ಉತ್ತರ ಕನ್ನಡ: ಕಾಡುಹಂದಿ ಮಾಂಸವೆಂದು ನಂಬಿಸಿ ಜನರಿಗೆ ಬೌ ಬೌ ಮಾಂಸ ಮಾರಾಟ

ಕಾಡುಹಂದಿ ಮಾಂಸವೆಂದು ನಂಬಿಸಿ ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ಯುವಕರ ತಂಡವೊಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಗೂಸಾ ತಿನ್ನುವಂತಾಗಿದೆ. ಈ ಘಟನೆ ಉತ್ತರ ಕನ್ನಡದ ಅಂಕೋಲಾ ತಾಲೂಕಿನಲ್ಲಿ ನಡೆದಿದೆ.

ಉತ್ತರ ಕನ್ನಡ: ಕಾಡುಹಂದಿ ಮಾಂಸವೆಂದು ನಂಬಿಸಿ ಜನರಿಗೆ ಬೌ ಬೌ ಮಾಂಸ ಮಾರಾಟ
ನಾಯಿ ಮಾಂಸ ಮಾರಾಟ ಮಾಡಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಇಬ್ಬರು ಯುವಕರು (ಎಡಚಿತ್ರ)
Follow us
TV9 Web
| Updated By: Rakesh Nayak Manchi

Updated on: Jan 30, 2023 | 7:30 PM

ಕಾರವಾರ: ಮಾಂಸ ಮಾರಾಟದಲ್ಲಿ ಮಾಂಸ ಪ್ರಿಯರನ್ನು ಮೋಸ ಮಾಡುತ್ತಿರುವುದು ಹೊಸದೇನಲ್ಲ, ಕೋಳಿ ಮಾಂಸವೆಂದು ಇನ್ನೇನೋ ಮಾಂಸ ನೀಡಿದ ಪ್ರಕರಣ ಈ ಹಿಂದೆ ಕೇಳಿರುತ್ತೀರಿ. ಅಂತಹದ್ದೇ ಪ್ರಕರಣವೊಂದು ಉತ್ತರಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ. ಕಾಡುಹಂದಿ ಮಾಂಸವೆಂದು (Wild boar meat) ಜನರನ್ನು ನಂಬಿಸಿ ಅವರಿಗೆ ನಾಯಿ ಮಾಂಸ ಮಾರಾಟ ಮಾಡುತ್ತಿದ್ದ ಪ್ರಕರಣ ಅಂಕೋಲಾ ತಾಲೂಕಿನ ಮೊಗಟಾ, ಹಿಲ್ಲೂರು ಭಾಗದಲ್ಲಿ ಬೆಳಕಿಗೆ ಬಂದಿದೆ. ಇನ್ನು ನಿಜಾಂಶ ತಿಳಿದ ನಂತರ ಸಾರ್ವಜನಿಕರು ಸುಮ್ಮನೆ ಬಿಡುತ್ತಾರಾ? ನಾಯಿ ಮಾಂಸ ತಿನ್ನಿಸಿದ ಯುವಕರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ.

ಮೊಗಟಾ ಹಾಗೂ ಹಿಲ್ಲೂರು ಭಾಗದಲ್ಲಿ ಅಲೆಮಾರಿ ಜನಾಂಗದ ಯುವಕರಿಬ್ಬರು ಕಾಡುಹಂದಿ ಮಾಂಸ ಎಂದು ಜನರನ್ನು ನಂಬಿಸಿ ನಾಯಿ ಮಾಂಸ ಮಾರಾಟದಲ್ಲಿ ತೊಡಗಿದ್ದರು. ಹೀಗೆ ನಂಬಿಸಿ ಹತ್ತಾರು ಮನೆಗಳಿಗೆ ನಾಯಿ ಮಾಂಸವನ್ನು ತಿನ್ನಿಸಿ ಭರ್ಜರಿ ಹಣ ಮಾಡಿದ್ದಾರೆ. ಆದೇನಾಯ್ತು ಗೊತ್ತಿಲ್ಲ, ಯುವಕರು ನೀಡಿದ ಮಾಂಸ ಕಾಡು ಹಂದಿ ಮಾಂಸವಲ್ಲ, ನಾಯಿ ಮಾಂಸ ಎಂದು ತಿಳಿದುಬಂದಿದೆ. ಹೀಗಾಗಿ ತಕ್ಕ ಶಾಸ್ತಿ ಮಾಡಲು ಸಾರ್ವಜನಿಕರು ಪ್ಲಾನ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಿಜಯ್ ಮಲ್ಯ ಸಾವಿರಾರು ಕೋಟಿ ವಂಚನೆ ಮಾಡಿದ್ರು ಕೇಳಲ್ಲ, ನಾನ್ ಮಾಡಿರೊ ಮೂರ್ನಾಲ್ಕು ಕೋಟಿ ಕೇಳೋಕೆ ಬರ್ತಿರಾ‌‌‌‌ ಎಂದು ಪೊಲೀಸರಿಗೆ ಅವಾಜ್ ಹಾಕಿದ ಆರೋಪಿ

ನಾಯಿ ಮಾಂಸ ತಿನ್ನಿಸಿದ ಯುವಕರಿಗೆ ಬುದ್ಧಿ ಕಲಿಸಲು ಸಾರ್ವಜನಿಕರು ಮಾಂಸ ಖರೀದಿಸುವ ನೆಪದಲ್ಲಿ ಯುವಕರನ್ನು ಕರೆಸಿದ್ದಾರೆ. ಅದರಂತೆ ಯುವಕರು ಮಾಂಸ ಹಿಡಿದುಕೊಂಡು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಯುವಕರಿಬ್ಬರನ್ನು ಲಾಕ್ ಮಾಡಿದ ಸಾರ್ವಜನಿಕರು ಪ್ರಶ್ನಿಸಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ನಂತರ ಸಾರ್ವಜನಿಕರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಯುವಕರು ಬೇರೆಡೆ ನಾಯಿಗಳನ್ನ ಹಿಡಿದು ಕೊಂದು ಮಾಂಸ ಮಾಡಿ ಮಾರಾಟ ಮಾಡುತ್ತಿದ್ದರು. ಮಾಂಸದ ವಿಚಾರವಾಗಿ ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದ ವೇಳೆ ನಾಯಿ ಹಿಡಿಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?