ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಮ್ ಮಾಡಿಕೊಂಡ ಘಟನೆ ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಕಚೇರಿಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಜಯಂತ್ ಅವರನ್ನು ಅಮಾನತು ಮಾಡಲಾಗಿದೆ. ಸರ್ಕಾರಿ ಅಧಿಕಾರಿ ಜಯಂತ್ ಅಮಾನತುಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ ಸೂಚನೆ ನೀಡಿದ್ದಾರೆ. ಇಂತಹ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲವೆಂದು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾಗಿತ್ತು. ಆ ವರದಿಯ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಸರ್ಕಾರಿ ಕಚೇರಿಯಲ್ಲೇ ಬೆಡ್ ರೂಂ; ಕಾರವಾರದ ಪ್ರವಾಸೋದ್ಯಮ ಅಧಿಕಾರಿ ಅಮಾನತು
Hk Patil
Edited By:

Updated on: Feb 20, 2025 | 9:42 PM

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಪ್ರವಾಸೋದ್ಯಮ ಅಧಿಕಾರಿಯಿಂದ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡ ಆರೋಪ ಕೇಳಿಬಂದಿತ್ತು. ಈ ಘಟನೆಯ ಬಗ್ಗೆ ಟಿವಿ9 ವರದಿಯನ್ನೂ ಮಾಡಿತ್ತು. ಟಿವಿ9 ವರದಿ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಪ್ರವಾಸೋದ್ಯಮ ಉಪ ನಿರ್ದೇಶಕ ಜಯಂತ್ ತಮ್ಮ ಕಚೇರಿಯಲ್ಲೇ ಬೆಡ್ ರೂಂ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ನನಗೂ ಜಯಂತ್ ಎಂಬ ಅಧಿಕಾರಿ ಬಗ್ಗೆ ಮಾಹಿತಿ ಬಂದಿದೆ. ಇಂಥ ಅಶಿಸ್ತನ್ನು ಸಹಿಸಲು ಸಾಧ್ಯವಿಲ್ಲ. ಹೀಗಾಗಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರ ಜೊತೆ ಮಾತಾಡಿದ್ದೇನೆ. ಕಾರವಾರದ ಅಧಿಕಾರಿ ಜಯಂತ್ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ವಿಧಾನಸೌಧದಲ್ಲಿ ಪ್ರವಾಸೋದ್ಯಮ ಸಚಿವ ಹೆಚ್​.ಕೆ. ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ; ಸಂಪುಟ ಸಭೆಯಲ್ಲಿ ನಿರ್ಧಾರ

ಕಾರವಾರ ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲಿ ಶಿಫ್ಟಿಂಗ್ ವೇಳೆ ಕಚೇರಿಯ ಒಂದು ಕೋಣೆಯಲ್ಲಿ ಬೆಡ್ ರೂಂನಲ್ಲಿರುವ ರೀತಿಯ ಮಂಚ, ಹಾಸಿಗೆ ಪತ್ತೆ ಆಗಿತ್ತು. ಈ ಕುರಿತು ವಿಡಿಯೋ ಸಮೇತ ಟಿವಿ9 ಸುದ್ದಿ ಪ್ರಸಾರ ಮಾಡಿತ್ತು. ಟಿವಿ9ನಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಈ ಬಗ್ಗೆ ವಿವರವಾದ ಮಾಹಿತಿ ಪಡೆದಿರುವ ಸಚಿವ ಹೆಚ್​.ಕೆ. ಪಾಟೀಲ್ ಆ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us