AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಸ್ಥಗಿತವಾಗಿದ್ದ ಮರಳುಗಾರಿಕೆ ಪ್ರಾರಂಭಿಸಲು ಜಿಲ್ಲಾಡಳಿತ ಸಿದ್ದತೆ

ಜಿಲ್ಲೆಯಲ್ಲಿ ಮರಳುಗಾರಿಕೆ ಬಂದ್ ಆಗಿದ್ದು, ಅನಧಿಕೃತವಾಗಿ ಮರಳನ್ನ ತೆಗೆದು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಜೊತೆಗೆ ಸಾಮಾನ್ಯ ಜನರಿಗೆ ಮನೆಕಟ್ಟಿಕೊಳ್ಳಲು ಮರಳಿನ ಅಭಾವ ಉಂಟಾಗಿದ್ದು ಹೀಗಾಗಿ ಕೂಡಲೇ ಜಿಲ್ಲಾಡಳಿತ ಮರಳಿನ ಕೊರತೆ ನಿಗಿಸುವ ನಿಟ್ಟಿನಲ್ಲಿ ಪ್ರಯತ್ನ ಪಡಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

ಉತ್ತರ ಕನ್ನಡ: ಸ್ಥಗಿತವಾಗಿದ್ದ ಮರಳುಗಾರಿಕೆ ಪ್ರಾರಂಭಿಸಲು ಜಿಲ್ಲಾಡಳಿತ ಸಿದ್ದತೆ
ಉತ್ತರ ಕನ್ನಡ
TV9 Web
| Edited By: |

Updated on: Feb 01, 2023 | 8:57 AM

Share

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕಳೆದ ಎಂಟು ತಿಂಗಳಿನಿಂದ ಮರಳುಗಾರಿಕೆ ಬಂದ್ ಆಗಿದ್ದು, ಜಿಲ್ಲೆಯಲ್ಲಿ ಮರಳಿನ ಅಭಾವ ಸಹ ಎದುರಾಗಿದೆ. ಇದರ ನಡುವೆ ಸದ್ದಿಲ್ಲದೇ ಅಕ್ರಮವಾಗಿ ಮರಳನ್ನ ಸಾಗಾಟ ಮಾಡುವ ದಂಧೆ ಕೂಡ ಜೋರಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅದರಲ್ಲೂ ಕಾಳಿ ನದಿಯಲ್ಲಿ ಈ ಹಿಂದೆ ಮರಳನ್ನ ತೆಗೆಯಲು ಅವಕಾಶ ನೀಡಿದಾಗ ಹೆಚ್ಚಿನ ಪ್ರಮಾಣದಲ್ಲಿ ಮರಳನ್ನ ಶೇಖರಣೆ ಮಾಡಿ, ಈಗ ರಾತ್ರೋರಾತ್ರಿ ಕದ್ದು ಗೋವಾಕ್ಕೆ ಹಾಗೂ ಬೇರಡೆಗೆ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಗೋವಾ ಗಡಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದನ್ನ ಸಹ ಕಾರವಾರ ಉಪವಿಭಾಗಾಧಿಕಾರಿ ಹಿಡಿದು ಪ್ರಕರಣ ದಾಖಲಿಸಿದ್ದರು. ಅಕ್ರಮವಾಗಿ ಮರಳು ವಹಿವಾಟಕ್ಕೆ ಕಡಿವಾಣ ಹಾಕುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ.

ಇನ್ನು ಜಿಲ್ಲೆಯ ಕಾರವಾರ ತಾಲೂಕಿನ ಕಾಳಿ, ಅಂಕೋಲಾ ತಾಲೂಕಿನ ಗಂಗಾವಳಿ, ಕುಮಟಾ ತಾಲೂಕಿನ ಅಘನಾಶಿನಿ ಹಾಗೂ ಹೊನ್ನಾವರ ತಾಲೂಕಿನ ಶರಾವತಿ ನದಿಯಲ್ಲಿ ಮರಳನ್ನು ತೆಗೆಯಲು ಅವಕಾಶ ನೀಡಲಾಗಿತ್ತು. ಸುಮಾರು 100ಕ್ಕೂ ಅಧಿಕ ಮಂದಿ ಲೀಸ್ ಪಡೆದವರು ಮರಳು ತೆಗೆಯುತ್ತಿದ್ದು ಸದ್ಯ ಮರಳುಗಾರಿಕೆ ಬಂದ್ ಆದ ಹಿನ್ನಲೆಯಲ್ಲಿ ಜನರಿಗೆ ಮರಳಿನ ಅವಶ್ಯಕತೆ ಹೆಚ್ಚಾಗಿದೆ. ಈ ಹಿನ್ನಲೆ ಅನಧಿಕೃತವಾಗಿ ಮರಳನ್ನ ತೆಗೆದು ಸಾಗಾಟ ಮಾಡುವ ಕೃತ್ಯಕ್ಕೆ ಇಳಿದಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಜೊತೆಗೆ ಸಾಮಾನ್ಯ ಜನ ಮನೆ ಕಟ್ಟಿಕೊಳ್ಳಲು ಇತರೆ ಕಾಮಗಾರಿಗಳಿಗೆ ಮರಳಿನ ಅವಶ್ಯಕತೆ ಇದೆ. ಆದರೆ ಈ ಬಗ್ಗೆ ಜಿಲ್ಲಾಡಳಿತ ತೆಲೆಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಮರಳಿನ ಅಭಾವ ಉಂಟಾಗಿದೆ ಇದಕ್ಕೆ ಶೀಘ್ರದಲ್ಲಿ ಪರಿಹಾರ ನೀಡಿ ಎನ್ನುವುದು ಜನರ ಒತ್ತಾಸೆಯಾಗಿದೆ.

ಈ ಬಗ್ಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನ ಕೇಳಿದ್ರೆ ಸಿಆರ್‌ಜೆಡ್ ವಲಯದಲ್ಲಿ ಮರಳನ್ನು ತೆಗೆಯಲಿಕ್ಕೆ ಅನುಮತಿ ಇಲ್ಲ. ಒಳನಾಡಿನ ಪ್ರದೇಶದಲ್ಲಿ ಮರಳು ತೆಗೆಯಲು ಅವಕಾಶ ಇದೆ. ಅದು ಮನೆ ಕಟ್ಟಿಕೊಳ್ಳುವಂತವರಿಗೆ ಮಾತ್ರ. ಜಿಲ್ಲೆಯಲ್ಲಿ ಮರಳಿನ ಅಭಾವ ಇದೆ ಎಂಬುದು ನನ್ನ ಗಮನಕ್ಕೆ ಬಂದಿದೆ ಶೀಘ್ರದಲ್ಲಿ ಅಧಿಕಾರಿಗಳ ಸಭೆ ಕರೆದು ಡ್ಯಾಂ ಗಳಲ್ಲಿ ಮರಳು ತೆಗೆಯಲು ಅವಕಾಶ ಇದೆಯಾ ಹಾಗೂ ಮರಳನ್ನು ಹೇಗೆ ತರಿಸುವುದು ಎನ್ನುವುದರ ಬಗ್ಗೆ ಸಭೆ ಮಾಡುತ್ತೆನೆ ಎನ್ನುತ್ತಾರೆ.

ಇದನ್ನೂ ಓದಿ:ಕಾರವಾರ: ಅವೈಜ್ಞಾನಿಕವಾಗಿ ಗುಡ್ಡ ಕೊರೆದು ರಸ್ತೆ ನಿರ್ಮಾಣ; ಗುಡ್ಡ ಕುಸಿತದ ಭೀತಿಯಲ್ಲಿ ಗ್ರಾಮಸ್ಥರು

ಒಟ್ಟಿನಲ್ಲಿ ಜನರು ಅಭಿವೃದ್ಧಿ ಕಾರ್ಯಗಳಿಗೆ ಮರಳು ಸಿಗದೇ ಪರದಾಡುತ್ತಿರುವ ಸಂದರ್ಭದಲ್ಲಿ ಅಕ್ರಮವಾಗಿ ಗೋವಾಕ್ಕೆ ಸಾಗಾಟ ಮಾಡುತ್ತಿರೋದು ಜೊತೆಗೆ ಕಾಳ ಸಂತೆಯಲ್ಲಿ ಅತೀ ಹೆಚ್ಚಿನ ದರದಲ್ಲಿ ಮರಳು ಮಾರಾಟವಾಗುತ್ತಿದ್ದು ಇದು ಜನ ಸಾಮಾನ್ಯರಿಗೆ ತೊಂದರೆಯಾಗಿದೆ. ಆದಷ್ಟು ಬೇಗ ಜಿಲ್ಲಾಡಳಿತ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಜನರಿಗೆ ಅನುಕೂಲವಾಗುವಂತೆ ಮಾಡಬೇಕಾಗಿದೆ.

ವರದಿ: ವಿನಾಯಕ ಬಡಿಗೇರ ಟಿವಿ 9 ಕಾರವಾರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?