AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು

ಬಹು ವರ್ಷಗಳ ಬೇಡಿಕೆಯಾಗಿರುವ ಉತ್ತರ ಕನ್ನಡ ಭಾಗದ ಜನರಿಗೆ ಕೊನೆಗೂ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಭಾಗ್ಯ ಸಿಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಸಿರು ನಿಶಾನೆ ತೋರಿದ್ದಾರೆ. ಹೀಗಾಗಿ ಈ ಭಾಗದ ಜನರು ನಿಟ್ಟುಸಿರು ಬಿಡುವಂತಾಗಿದೆ. ಇನ್ನೂ ಹೊಸ ಆಸ್ಪತ್ರೆ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಎನ್ನುವುದು ಈ ಕೆಳಗಿನಂತಿದೆ.

ಸಿಎಂ ಸಿದ್ದರಾಮಯ್ಯ ಬಂಪರ್ ಘೋಷಣೆ: ಉತ್ತರ ಕನ್ನಡ ಜನರ ದಶಕಗಳ ಕನಸು ನನಸು
Siddaramaiah
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on: Feb 22, 2026 | 7:15 PM

Share

ಕಾರವಾರ, (ಫೆಬ್ರವರಿ 22): ಹಲವು ವರ್ಷಗಳಿಂದ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  (super multi specialty hospital)ಬೇಕೆಂಬ ಉತ್ತರ ಕನ್ನಡ (Uttara Kannada) ಜಿಲ್ಲೆಯ ಜನರ ಕನಸು ನನಸಾಗಿದೆ. ಹೌದು….ಮುಂದಿನ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಘೋಷಣೆ ಮಾಡಿದ್ದಾರೆ. ಈ ಮೂಲಕ ಉತ್ತರ ಕನ್ನಡ ಭಾಗದ ಜನರ ಬಹು ವರ್ಷಗಳ ಬೇಡಿಕೆಯನ್ನು ಸಿದ್ದರಾಮಯ್ಯ ಈಡೇರಿಸಿದ್ದಾರೆ.ಅಪಘಾತಗಳು ಸಂಭವಿಸಿದಾಗ ಈ ಜಿಲ್ಲೆಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲದೇ ಹುಬ್ಬಳ್ಳಿಗೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈಗ ಸಿಎಂ ಆಸ್ಪತ್ರೆ ಘೋಷಣೆ ಮಾಡಿದ್ದರಿಂದ ಈ ಭಾಗದ ಜನರು ನಿಟ್ಟುಸಿರು ಬಿಡುವಂತಾಗಿದೆ.

ಕಾರವಾರದಲ್ಲಿ ಇಂದು (ಫೆಬ್ರವರಿ 22) 450 ಬೆಡ್‌ಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಶಾಸಕ ಸತೀಶ್ ಸೈಲ್ ಮನವಿ ಮೇರೆಗೆ ಮುಂದಿನ ರಾಜ್ಯ ಆಯವ್ಯಯದಲ್ಲಿ (ಬಜೆಟ್) ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುತ್ತೇನೆ ಎಂದು ಅಧಿಕೃತ ಭರವಸೆ ನೀಡಿದರು. ಅಲ್ಲದೇ ನಾನೇ ಬಂದು ಆಸ್ಪತ್ರೆ ಉದ್ಘಾಟನೆಯನ್ನೂ ಮಾಡುತ್ತೇನೆ ಎಂದು ಡಿಕೆಶಿ ಮುಂದೆ ಹೇಳಿದರು.

ಶ್ರೀಮಂತರು ಉತ್ತಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗಬಹುದು. ಆದರೆ ಬಡವರ ಪಾಲಿಗೆ ಸರ್ಕಾರಿ ಆಸ್ಪತ್ರೆಗಳೇ ಗತಿ ಎಂದು ಭಾವುಕರಾಗಿ ನುಡಿದ ಸಿಎಂ, ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ. 2016ರಲ್ಲಿ ಕಾರವಾರದ ಮೆಡಿಕಲ್ ಕಾಲೇಜ್ ಉದ್ಘಾಟನೆ ಮಾಡಿದ್ದೆವು. ಇಂದು 200ಕೋಟಿ ರೂ. ವೆಚ್ಚದಲ್ಲಿ 450 ಬೆಡ್‌ಗಳ ಆಸ್ಪತ್ರೆ ನಿರ್ಮಾಣ ಮಾಡಿದ್ದೇವೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಟೀಕಿಸುತ್ತಿದ್ದ ಬಿಜೆಪಿಗೆ ಸಿಎಂ ಅಂಕಿ-ಅಂಶಗಳ ಮೂಲಕವೇ ತಿರುಗೇಟು ನೀಡಿದ ಸಿದ್ದರಾಮಯ್ಯ, ಸರ್ಕಾರದಲ್ಲಿ ಹಣವಿಲ್ಲದಿದ್ದರೆ 200 ಕೋಟಿ ರೂ. ವೆಚ್ಚದ ಆಸ್ಪತ್ರೆ ಮತ್ತು ಸೇತುವೆಗಳನ್ನು ನಿರ್ಮಿಸಲು ಹೇಗೆ ಸಾಧ್ಯ? ನಾವು ಗ್ಯಾರಂಟಿ ಮತ್ತು ಅಭಿವೃದ್ಧಿ ಎರಡನ್ನೂ ಜೊತೆಜತೆಯಾಗಿ ಕೊಂಡೊಯ್ಯುತ್ತಿದ್ದೇವೆ ಎಂದು ಟಾಂಗ್ ಕೊಟ್ಟರು.

ರಾಜೀನಾಮೆ ಎಚ್ಚರಿಕೆ ನೀಡಿದ ಶಾಸಕ ಸೈಲ್

ಸಿಎಂ ಸಿದ್ದರಾಮಯ್ಯಗೂ ಮುನ್ನ ಮಾತನಾಡಿದ ಶಾಸಕ ಸತೀಶ್ ಸೈಲ್, ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸುವ ಭರವಸೆ ಇದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಆಸ್ಪತ್ರೆ ಘೋಷಿಸದಿದ್ರೆ ಹೇಳಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಸಿಎಂ, ಡಿಸಿಎಂ ಮುಂದೆಯೇ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್