ಆಡಳಿತಾತ್ಮಕ ದೃಷ್ಡಿಯಿಂದ ಉತ್ತರ ಕನ್ನಡ ಇಬ್ಭಾಗ: ಡಾ. ಮಹೇಶ ಜೋಶಿ ಬಹಿರಂಗ ಬೆಂಬಲ
ಧಾರವಾಡ, ಹಾವೇರಿ, ಉಡುಪಿ ಜಿಲ್ಲೆಗಳಾಗಿ ಒಡೆದ ಮೇಲೆ ಮೂರು ಜಿಲ್ಲೆಗಳು ಬೆಳೆದಿವೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಆಗಬೇಕು. ಇದರಲ್ಲಿ ರಾಜಕೀಯ ಇಲ್ಲವೇ ಇಲ್ಲ. ಜಿಲ್ಲೆ ಇಬ್ಭಾಗಕ್ಕೆ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ ಒತ್ತಾಯ ಮಾಡುತ್ತದೆ ಎಂದು ಹೇಳಿದರು.
ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನು ಆಡಳಿತಾತ್ಮಕ ದೃಷ್ಡಿಯಿಂದ ಇಬ್ಭಾಗ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ಬರೆಹಗಾರರ ಸಮ್ಮಿಲನ ಅಕ್ಷರೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ ಜೋಶಿ ಬಹಿರಂಗವಾಗಿಯೇ ಬೆಂಬಲ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಭೌಗೋಲಿಕವಾಗಿ ವಿಸ್ತಾರವಾಗಿದೆ. ಮಲೆನಾಡು, ಬಯಲುಸೀಮೆಯನ್ನು ಜಿಲ್ಲೆ ಹೊಂದಿದೆ. ಜಿಲ್ಲಾ ಕೇಂದ್ರಕ್ಕೆ ಆಡಳಿತಾತ್ಮಕ ಕೆಲಸಕ್ಕೆ ಬರಲು ಹೆಣಗಾಡುತ್ತಿದ್ದಾರೆ. ಅಭಿವೃದ್ದಿಯಲ್ಲೂ ಹಿಂದುಳಿದೆ. ಧಾರವಾಡ, ಹಾವೇರಿ, ಉಡುಪಿ ಜಿಲ್ಲೆಗಳಾಗಿ ಒಡೆದ ಮೇಲೆ ಮೂರು ಜಿಲ್ಲೆಗಳು ಬೆಳೆದಿವೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಆಗಬೇಕು. ಇದರಲ್ಲಿ ರಾಜಕೀಯ ಇಲ್ಲವೇ ಇಲ್ಲ. ಜಿಲ್ಲೆ ಇಬ್ಭಾಗಕ್ಕೆ ಕನ್ನಡ ಸಾಹಿತ್ಯ ಪರಿಷತ್ ಬೆಂಬಲ ಒತ್ತಾಯ ಮಾಡುತ್ತದೆ ಎಂದು ಹೇಳಿದರು.
ಮೇ ತಿಂಗಳಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನ, ಲಾಂಛನ ಧ್ಯೇಯವಾಕ್ಯ ಆಹ್ವಾನಿಸಿದ ಕಸಾಪ ಅಧ್ಯಕ್ಷ ಮಹೇಶ ಜೋಶಿ
ಹಾವೇರಿ: ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೇ ತಿಂಗಳಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು (Sahitya Parishat) ನಿರ್ಧರಿಸಿದೆ. ಸಮ್ಮೇಳನಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಪರಿಷತ್ತು ಅಧ್ಯಕ್ಷ ಡಾ ಮಹೇಶ ಜೋಶಿ (Dr Mahesh Joshi) ಹೇಳಿದ್ದಾರೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಹಾಗೂ ಧ್ಯೇಯವಾಕ್ಯವನ್ನು ಸಾರ್ವಜನಿಕರು ಹಾಗೂ ಕಲಾವಿದರಿಂದ ಆಹ್ವಾನಿಸಲಾಗಿದೆ. ಲಾಂಛನ ಹಾಗೂ ಧ್ಯೇಯವಾಕ್ಯವು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಜನಪದ, ಕನ್ನಡ, ಕನ್ನಡಿಗ ಹಾಗೂ ಕರ್ನಾಟಕವನ್ನು ಬಿಂಬಿಸುವಂತೆ ಇರಬೇಕು. ಇದರ ಜೊತೆಗೆ ರಾಜ್ಯದ ಜನಸಮುದಾಯದ ಭಾವನೆಗಳು ಹಾಗೂ ಹಾವೇರಿ ಜಿಲ್ಲೆಯ ಪ್ರಾಮುಖ್ಯತೆ ಸಾರುವ ಅಂಶಗಳನ್ನು ಒಳಗೊಂಡಿರಬೇಕು. ಆಯ್ಕೆಯಾದ ಲಾಂಛನ ಹಾಗೂ ಧ್ಯೇಯವಾಕ್ಯ ರಚಿಸಿದವರಿಗೆ ಸೂಕ್ತ ಗೌರವ ನೀಡಲಾಗುತ್ತದೆ ಎಂದು ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮ್ಮೇಳನದ ಲಾಂಛನ ಹಾಗೂ ಧ್ಯೇಯವಾಕ್ಯ ಸಲ್ಲಿಕೆಗೆ ಮಾರ್ಚ್ 31 ಕೊನೆಯ ದಿನ. ಲಾಂಛನ ಹಾಗೂ ಧ್ಯೇಯವಾಕ್ಯಗಳನ್ನು ಕಳಿಸಬೇಕಾದ ವಿಳಾಸ: ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018, ಇ-ಮೇಲ್ kannadaparishattu@gmail.com ವಿಳಾಸಕ್ಕೆ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
2021ರ ಫೆಬ್ರವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನವವನ್ನು ಕೊವಿಡ್-19ರ ಸಾಂಕ್ರಾಮಿಕ ಪಿಡುಗಿನ ಕಾರಣದಿಂದಾಗಿ ಮುಂದೂಡಲಾಗಿತ್ತು. ಹಾವೇರಿಯಲ್ಲಿ ಈ ಬಾರಿ ನಡೆಯಲಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದೊಡ್ಡರಂಗೇಗೌಡರು ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಸಮ್ಮೇಳಕ್ಕೆ ಸರ್ಕಾರವು ₹ 20 ಕೋಟಿ ಅನುದಾನ ಘೋಷಿಸಿದೆ. ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಸಮ್ಮೇಳನ ನಡೆಯಲಿದೆ. ಸರ್ಕಾರ ಸಾಕಷ್ಟು ಆರ್ಥಿಕ ನೆರವು ಘೋಷಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸ್ವತಃ ನಾನು ಹಾವೇರಿ ಜಿಲ್ಲೆಗೆ ಸೇರಿದವರು. ಅಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಲಾಗುವುದು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.