ಜೂ.1ರಿಂದ ಆ. 31ರವರೆಗೆ ದಾಂಡೇಲಿಗೆ ನೋ ಎಂಟ್ರಿ; ಸ್ಕೂಬಾ ಡೈವಿಂಗ್, ರ್ಯಾಫ್ಟಿಂಗ್‌ಗೆ ಬ್ರೇಕ್ ಹಾಕಿದ ಉತ್ತರ ಕನ್ನಡ ಡಿಸಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಗಾಲದ ಸುರಕ್ಷತೆಗಾಗಿ ಜೂನ್ 1 ರಿಂದ ಆಗಸ್ಟ್ 31 ರವರೆಗೆ ಎಲ್ಲಾ ಜಲಸಾಹಸ ಕ್ರೀಡೆಗಳನ್ನು ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಸ್ಕೂಬಾ ಡೈವಿಂಗ್, ಬೋಟಿಂಗ್, ರಾಫ್ಟಿಂಗ್ ಸೇರಿ ಎಲ್ಲ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಪ್ರವಾಸಿಗರ ಪ್ರಾಣ ರಕ್ಷಣೆ ಇದರ ಮುಖ್ಯ ಉದ್ದೇಶವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಜೂ.1ರಿಂದ ಆ. 31ರವರೆಗೆ ದಾಂಡೇಲಿಗೆ ನೋ ಎಂಟ್ರಿ; ಸ್ಕೂಬಾ ಡೈವಿಂಗ್, ರ್ಯಾಫ್ಟಿಂಗ್‌ಗೆ ಬ್ರೇಕ್ ಹಾಕಿದ ಉತ್ತರ ಕನ್ನಡ ಡಿಸಿ
ಸಾಂದರ್ಭಿಕ ಚಿತ್ರ
Edited By:

Updated on: May 31, 2026 | 4:36 PM

ಕಾರವಾರ, ಮೇ.31 : ಮಳೆಗಾಲದ ಆರಂಭ ಹಾಗೂ ಸಮುದ್ರದಲ್ಲಿನ ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ (ಜೂನ್ 1) ಅನ್ವಯವಾಗುವಂತೆ ಮುಂದಿನ ಮೂರು ತಿಂಗಳ ಕಾಲ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳನ್ನು (Water Sports) ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಮಳೆಗಾಲದಲ್ಲಿ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ. ಜೂನ್ 1 ರಿಂದ ಆಗಸ್ಟ್ 31 ರ ವರೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಜಲಸಾಹಸ ಕ್ರೀಡೆಗಳನ್ನು ನಡೆಸುವಂತಿಲ್ಲ. ಅರಬ್ಬಿ ಸಮುದ್ರ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಇತರೆ ನೀರಿನ ಆಕರಗಳಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಈ ನಿಷೇಧ ಅನ್ವಯಿಸಲಿದೆ.

ಈ ಆದೇಶದ ಅನ್ವಯ ನೇರ ಪ್ರವಾಸಿ ಆಕರ್ಷಣೆಗಳಾದ ಅರಬ್ಬಿ ಸಮುದ್ರದಲ್ಲಿನ ಪ್ರಸಿದ್ಧ ಸ್ಕೂಬಾ ಡೈವಿಂಗ್ (Scuba Diving), ಶರಾವತಿ ನದಿಯಲ್ಲಿನ ಬೋಟಿಂಗ್ (Boating) ಹಾಗೂ ದಾಂಡೇಲಿ ಭಾಗದ ಕಾಳಿ ನದಿಯಲ್ಲಿ ನಡೆಯುವ ಸಾಹಸಮಯ ವೈಟ್‌ವಾಟರ್ ರ್ಯಾಫ್ಟಿಂಗ್ (Rafting) ಸೇರಿದಂತೆ ಎಲ್ಲಾ ಬಗೆಯ ಕಮರ್ಷಿಯಲ್ ಜಲಸಾಹಸ ಕ್ರೀಡೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!

ನಾಳೆಯಿಂದ ಜಿಲ್ಲೆಯ ಯಾವುದೇ ಕಡಲತೀರ ಅಥವಾ ನದಿ ತೀರಗಳಲ್ಲಿ ನಿಯಮ ಮೀರಿ ಜಲಸಾಹಸ ಕ್ರೀಡೆಗಳನ್ನು ಆಯೋಜಿಸುವುದು ಕಂಡುಬಂದರೆ, ಅಂತಹ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಳೆಗಾಲದಲ್ಲಿ ಸಮುದ್ರ ಮತ್ತು ನದಿಗಳಲ್ಲಿ ನೀರಿನ ಹರಿವು ಹಾಗೂ ಅಲೆಗಳ ತೀವ್ರತೆ ಹೆಚ್ಚಿರುವುದರಿಂದ ಪ್ರವಾಸಿಗರು ಸಹ ಸಹಕರಿಸಬೇಕಾಗಿ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More
Loading...
Unable to load recommendations.
Follow Us