ಕಾರವಾರದ ಪ್ರಯಾಣಿಕರಿಗೆ ಬಿಗ್​​ ಗುಡ್​​ನ್ಯೂಸ್: ನವೆಂಬರ್ 3ನೇ ವಾರದಲ್ಲಿ ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಸಂಚಾರ

ಕರಾವಳಿಗೆ ಬಹುನಿರೀಕ್ಷಿತ ಬೆಂಗಳೂರು-ಕಾರವಾರ, ಮಡಗಾಂವ್ ವಂದೇ ಭಾರತ್ ರೈಲು ನವೆಂಬರ್‌ನಲ್ಲಿ ಸಂಚಾರ ಆರಂಭಿಸಲಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಭರವಸೆ ನೀಡಿದ್ದಾರೆ. ಕೊಂಕಣ ರೈಲ್ವೆ ವಿಲೀನ ಹಾಗೂ ಚಿಕ್ಕಮಗಳೂರು-ಬೆಂಗಳೂರು ಇಂಟರ್‌ಸಿಟಿ ರೈಲು ಸೇರಿದಂತೆ ಹಲವು ರೈಲ್ವೆ ಅಭಿವೃದ್ಧಿ ಬೇಡಿಕೆಗಳ ಬಗ್ಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದು ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ.

ಕಾರವಾರದ ಪ್ರಯಾಣಿಕರಿಗೆ ಬಿಗ್​​ ಗುಡ್​​ನ್ಯೂಸ್: ನವೆಂಬರ್ 3ನೇ ವಾರದಲ್ಲಿ ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಸಂಚಾರ
ಅಶ್ವಿನಿ ವೈಷ್ಣವ್ ಕೋಟ ಶ್ರೀನಿವಾಸ ಪೂಜಾರಿ
Image Credit source: Tv9 kannada

Updated on: Oct 30, 2026 | 1:28 PM

ಉಡುಪಿ, ಅ.30: ಕರಾವಳಿ ಹಾಗೂ ಮಲೆನಾಡು ಭಾಗದ ರೈಲ್ವೆ ಪ್ರಯಾಣಿಕರ ದೀರ್ಘಕಾಲದ ಕನಸು ನನಸಾಗುವ ಕಾಲ ಹತ್ತಿರ ಬಂದಿದೆ. ಬಹುನಿರೀಕ್ಷಿತ ಬೆಂಗಳೂರು-ಕಾರವಾರ ಹಾಗೂ ಮಡಗಾಂವ್ ವಂಡೇ ಭಾರತ್ (Vande Bharat) ರೈಲುಗಳ ಸಂಚಾರಕ್ಕೆ ಮುಂಬರುವ ನವೆಂಬರ್ ಮೂರನೇ ವಾರದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಚಾಲನೆ ನೀಡಲಿದ್ದಾರೆ. ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಚಿವರು ಈ ಭರವಸೆ ನೀಡಿದ್ದಾರೆ.

ರೈಲ್ವೆ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಗೆ ವಂಡೇ ಭಾರತ್ ರೈಲು ಸೇವೆ ಘೋಷಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಶಾಲೂ ಹೊದಿಸಿ, ಹೂಗುಚ್ಛ ನೀಡಿ ಆತ್ಮೀಯವಾಗಿ ಅಭಿನಂದಿಸಿದರು.

ಇಲ್ಲಿದೆ ನೋಡಿ ಎಕ್ಸ್​​​ ಪೋಸ್ಟ್​:

ಕೊಂಕಣ ರೈಲ್ವೆ ವಿಲೀನ ಪ್ರಸ್ತಾವನೆ ಹಾಗೂ ಇತರ ಪ್ರಮುಖ ಬೇಡಿಕೆಗಳು:

ಭೇಟಿಯ ವೇಳೆ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಗಂಭೀರ ವಿಷಯಗಳನ್ನು ಸಂಸದರು ಸಚಿವರ ಗಮನಕ್ಕೆ ತಂದರು. ಕೊಂಕಣ ರೈಲ್ವೆ ನಿಗಮ ಎದುರಿಸುತ್ತಿರುವ ಆರ್ಥಿಕ ಮುಗ್ಗಟ್ಟಿನಿಂದಾಗಿ ಮಾರ್ಗದ ದ್ವಿಪಥೀಕರಣ (Doubling) ಹಾಗೂ ಮೂಲಸೌಕರ್ಯ ಅಭಿವೃದ್ಧಿ ವಿಳಂಬವಾಗುತ್ತಿದೆ. ಹೀಗಾಗಿ ಕೇರಳ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರಗಳೊಂದಿಗೆ ಚರ್ಚಿಸಿ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಕೋಟ ಮನವಿ ಮಾಡಿದರು.

ಇದನ್ನೂ ಓದಿ: ಮಾರ್ಗಮಧ್ಯೆ ತುಂಬು ಗರ್ಭಿಣಿಗೆ ಹೆರಿಗೆ ನೋವು: ನೇರ ಆಸ್ಪತ್ರೆಗೆ ಬಸ್ ಚಲಾಯಿಸಿ ಸಮಯಪ್ರಜ್ಞೆ ಮೆರೆದ ಚಾಲಕ ರಾಜೇಶ್

ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಈಗಾಗಲೇ ವಿಲೀನ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿರುವುದಾಗಿ ಸಂಸದರು ಸಚಿವರಿಗೆ ಮಾಹಿತಿ ನೀಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಈ ಪ್ರಕ್ರಿಯೆಗೆ ವಿಶೇಷ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಚಿಕ್ಕಮಗಳೂರು ಮತ್ತು ಬೆಂಗಳೂರು ನಡುವೆ ದಿನನಿತ್ಯದ ಇಂಟರ್‌ಸಿಟಿ ರೈಲು ಆರಂಭಿಸುವ ಬೇಡಿಕೆಗೂ ತಕ್ಷಣವೇ ಕ್ರಮಕೈಗೊಳ್ಳುವುದಾಗಿ ರೈಲ್ವೆ ಸಚಿವರು ಭೇಟಿ ವೇಳೆ ಭೇಟಿ ನೀಡಿದ್ದಾರೆ. ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಕೆಳಸೇತುವೆ ಹಾಗೂ ಮೇಲ್ಸೇತುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ ಮನವಿ ಮಾಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us