ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಇನ್ನು ಕೆಲವೇ ದಿನ ಬಾಕಿ: ಇಲ್ಲಿದೆ ವಿವರ

ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ 2023ನೇ ಸಾಲಿನ ಮುಂಗಾರು ಹಂಗಾಮು, ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಹಾಗಾಗಿ ಬೆಳೆ ಸಾಲ ಪಡೆಯುವ ಮತ್ತು ಪಡೆಯದ ರೈತರು ವಿಮಾ ಕಂತನ್ನು ಜುಲೈ 31 ರಂದು ಪಾವತಿಸಲು ಕೊನೆಯ ದಿನವಾಗಿದೆ.

ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ನೋಂದಣಿಗೆ ಇನ್ನು ಕೆಲವೇ ದಿನ ಬಾಕಿ: ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 26, 2023 | 8:59 PM

ಉತ್ತರ ಕನ್ನಡ, ಜುಲೈ 26: ಉತ್ತರ ಕನ್ನಡ ಜಿಲ್ಲೆಯಲ್ಲಿ 2023ನೇ ಸಾಲಿನ ಮುಂಗಾರು ಹಂಗಾಮು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು (RWBCIS) ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಹಾಗಾಗಿ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಜುಲೈ 31 ರಂದು ಪಾವತಿಸಲು ಕೊನೆಯ ದಿನವಾಗಿದೆ. ಈ ಕುರಿತಾಗಿ ತೋಟಗಾರಿಕಾ ಇಲಾಖೆ ಪ್ರಕಟಣೆ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯ ನೀಡಲಾಗುತ್ತಿದೆ. ಈ ಪೈಕಿ ದಾಂಡೇಲಿ, ಹಳಿಯಾಳ, ಅಂಕೋಲಾ ಮತ್ತು ಮುಂಡಗೋಡ ತಾಲ್ಲೂಕಿನ ವಿಮಾ ಘಟಕಗಳಿಗೆ ಮಾವು, ಶುಂಠಿ ಮತ್ತು ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಗೆ ಶುಂಠಿ ಬೆಳೆಯನ್ನು ಹೊಸದಾಗಿ ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: Ballari News: ಬಳ್ಳಾರಿ; ಪರಿಷ್ಕೃತ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೊಂದಣಿಗೆ ಆಹ್ವಾನ

ರೈತರು ನಿಗದಿತ ಅರ್ಜಿ ಪ್ರತಿ, ಬ್ಯಾಂಕ್ ಪಾಸ್​ ಬುಕ್​ ಪ್ರತಿ, ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ ವಿವರ ಮತ್ತು ಆಧಾರ್ ಕಾರ್ಡ್‌ ಪ್ರತಿಯೊಂದಿಗೆ ಸಂಬಂಧಿಸಿದ ಬ್ಯಾಂಕ್ ಶಾಖೆಯಲ್ಲಿ ಕೊನೆಯ ದಿನಾಂಕದ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು.

ಇದನ್ನೂ ಓದಿ: Crop Insurance: ಬೆಳೆ ವಿಮೆ ಬಗ್ಗೆ ಹತ್ತಾರು ಗೊಂದಲಗಳಿವೆಯಾ? ಹಾಗಾದ್ರೆ ಇಲ್ಲಿದೆ ಮಾಹಿತಿ

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ತೋಟಗಾರಿಕಾ ಇಲಾಖೆಯ ಕಚೇರಿ ಅಥವಾ ಹತ್ತಿರದ ಬ್ಯಾಂಕ್​ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ.

ಬೆಳೆ ವಿಮೆ ಯೋಜನೆ ವಿವರ

ರಾಜ್ಯದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:56 pm, Wed, 26 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ