ಕಾರವಾರ ನೌಕಾನೆಲೆ ಬಳಿ ಅಪರಿಚಿತ ಡ್ರೋನ್​ ಹಾರಾಟ, ಆತಂಕ

ಇತ್ತೀಚೆಗೆ ಹನಿಟ್ರ್ಯಾಪ್‌‌ಗೆ ಒಳಗಾಗಿ ನೌಕಾನೆಲೆ‌ಯಲ್ಲಿನ ಗುಪ್ತ ಮಾಹಿತಿ ನೀಡುತ್ತಿದ್ದ ಮೂವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಕಾರವಾರ ತಾಲೂಕಿನ ಅರಗಾದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆ ಪ್ರದೇಶ ಬಳಿ ಡ್ರೋನ್ ಹಾರಾಡಿದೆ.

Follow us
| Updated By: ವಿವೇಕ ಬಿರಾದಾರ

Updated on:Oct 09, 2024 | 8:47 AM

ಕಾರವಾರ, ಅ.09: ಉತ್ತರ ಕನ್ನಡ (Uttar Kannada) ಜಿಲ್ಲೆಯ ಕಾರವಾರ ತಾಲೂಕಿನ ಅರಗಾದ ವಕ್ಕನಳ್ಳಿ ಬಳಿಯ ಕದಂಬ ನೌಕಾನೆಲೆ (Kadamba Naval Base) ಪ್ರದೇಶ ಬಳಿ ಮಂಗಳವಾರ ರಾತ್ರಿ ಅಪರಿಚಿತ ಡ್ರೋನ್ (Drone) ಹಾರಾಡಿದ ದೃಶ್ಯ ಸ್ಥಳೀಯರ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪರಿಚಿತ ಡ್ರೋನ್ ಹಾರಾಟ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ವಕ್ಕನಳ್ಳಿಯ ಐಎನ್ಎಸ್ ಪತಂಜಲಿ ಆಸ್ಪತ್ರೆಯ ಹಿಂಬದಿಯಿಂದ ಬಿಣಗಾ ಚತುಷ್ಪಥ ಹೆದ್ದಾರಿಯ ಸುರಂಗ ಮಾರ್ಗದವರೆಗೂ ಡ್ರೋನ್ ಹಾರಾಡಿದೆ.

ಸುರಕ್ಷತೆಯ ದೃಷ್ಟಿಯಿಂದ ನೌಕಾ ನೆಲೆ ಪ್ರದೇಶದಲ್ಲಿ ಡ್ರೋನ್ ಹಾಗೂ ಕ್ಯಾಮರಾ ಬಳಕೆಗೆ ನಿಷೇಧಸಲಾಗಿದೆ. ಇದರ ಹೊರತಾಗಿಯೂ ಡ್ರೋನ್ ಹಾರಾಡಿದೆ. ಡ್ರೋನ್​ ಹಾರಾಟದ ವಿಡಿಯೋವನ್ನು ಸ್ಥಳಿಯರು ನೌಕಾನೆಲೆ ಅಧಿಕಾರಿಗಳಿಗೆ ನೀಡಿ, ಗಮನಕ್ಕೆ ತಂದಿದ್ದಾರೆ.

ಸುಮಾರು 2-3 ಕಿ.ಮೀ ಎತ್ತರದಲ್ಲಿ ನೈಟ್ ವಿಶನ್ ಡ್ರೋನ್ ಹಾರಾಡಿದ್ದು, ಹಲವು ಸಂಶಯಕ್ಕೆ ಕಾರಣಾಗಿದೆ. ಸಾಮಾನ್ಯವಾಗಿ 600 ದಿಂದ 1,200 ಮೀ ಎತ್ತರ ಹಾರುವ ಡ್ರೋನ್ ಸ್ಥಳೀಯವಾಗಿ ಬಳಕೆ ಮಾಡಲಾಗುತ್ತೆ. ಆದರೆ, ಈ ಡ್ರೋನ್ ಸುಮಾರು 3 ಕಿ.ಮೀ.ಗೂ ಹೆಚ್ಚು ದೂರ ಹಾರಾಡಿರುವುದು ಸಂಶಯಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಸೀಬರ್ಡ್ ನೌಕಾನೆಲೆ ಫೋಟೋ, ಮಾಹಿತಿ ಪಾಕಿಸ್ತಾನಕ್ಕೆ ರವಾನೆ: ಮೂವರು ಎನ್​ಐಎ ವಶಕ್ಕೆ

ಈ ಬಗ್ಗೆ ನಿಖರ ಮಾಹಿತಿ ಕಲೆ ಹಾಕಲು ನೌಕಾಪಡೆ, ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆಗಳು ಮುಂದಾಗಿವೆ. ಗುಪ್ತಚರ ಇಲಾಖೆ ಅಧಿಕಾರಿಗಳು ಸ್ಥಳೀಯರಿಂದಲೂ ಮಾಹಿತಿ ಪಡೆಯುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್​​ಬಿ ಹಾಗೂ ಎನ್​ಹೆಚ್​ಎಐಗಳು ಕೂಡ ಡ್ರೋನ್ ಬಳಸಿಲ್ಲ ಎಂದು ಸ್ಪಷ್ಟಪಡಿಸಿವೆ. ಇದರಿಂದ ಸಂಶಯ ದಟ್ಟವಾಗಿದ್ದು ನೌಕಾಪಡೆ ಹಾಗೂ ಗುಪ್ತಚರ ಇಲಾಖೆಗಳಿಂದ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯುತ್ತಿದೆ.

ಇತ್ತೀಚೆಗೆ ಹನಿಟ್ರ್ಯಾಪ್‌‌ಗೆ ಒಳಗಾಗಿ ನೌಕಾನೆಲೆ‌ಯಲ್ಲಿನ ಗುಪ್ತ ಮಾಹಿತಿ ನೀಡುತ್ತಿದ್ದ ಮೂವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಿಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಡ್ರೋನ್​ ಹಾರಾಟ ಗುಪ್ತಚರ ಇಲಾಖೆ ತಲೆ ಕೆಡಿಸಿಕೊಳ್ಳುವಂತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:43 am, Wed, 9 October 24

ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್