ಕಾರವಾರ: ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ 2 ಅಂಗಡಿಗಳು; 8 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಹಾನಿ

ಸುಮಾರು 8 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಹಾನಿ ಸಂಭವಿಸಿರುವ ಸಾಧ್ಯತೆ ಇದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರವಾರ: ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ 2 ಅಂಗಡಿಗಳು; 8 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಹಾನಿ
ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ
Follow us
TV9 Web
| Updated By: preethi shettigar

Updated on:Feb 24, 2022 | 12:12 PM

ಕಾರವಾರ: ಶಾರ್ಟ್ ಸರ್ಕ್ಯೂಟ್‌ನಿಂದ(Short circuit) ಎರಡು ಅಂಗಡಿಗಳಲ್ಲಿ (Shops) ಬೆಂಕಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನಟರಾಜ್ ರಸ್ತೆ ಬಳಿ ನಡೆದಿದೆ.‌ ರಂಗನಾಥ ರಾಯ್ಕರ ಅವರಿಗೆ ಸೇರಿದ ಪರ್ಲ್ ಬ್ಯೂಟಿಕ್ ಸ್ಟೋರ್, ಭಾರತಿ ಮಡಿವಾಳಗೆ ಸೇರಿದ ಮೇಘನಾ ಟೈಲರ್ ಅಂಗಡಿ ಸಂಪೂರ್ಣ ಭಸ್ಮವಾಗಿದೆ. ಸುಮಾರು 8 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಹಾನಿ ಸಂಭವಿಸಿರುವ ಸಾಧ್ಯತೆ ಇದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು, ಬೆಂಕಿ(Fire) ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಮುಂಡಗೋಡ ತಾಲೂಕಿನ ಇಂದೂರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ; ಹುಲ್ಲಿನ ಬಣವೆಗಳು ಸುಟ್ಟು ಭಸ್ಮ

ಮೇವಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಹುಲ್ಲಿನ ಬಣವೆಗಳು ಸುಟ್ಟು ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಇಂದೂರ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಚಿತ್ರಕಲಾ ಶಿಕ್ಷಕ ರಾಯ್ಕರ್ ಅವರಿಗೆ ಸೇರಿದ ಬಣವೆಗಳು ಸುಟ್ಟುಕರಕಲಾಗಿದೆ. ಜಾನುವಾರುಗಳ ಪಾಲನೆಗೆ ಇಟ್ಟಿದ್ದ ಮೇವಿನ ಬಣವೆಗಳು ಸುಟ್ಟು ಹೋಗಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಬೆಂಕಿ ಅವಗಢ; 40 ಲಕ್ಷ ಮೌಲ್ಯದ ಇಲೆಕ್ಟ್ರಿಕಲ್ಸ್ ವಸ್ತುಗಳು ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್‌ನಿಂದ ಇಲೆಕ್ಟ್ರಿಕಲ್ಸ್ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ನಡೆದಿದೆ. ವಿಜಯ ಹಂಚಿನಾಳ ಮಾಲೀಕತ್ವದ ವಿಜಯ ಇಲೆಕ್ಟ್ರಿಕಲ್ಸ್ ಅಂಗಡಿ ಸುಟ್ಟು ಕರಕಲಾಗಿದೆ. ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ಇಲೆಕ್ಟ್ರಿಕಲ್ಸ್ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.   ಸಿಂದಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಶಾರ್ಟ್ ​ಸರ್ಕ್ಯೂಟ್​ನಿಂದ 50 ಎಕರೆ ಕಬ್ಬು ಬೆಳೆ ಸುಟ್ಟು ಭಸ್ಮ; 50 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಕಬ್ಬು ನಾಶ

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ: ಮೂರು ದಿನಗಳ ಅವಧಿಗೆ ನಿಷೇಧಾಜ್ಞೆ ಜಾರಿ

Published On - 11:48 am, Thu, 24 February 22