17 ಜನ ಮೀನುಗಾರರ ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾ ಸಮೀಪದ ಕಡ್ಲೆ ಬಳಿ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಶ್ರೀದೇವಿ ಅನುಗ್ರಹ ಹೆಸರಿನ ಬೋಟ್ ಬಂಡೆಗೆ ತಾಗಿ ಮುಳುಗಡೆಯಾಗಿದೆ. ಈ ವೇಳೆ ಅಕ್ಕಪಕ್ಕದ ಬೋಟ್‌ನಲ್ಲಿದ್ದವರು ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

ಮೀನು ಹಿಡಿದುಕೊಂಡು ವಾಪಾಸ್ಸಾಗುವಾಗ ಈ ಘಟನೆ ನಡೆದಿದೆ. ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿದ್ದು,17 ಜನ ಮೀನುಗಾರರನ್ನ ರಕ್ಷಿಸಿ ದಡಕ್ಕೆ ತಂದಿದೆ. ಆದ್ರೆ, ಸುಧಾಕರ್ ಕಾರ್ವಿ ಎಂಬುವವರ ಮಾಲಿಕತ್ವದ ಶ್ರೀದೇವಿ ಅನುಗ್ರಹ ಹೆಸರಿನ ಪರ್ಶಿಯನ್ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ.

Published On - 10:56 pm, Fri, 20 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್