ಉತ್ತರ ಕನ್ನಡ: ಇಂದಿನಿಂದ ಯಾಂತ್ರಿಕೃತ ಮೀನುಗಾರಿಕೆಗೆ ಆರಂಭ

ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಾಂತ್ರಿಕೃತ ಮೀನುಗಾರಿಕೆಗೆ ವಿಧಿಸಿದ್ದ ನಿಷೇಧ ಸೋಮವಾರ (ಜು.31) ರಂದು ಕೊನೆಗೊಂಡಿದ್ದು, ಇಂದಿನಿಂದ (ಆ.1) ಮತ್ತೆ ಪ್ರಾರಂಭವಾಗಲಿದೆ.

ಉತ್ತರ ಕನ್ನಡ: ಇಂದಿನಿಂದ ಯಾಂತ್ರಿಕೃತ ಮೀನುಗಾರಿಕೆಗೆ ಆರಂಭ
ಯಾಂತ್ರಿಕೃತ ಮೀನುಗಾರಿಕೆ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on: Aug 01, 2023 | 11:58 AM

ಉತ್ತರ ಕನ್ನಡ: ರಾಜ್ಯದ ಕರಾವಳಿ ಪ್ರದೇಶದಲ್ಲಿ (Costal Karnataka) ಯಾಂತ್ರಿಕೃತ ಮೀನುಗಾರಿಕೆಗೆ (Mechanised Fishing) ವಿಧಿಸಿದ್ದ ನಿಷೇಧ ಸೋಮವಾರ (ಜು.31) ರಂದು ಕೊನೆಗೊಂಡಿದ್ದು, ಇಂದಿನಿಂದ (ಆ.1) ಮತ್ತೆ ಪ್ರಾರಂಭವಾಗಲಿದೆ. ದಕ್ಷಿಣ ಕನ್ನಡ (Dakshin Kannada), ಉಡಪಿ (Udupi), ಉತ್ತರ ಕನ್ನಡ (Uttar Kannada) ಜಿಲ್ಲೆಯ ಯಾಂತ್ರೀಕೃತ ಬೋಟ್‌ಗಳು ಮತ್ತೆ ಸಮುದ್ರಕ್ಕೆ ಇಳಿದಿವೆ. ಈ ಹಿನ್ನೆಲೆ ಮೀನುಗಾರರು ಬೋಟ್‌ಗಳನ್ನು ಸ್ವಚ್ಛಗೊಳಿಸಿ, ಅಗತ್ಯ ವಸ್ತುಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಬೋಟ್‌ಗಳಿಗೆ ಪೂಜೆ ಸಲ್ಲಿಸಿ, ಸಮುದ್ರ ಹಾಗೂ ಗಂಗಾದೇವಿಗೆ ಬಾಗಿನ ಅರ್ಪಿಸಿ ಮೀನುಗಾರಿಗೆ ತೆರಳುತ್ತಿದ್ದಾರೆ.

ಯಾಂತ್ರಿಕೃತ ಮೀನುಗಾರಿಕೆ ಇಂದಿನಿಂದ ಆರಂಭವಾದ ಹಿನ್ನೆಲೆ ಪರ್ಸೀನ್ ಹಾಗೂ ಟ್ರಾಲ್ ಬೋಟ್‌ಗಳು ಸಮುದ್ರಕ್ಕೆ ಇಳಿಯಲಿವೆ. ಹೀಗಾಗಿ ಮೀನುಗಾರರಿಗೆ ಬೇಕಾದ ಸಬ್ಸಿಡಿ ಡೀಸಿಲ್, ಸೀಮೆ ಎಣ್ಣೆ ಹಾಗೂ ಸೌಲಭ್ಯಗಳನ್ನು ಸರಿಯಾದ ಸಮಯಕ್ಕೆ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಯಾಂತ್ರಿಕೃತ ಮೀನುಗಾರಿಕೆ ನಿಷೇಧಕ್ಕೆ ಕಾರಣವೇನು?

ಪ್ರತಿ‌ ವರ್ಷ ಪಶ್ಚಿಮ ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ವರೆಗೆ ಎರಡು ತಿಂಗಳ ಕಾಲ ಯಾಂತ್ರಿಕೃತ ಮೀನುಗಾರಿಕೆಗೆ ನಿಷೇಧವಿರುತ್ತದೆ. ಮಳೆಗಾಲದ ಆರಂಭದ ಎರಡು ತಿಂಗಳ‌ ಈ ಅವಧಿಯಲ್ಲಿ ಮೀನುಗಳು ಸಂತಾನೋತ್ಪತ್ತಿ ಮಾಡುವ ಸಮಯ. ಈ ಅವಧಿಯಲ್ಲಿ ಮೀನುಗಳ ಸಂತತಿ ಹೆಚ್ಚಲಿದೆ. ಈ ಸಂದರ್ಭದಲ್ಲಿ ಮೀನುಗಾರಿಕೆ ನಡೆಸಿದರೆ ಮೀನುಗಳ ಸಂತತಿ ಕಡಿಮೆ ಆಗಿ ಮತ್ಸ್ಯಕ್ಷಾಮ ಆಗುವ ಸಾಧ್ಯತೆ ಇದೆ. ಮಳೆಗಾಲದ ಆರಂಭದ ಈ ಅವಧಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಮೀನುಗಾರರಿಗೆ ಮತ್ತು ಮೀನುಗಾರಿಕೆ ಬೋಟ್​ಗಳಿಗೆ ಅಪಾಯ ಉಂಟು ಮಾಡುತ್ತವೆ. ಹೀಗಾಗಿ ಸರ್ಕಾರ ಎರಡು ತಿಂಗಳು ಯಾಂತ್ರಿಕೃತ ಮೀನುಗಾರಿಕೆಗೆ ನಿಷೇಧ ಹೇರಿದೆ.

ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ಯಾಂತ್ರಿಕೃತ ಮೀನುಗಾರಿಕೆಗೆ ವಿರೋಧ

ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಾಂತ್ರಿಕೃತ ಅವೈಜ್ಞಾನಿಕ ಮೀನುಗಾರಿಕೆ ನಡೆಸಲಾಗುತ್ತದೆ. ಅರಬ್ಬಿ ಸಮುದ್ರದಲ್ಲಿ ದೊಡ್ಡದೊಡ್ಡ ದೋಣಿಗಳಿಂದ ಲೈಟ್ ಫಿಶಿಂಗ್ ಮತ್ತು ಬುಲ್ ಟ್ರಾಲ್ ಫಿಶಿಂಗ್ ನಡೆಸಲಾಗುತ್ತಿದೆ ಇದರಿಂದ ಸಾಂಪ್ರದಾಯಿಕ ಮೀನುಗಾರರಿಗೆ ಹೊಡೆತ ಬಿದ್ದಿದೆ. ನಾಡದೋಣಿ ಮೀನುಗಾರರ ಭವಿಷ್ಯದ ಸುರಕ್ಷತೆಗಾಗಿ ಬೆಳಕು ಆಧಾರಿತ ಮೀನುಗಾರಿಕೆ ಸಂಪೂರ್ಣ ನಿಷೇಧಿಸಬೇಕೆಂದು ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್