ಕುಮಟಾ: ಗೋಕರ್ಣದ ಅರಣ್ಯ ಪ್ರದೇಶದಲ್ಲಿ ಮಂಗಗಳ ಸಾವು, ಜನರಲ್ಲಿ ಆಂತಕ
ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಜಿಲ್ಲೆಯ ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆಯಾಗಿತ್ತು. ಇದೀಗ ಕುಮಟಾ ತಾಲೂಕಿನ ಗೋಕರ್ಣ ಅರಣ್ಯ ಪ್ರದೇಶ ಮಂಗಗಳ ಮೃತ ದೇಹಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಕಾರವಾರ, ಮಾ.12: ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ (Kyasanur Forest Disease) ಪ್ರಕರಣಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಮಂಗಗಳ ಸಾವು (Monkey Death) ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ, ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆಯಾಗಿತ್ತು. ಇದೀಗ ಕುಮಟಾ (Kumta) ತಾಲೂಕಿನ ಗೋಕರ್ಣ ಅರಣ್ಯ ಪ್ರದೇಶ ಮಂಗಗಳ ಮೃತ ದೇಹಗಳು ಪತ್ತೆಯಾಗಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಗೋಕರ್ಣದ ಅಶೋಕೆಯ ಅರಣ್ಯ ಭಾಗದಲ್ಲಿ ಎರಡು ಮಂಗಗಳ ಶವಗಳು ಪತ್ತೆಯಾಗಿವೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಂಗಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಇದನ್ನೂ ಓದಿ: ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ
ಮಂಗನ ಕಾಯಿಲೆಗೆ ಐವರು ಸಾವು
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ವ್ಯಾಪಕವಾಗಿ ಹರಡಿದ್ದು, 47 ಮಂದಿಯಲ್ಲಿ ಈ ಕಾಯಿಲೆ ಪತ್ತೆಯಾಗಿತ್ತು. ಈ ಪೈಕಿ ಐದು ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಒಂದು ತಿಂಗಳಿನಿಂದ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರಕ್ಕೆ ಸಿಮಿತವಾಗಿದ್ದ ಮಂಗನ ಕಾಯಿಲೆ, ಅಂಕೊಲಾ ತಾಲೂಕಿಗೆ ವ್ಯಾಪಿಸಿದ್ದೂ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಕಾಯಿಲೆಗೆ ಲಸಿಕೆ ಇಲ್ಲದ ಹಿನ್ನೆಲೆ ಆರೋಗ್ಯ ಇಲಾಖೆಯೂ ಅನಿವಾರ್ಯವಾಗಿ ಮುಂಜಾಗೃತೆ ಕ್ರಮ ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ