ಉತ್ತರ ಕನ್ನಡ: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ; ಜಿಲ್ಲಾಧಿಕಾರಿಗೆ ದೂರು

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಆಗಿರುವ ಎಲಿಷಾ ಎಲಕಪಾಟಿ ಎಂಬುವವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿದ್ದು, ಈ ಹಿನ್ನಲೆ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಕನ್ನಡ: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ; ಜಿಲ್ಲಾಧಿಕಾರಿಗೆ ದೂರು
ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 31, 2023 | 3:48 PM

ಉತ್ತರ ಕನ್ನಡ, ಆ.31: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿ ನಿಂದನೆ ಮಾಡಿದ ಹಿನ್ನಲೆ ಮಾರುತಿ ಬಸವಣ್ಣಪ್ಪ ನಾಯ್ಕ್​ ಎಂಬುವವರಿಂದ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ. ಕರ್ನಾಟಕ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಆಗಿರುವ ಎಲಿಷಾ ಎಲಕಪಾಟಿ ವಿರುದ್ದ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದ್ದು, ಹಿಂದೂ ಸಂಘಟನೆ ಮತ್ತು ದಲಿತ ಸಂಘಟನೆ ಯಿಂದ ಗಡಿಪಾರು ಮಾಡುವಂತೆ ಆಕ್ರೋಶ ವ್ಯಕ್ತವಾಗಿದೆ.

ಎಲಿಷಾ ಎಲಕಪಾಟಿ ಅವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಗ್ಗೆ ಕೂಡ ಅವಹೇಳನ ಮಾಡಿದ್ದಾರೆ ಎನ್ನಲಾಗಿದ್ದು. ಅಷ್ಟೇ ಅಲ್ಲದೇ ಇದೀಗ ದಲಿತ ಸಂಘದ ಹೆಸರು ಹೇಳಿ ಜನರ ಬಳಿ ಹಣ ವಸೂಲಿ ಮಾಡಿರುವ ಆರೋಪ ಕೂಡ ಕೇಳಿಬಂದಿದೆ. ಈ ಕುರಿತು ಮಾರುತಿ ಬಸವಣ್ಣಪ್ಪ ನಾಯ್ಕ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ದಿನ ಬೆಳಗಾದ್ರೆ ಸಾಕು ಪ್ರೌಢಶಾಲೆಯಲ್ಲಿ ಅಶ್ಲೀಲ ಗೋಡೆ ಬರಹ ನೋಡಿ ವಿದ್ಯಾರ್ಥಿನಿಯರು ಕಣ್ಣೀರುಡುತ್ತಿದ್ದಾರೆ, ಇದಕ್ಕೆಲ್ಲ ಕೊನೆ ಯಾವಾಗ?

ಮುಂದುವರಿದ ಕಾವೇರಿ ಕಿಚ್ಚು; ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಅಹೋರಾತ್ರಿ ಪ್ರತಿಭಟನೆ

ಮಂಡ್ಯ: ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಈಗಾಗಲೇ ಕೋರ್ಟ್​ ಆದೇಶ ನೀಡಿದ್ದು, ಅದರಂತೆ ರಾಜ್ಯ ಸರ್ಕಾರ ನೀರು ಬಿಡುತ್ತಿದೆ. ಆದರೆ, ಇದನ್ನು ವಿರೋಧಿಸಿ ಅನೇಕ ಹೋರಾಟಗಳು ನಡೆಯುತ್ತದ್ದು, ಇದೀಗ ಮತ್ತೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಅಹೋರಾತ್ರಿ ಕೆಆರ್​ಎಸ್ ಜಲಾಶಯದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್​ಎಸ್​ ಜಲಾಶಯದ ಮುಂದೆ ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಜಲಾಶಯದ ಮುಂದೆ ಶಾಮಿಯಾನ ಹಾಕಿ ಪ್ರಾಧಿಕಾರದ ವಿರುದ್ಧ ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ