ಉತ್ತರ ಕನ್ನಡ, ಸೆ.01: ಹಿಂದೂ ದೇವರನ್ನು ಆಶ್ಲೀಲ ಪದಗಳಿಂದ ನಿಂದಿಸಿರುವ ಹಿನ್ನೆಲೆ ನಿನ್ನೆ(ಆ.31) ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ವಿರುದ್ದ ಕಾರವಾರ (Karwar) ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸ್ಗೆ ಸಂಬಂಧಪಟ್ಟಂತೆ ಇದೀಗ ಅವರನ್ನು ಅರೆಸ್ಟ್ ಮಾಡಲಾಗಿದೆ. ಈತ ಯೇಸುವನ್ನು ಹೊಗಳಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆ ದಲಿತ ಸಮುದಾಯದ ಜನರೇ ಆತನನ್ನು ಬಂಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಿದ್ದರು..
ಇನ್ನು ಆರೋಪಿಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಕಾರವಾರದ ಪೊಲೀಸ್ ಠಾಣೆ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹಿಂದೂ ದೇವತೆಗಳನ್ನು ನಿಂದಿಸಿದ್ದ ಎಲಿಷಾ ಎಲಕಪಾಟಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆ ಇಂದು ಎಲಿಷಾ ಎಲಕಪಾಟಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಎಲಿಷಾ ಎಲಕಪಾಟಿ ಅವರು ಹಿಂದೂ ದೇವತೆಗಳಾದ ಶಿವ, ಪಾರ್ವತಿ, ಶ್ರೀ ರಾಮನ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿ ನಿಂದನೆ ಮಾಡಿ ಮಾತನಾಡಿರುವ ವಿಡಿಯೋ ವೈರಲ್ ಆಗಿತ್ತು. ಜೊತೆಗೆ ವಾಲ್ಮೀಕಿ ಸಮುದಾಯದ ಬಗ್ಗೆ ಕೂಡ ಅವಹೇಳನ ಮಾಡಿದ್ದಾರೆ ಎನ್ನಲಾಗಿದ್ದು. ಅಷ್ಟೇ ಅಲ್ಲದೇ ಇದೀಗ ದಲಿತ ಸಂಘದ ಹೆಸರು ಹೇಳಿ ಜನರ ಬಳಿ ಹಣ ವಸೂಲಿ ಮಾಡಿರುವ ಆರೋಪ ಕೂಡ ಕೇಳಿಬಂದಿತ್ತು. ಈ ಹಿನ್ನಲೆ ದಲಿತ ಸಮುದಾಯದ ಜನರೇ ಆತನನ್ನು ಗಡಿಪಾರು ಮಾಡುವಂತೆ ಹೇಳಿದ್ದರು. ಈ ಕುರಿತು ಮಾರುತಿ ಬಸವಣ್ಣಪ್ಪ ನಾಯ್ಕ ಎಂಬುವವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:54 pm, Fri, 1 September 23