AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಹಿಂದೂ ದೇವರುಗಳ ಬಗ್ಗೆ ಆಶ್ಲೀಲ ಪದಗಳಿಂದ ನಿಂದನೆ ಪ್ರಕರಣ; ಆರೋಪಿ ಅರೆಸ್ಟ್

ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ಅವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ವಾಲ್ಮೀಕಿ ಸಮುದಾಯದ ಬಗ್ಗೆ ಕೂಡ ಅವಹೇಳನ ಮಾಡಿದ್ದಾರೆ ಎನ್ನಲಾಗಿದ್ದು. ಈ ಕುರಿತು ಕಾರವಾರ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಉತ್ತರ ಕನ್ನಡ: ಹಿಂದೂ ದೇವರುಗಳ ಬಗ್ಗೆ ಆಶ್ಲೀಲ ಪದಗಳಿಂದ ನಿಂದನೆ ಪ್ರಕರಣ; ಆರೋಪಿ ಅರೆಸ್ಟ್
ಆರೋಪಿ ಅರೆಸ್ಟ್
ವಿನಾಯಕ ಬಡಿಗೇರ್​
| Edited By: |

Updated on:Sep 01, 2023 | 4:54 PM

Share

ಉತ್ತರ ಕನ್ನಡ, ಸೆ.01: ಹಿಂದೂ ದೇವರನ್ನು ಆಶ್ಲೀಲ ಪದಗಳಿಂದ ನಿಂದಿಸಿರುವ ಹಿನ್ನೆಲೆ ನಿನ್ನೆ(ಆ.31) ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ವಿರುದ್ದ ಕಾರವಾರ (Karwar) ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸ್​ಗೆ ಸಂಬಂಧಪಟ್ಟಂತೆ ಇದೀಗ ಅವರನ್ನು ಅರೆಸ್ಟ್ ಮಾಡಲಾಗಿದೆ. ಈತ ಯೇಸುವನ್ನು ಹೊಗಳಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆ ದಲಿತ ಸಮುದಾಯದ ಜನರೇ ಆತನನ್ನು ಬಂಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಿದ್ದರು..

ದೈವನಿಂದನೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಇನ್ನು ಆರೋಪಿಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆ ಕಾರವಾರದ ಪೊಲೀಸ್ ಠಾಣೆ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹಿಂದೂ ದೇವತೆಗಳನ್ನು ನಿಂದಿಸಿದ್ದ ಎಲಿಷಾ ಎಲಕಪಾಟಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಇಂದು ಎಲಿಷಾ ಎಲಕಪಾಟಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಶಿವಾಜಿ ಇಲ್ಲದಿದ್ದರೇ ನಾವು ಹಿಂದೂಗಳಾಗಿ ಇರುತ್ತಿರಲಿಲ್ಲ, ಎಲ್ಲ ‘ಕಟ್’ ಆಗಿ ಹೋಗುತ್ತಿತ್ತು: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಘಟನೆ ವಿವರ

ಎಲಿಷಾ ಎಲಕಪಾಟಿ ಅವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ವಾಲ್ಮೀಕಿ ಸಮುದಾಯದ ಬಗ್ಗೆ ಕೂಡ ಅವಹೇಳನ ಮಾಡಿದ್ದಾರೆ ಎನ್ನಲಾಗಿದ್ದು. ಅಷ್ಟೇ ಅಲ್ಲದೇ ಇದೀಗ ದಲಿತ ಸಂಘದ ಹೆಸರು ಹೇಳಿ ಜನರ ಬಳಿ ಹಣ ವಸೂಲಿ ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು. ಈ ಹಿನ್ನಲೆ ದಲಿತ ಸಮುದಾಯದ ಜನರೇ ಆತನನ್ನು ಗಡಿಪಾರು ಮಾಡುವಂತೆ ಹೇಳಿದ್ದರು. ಈ ಕುರಿತು ಮಾರುತಿ ಬಸವಣ್ಣಪ್ಪ ನಾಯ್ಕ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Fri, 1 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?