ಉತ್ತರ ಕನ್ನಡ: ಯಡಳ್ಳಿಯಲ್ಲಿ ಆಟೋಗೆ ಕಾರು ಡಿಕ್ಕಿ, ವೃದ್ಧೆ ಸಾವು, ನಾಲ್ವರಿಗೆ ಗಂಭೀರ ಗಾಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಯಡಳ್ಳಿಯಲ್ಲಿ ಒಂದೇ ಕುಟುಂಬದ ಏಳು ಮಂದಿ ಪ್ರಯಾಣಿಸುತ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿ ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಕನ್ನಡ: ಯಡಳ್ಳಿಯಲ್ಲಿ ಆಟೋಗೆ ಕಾರು ಡಿಕ್ಕಿ, ವೃದ್ಧೆ ಸಾವು, ನಾಲ್ವರಿಗೆ ಗಂಭೀರ ಗಾಯ
ಶಿರಸಿ ತಾಲೂಕಿನ ಯಡಳ್ಳಿಯಲ್ಲಿ ನಡೆದ ಅಪಘಾತ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Rakesh Nayak Manchi

Updated on: Nov 14, 2023 | 8:43 PM

ಕಾರವಾರ, ನ.14: ಉತ್ತರ ಕನ್ನಡ (Uttara Kannda) ಜಿಲ್ಲೆಯ ಶಿರಸಿ ತಾಲೂಕಿನ ಯಡಳ್ಳಿಯಲ್ಲಿ ಒಂದೇ ಕುಟುಂಬದ ಏಳು ಮಂದಿ ಪ್ರಯಾಣಿಸುತ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿ (Accident) ಆಟೋದಲ್ಲಿ ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜೋಗದ ಹೊಳೆ ಪದ್ಮಾವತಿ ದೇವಸ್ಥಾನಕ್ಕೆ ಭೇಟಿ ನೀಡಿದ ಒಂದೇ ಕುಟುಂಬದ ಏಳು ಮಂದಿ ಶಿರಸಿಗೆ ವಾಪಸ್ ಆಗುತ್ತಿದ್ದ ಆಟೋಗೆ ಯಡಳ್ಳಿಯಲ್ಲಿ ಕಾರು ಡಿಕ್ಕಿ ಹೊಡೆದಿದೆ. ಕಾರು ಶಿವಮೊಗ್ಗದಿಂದ ಶಿರಸಿಗೆ ಆಗಮಿಸಿ ಮತ್ತೆ ಶಿವಮೊಗ್ಗದತ್ತ ತೆರಳುತ್ತಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಕೋಲಾರದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸರಣಿ ಅಪಘಾತ: ಮಕ್ಕಳು ಸೇರಿ 17 ಜನರಿಗೆ ಗಾಯ

ಘಟನೆಯಲ್ಲಿ ಆಟೋದಲ್ಲಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸಾಮಾನ್ಯ ಸ್ವರೂಪದ ಗಾಯಗಳಾಗಿವೆ. ಕೂಡಲೇ ಶಿರಸಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೃದ್ಧೆ ವಿಶಾಲಾಕ್ಷಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಉಳಿದ ನಾಲ್ವರು ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ಪರಿಶೀಲನೆ ನಡೆಸಿದ್ದು, ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ