AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲೂ ಕಾಣಿಸಿಕೊಂಡ ಮಡ್ರಾಸ್ ಐ ಸೋಂಕು: ಮೀನುಗಾರಿಕೆಗೆ ತೆರಳಲು ಅಡ್ಡಿ

Uttara Kannada News: ದೇಶದೆಲ್ಲೆಡೆ ಜನರ ಕಣ್ಣು ಕೆಂಪು ಮಾಡಿರುವ ಮಡ್ರಾಸ್ ಐ ಸೋಂಕು ಇದೀಗ ಉತ್ತರಕನ್ನಡ ಕರಾವಳಿಯಲ್ಲಿ ಕಾಣಿಸಿಕೊಂಡಿದೆ. ಆದರೆ ಇದೀಗ ಹೊರರಾಜ್ಯದಿಂದ ಬರುತ್ತಿರುವ ಕಾರ್ಮಿಕರಲ್ಲಿ ಕಣ್ಣುಬೇನೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು ಮೀನುಗಾರಿಕೆಗೆ ತೆರಳಲು ಅಡ್ಡಿಯುಂಟು ಮಾಡಿದೆ.

ಕರಾವಳಿಯಲ್ಲೂ ಕಾಣಿಸಿಕೊಂಡ ಮಡ್ರಾಸ್ ಐ ಸೋಂಕು: ಮೀನುಗಾರಿಕೆಗೆ ತೆರಳಲು ಅಡ್ಡಿ
ಮಡ್ರಾಸ್ ಐ ಸೋಂಕು
ವಿನಾಯಕ ಬಡಿಗೇರ್​
| Edited By: |

Updated on: Aug 05, 2023 | 9:24 PM

Share

ಉತ್ತರ ಕನ್ನಡ, ಆಗಸ್ಟ್​ 05: ಎರಡು ತಿಂಗಳ ನಿಷೇಧ ಅವಧಿ ಮುಗಿದು ಕರಾವಳಿಯಲ್ಲಿ ಅಗಸ್ಟ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ಆರಂಭವಾಗಿದೆ. ಮಳೆಗಾಲದ ಆರಂಭದಲ್ಲಿ ರಜೆಗೆ ಊರುಗಳಿಗೆ ತೆರಳಿದ್ದ ಆಳಸಮುದ್ರ ಮೀನುಗಾರಿಕಾ ಬೋಟುಗಳ ಕಾರ್ಮಿಕರು ಇದೀಗ ಕೆಲಸಕ್ಕೆ ಮರಳುತ್ತಿದ್ದು ಬೋಟುಗಳು ಮೀನುಗಾರಿಕೆಗೆ ತೆರಳಲು ಸನ್ನದ್ಧವಾಗುತ್ತಿವೆ. ಆದರೆ ಇದೀಗ ಹೊರರಾಜ್ಯದಿಂದ ಬರುತ್ತಿರುವ ಕಾರ್ಮಿಕರಲ್ಲಿ ಕಣ್ಣುಬೇನೆ ಸಮಸ್ಯೆ (Madras eye infection) ಕಾಣಿಸಿಕೊಳ್ಳುತ್ತಿದ್ದು ಮೀನುಗಾರಿಕೆಗೆ ತೆರಳಲು ಅಡ್ಡಿಯುಂಟು ಮಾಡಿದೆ.

ದೇಶದೆಲ್ಲೆಡೆ ಜನರ ಕಣ್ಣು ಕೆಂಪು ಮಾಡಿರುವ ಮಡ್ರಾಸ್ ಐ ಸೋಂಕು ಇದೀಗ ಉತ್ತರಕನ್ನಡ ಕರಾವಳಿಯಲ್ಲಿ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಮೀನುಗಾರಿಕೆ ಮೇಲಿನ ನಿಷೇಧ ಅವಧಿ ಮುಗಿದು ಯಾಂತ್ರೀಕೃತ ಬೋಟುಗಳು ಮೀನುಗಾರಿಕೆಗೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕಾರವಾರದ ಬೈತಕೋಲ ಮೀನುಗಾರಿಕಾ ಬಂದರಿನಲ್ಲಿ ಪರ್ಸಿನ್ ಹಾಗೂ ಟ್ರಾಲರ್ ಬೋಟುಗಳು ಮೀನುಗಾರಿಕೆಗೆ ಮುಂದಾಗಿವೆ.

ಇದನ್ನೂ ಓದಿ: ಕಾರವಾರ: ಕಡಲತೀರದಲ್ಲಿ ಸಿಲಿಂಡರ್ ರೂಪದ ವಸ್ತು ಪತ್ತೆ, ಜನರಲ್ಲಿ ಆತಂಕ

ಆಳಸಮುದ್ರಕ್ಕೆ ತೆರಳುವ ಬೋಟುಗಳಲ್ಲಿ ಹೆಚ್ಚಿನದಾಗಿ ಹೊರರಾಜ್ಯದ ಕಾರ್ಮಿಕರೇ ಕೆಲಸಗಾರರಾಗಿದ್ದು ಓರಿಸ್ಸಾ, ಜಾರ್ಖಂಡ್, ಛತ್ತೀಸ್‌ಗಢ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಾರೆ. ಇದೀಗ ಹೀಗೆ ಬೋಟ್ ಕೆಲಸಕ್ಕೆಂದು ಆಗಮಿಸುತ್ತಿರುವ ನೂರಾರು ಕಾರ್ಮಿಕರಲ್ಲಿ ಕಣ್ಣುಬೇನೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಬೋಟುಗಳಲ್ಲಿ 20 ರಿಂದ 30 ಮಂದಿ ಕಾರ್ಮಿಕರು ಒಟ್ಟಾಗಿ ಇರುವುದರಿಂದ ಕಣ್ಣುಬೇನೆ ಸೋಂಕು ಇದೀಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿದ್ದು, ಸ್ಥಳೀಯ ಮೀನುಗಾರರಿಗೂ ಸಮಸ್ಯೆ ಉಂಟುಮಾಡುತ್ತಿದೆ.

ಒಮ್ಮೆ ಯಾಂತ್ರೀಕೃತ ಬೋಟುಗಳು ಆಳಸಮುದ್ರ ಮೀನುಗಾರಿಕೆಗೆ ಹೊರಟರೆ ವಾರಗಳ ಕಾಲ ಸಮುದ್ರದಲ್ಲೇ ಕಾಲ ಕಳೆಯುತ್ತವೆ. ಇದೀಗ ಕಾರ್ಮಿಕರಲ್ಲಿ ಕಣ್ಣುಬೇನೆ ಸೋಂಕು ಕಾಣಿಸಿಕೊಂಡಿರುವುದರಿಂದ ಸಾಕಷ್ಟು ಮಂದಿ ಕಾರ್ಮಿಕರು ಕೆಲಸ ಮಾಡಲಾಗದೇ ಪರದಾಡುವಂತಾಗಿದ್ದು, ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತಿರುವುದರಿಂದ ಮೀನುಗಾರಿಕೆಗೆ ತೆರಳುವುದಕ್ಕೂ ಇದೀಗ ಸಮಸ್ಯೆ ಎದುರಾಗಿದೆ.

ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಸಮುದಾಯದವರಿಂದಲೇ 2 ಕುಟುಂಬಗಳಿಗೆ ಬಹಿಷ್ಕಾರ: ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಮೊರೆ ಹೋದ ಕುಟುಂಬಸ್ಥರು

ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯಾಧಿಕಾರಿಗಳು, ಕಣ್ಣುಬೇನೆ ಕಾಣಿಸಿಕೊಂಡಿರುವ ಬೈತಖೋಲ ಬೋಟಿನ ಕಾರ್ಮಿಕರನ್ನ ತಪಾಸಣೆಗೊಳಪಡಿಸಲು ಆರೋಗ್ಯ ಸಿಬ್ಬಂದಿಗೆ ಸೂಚಿಸಲಾಗಿದೆ. ಸೋಂಕು ಕಾಣಿಸಿಕೊಂಡವರು ಇತರರಿಂದ ಅಂತರ ಕಾಯ್ದುಕೊಳ್ಳಬೇಕಿದ್ದು, ವಾರದೊಳಗೆ ಕಡಿಮೆಯಾಗದಿದ್ದಲ್ಲಿ ಕಣ್ಣಿನ ವೈದ್ಯರನ್ನ ಸಂಪರ್ಕಿಸಿ ಎಂದು ಸಲಹೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಣ್ಣುಬೇನೆ ಸೋಂಕಿನ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿದ್ದು, ಸಾರ್ವಜನಿಕರು ಅಗತ್ಯ ಮುಂಜಾಗ್ರತೆವಹಿಸಿ ಸೋಂಕು ತಗಲದಂತೆ ಎಚ್ಚರಿಕೆ ವಹಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು