AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಅರೆಸ್ಟ್ ಆದ ಮಂಕಿ ಠಾಣೆ PSI ಮಾಡಿದ್ದೇನು ಗೊತ್ತಾ?

Uttara Kannada News: ಕಾನೂನು ರಕ್ಷಕನೇ ಭಕ್ಷಕನಾದ ಆಘಾತಕಾರಿ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕೆಲವೇ ತಿಂಗಳ ಹಿಂದಷ್ಟೇ ವರ್ಗಾವಣೆಗೊಂಡು ಮಂಕಿ ಪೊಲೀಸ್ ಠಾಣೆಗೆ ಬಂದಿದ್ದ ಸಬ್ ಇನ್ಸ್‌ಪೆಕ್ಟರ್ (PSI) ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಷ್ಟಕ್ಕೂ ಈ ಪೊಲೀಸಪ್ಪ ಮಾಡಿದ್ದೇನು? ಎನ್ನುವ ವಿವರ ಇಲ್ಲಿದೆ.

ಬೇಲಿಯೇ ಎದ್ದು ಹೊಲ ಮೇಯ್ದ ಕತೆ: ಅರೆಸ್ಟ್ ಆದ ಮಂಕಿ ಠಾಣೆ PSI ಮಾಡಿದ್ದೇನು ಗೊತ್ತಾ?
Psi Abhinandan Gowda
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jul 05, 2026 | 3:50 PM

Share

ಮುಖ್ಯಾಂಶಗಳು

  • ಫೋಕ್ಸೊ ಪ್ರಕರಣಲದಲ್ಲಿ ಮಂಕಿ ಪೊಲೀಸ್​​ ಠಾಣೆ ಪಿಎಸ್​ಐ ಅಭಿನಂದನ್ ಗೌಡ ಬಂಧನ
  • ಉತ್ತರ ಕನ್ನಡ ಜಿಲ್ಲೆ ಭಟ್ಕಳ ನಗರ ಠಾಣೆ ಪೊಲೀಸರಿಂದ PSI ಬಂಧನ
  • ಕನಕಪುರ ಮೂಲದ ಅಭಿನಂದನ್ ಗೌಡ ,ಕೆಲವು ತಿಂಗಳ ಹಿಂದಷ್ಟೇ ಮಂಕಿ ಠಾಣೆಗೆ ವರ್ಗಾವಣೆ ಆಗಿ ಬಂದಿದ್ದ

ಕಾರವಾರ, (ಜುಲೈ 05): ಭಟ್ಕಳದ (Bhatkal) ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ದೂರಿನ ಅನ್ವಯ ಭಟ್ಕಳ ನಗರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಅಭಿನಂದನ್ ಗೌಡನನ್ನು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ಮೂಲದ ಅಭಿನಂದನ್ ಗೌಡ, ಕೆಲವು ತಿಂಗಳ ಹಿಂದಷ್ಟೇ ಮಂಕಿ ಠಾಣೆಗೆ ಎಲ್​​​ಎನ್​​ಒ ಆಗಿ ಬಂದಿದ್ದು, ಇದೀಗ ಫೋಕ್ಸೊ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ.

ಪ್ರಕರಣದ ಹಿನ್ನೆಲೆ

ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಿಎಸ್‌ಐ ಅಭಿನಂದನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. 16 ವರ್ಷದ ಬಾಲಕಿಯನ್ನ ಪುಸಲಾಯಿಸಿ ಭಟ್ಕಳಕ್ಕೆ ಕರೆತಂದು ಲಾಡ್ಜ್ ನಲ್ಲಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಸಂತ್ರಸ್ತ ಅಪ್ರಾಪ್ತ ಬಾಲಕಿಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು. ಬಾಲಕಿಯ ದೂರಿಗೆ ತಕ್ಷಣವೇ ಸ್ಪಂದಿಸಿದ ಭಟ್ಕಳ ನಗರ ಠಾಣೆಯ ಪೊಲೀಸರು ಆರೋಪಿ ಪಿಎಸ್‌ಐ ಅಭಿನಂದನ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತದನಂತರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು, ಸದ್ಯ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.ತನಿಖೆ ವೇಳೆ ಅಸಲಿ ಸತ್ಯ ಹೊರಗೆ ಬರಲಿದೆ.

ಇನ್ನು ಸಾರ್ವಜನಿಕರ ಜೀವ, ಆಸ್ತಿ ಮತ್ತು ಗೌರವದ ರಕ್ಷಣೆಯ ಹೊಣೆ ಹೊತ್ತಿರುವ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧವೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Sun, 5 July 26

Follow Us
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
10 ವರ್ಷ ಜೈಲು, 10 ಕೋಟಿ ರೂ ದಂಡ ಎಂದ ಸಚಿವ ಜೋಶಿ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ