AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; ಧಾರವಾಡ ಮೂಲದ ಆರು ಜನ ಸ್ಥಳದಲ್ಲೇ ಸಾವು, ಮೂವರು ಗಂಭೀರ

ಯಲ್ಲಾಪುರ ಅರಬೈಲ್ ಘಾಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೂಫಾನ್ ಕ್ರೂಸರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರೆಲ್ಲರೂ ಧಾರವಾಡ ಮೂಲದ ಸ್ವಿಗ್ಗಿ ಡೆಲಿವರಿ ಬಾಯ್ಸ್ ಆಗಿದ್ದು, ಪ್ರವಾಸಕ್ಕೆ ತೆರಳುತ್ತಿದ್ದರು. ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅರಬೈಲ್ ಘಾಟ್‌ನಲ್ಲಿ ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ; ಧಾರವಾಡ ಮೂಲದ ಆರು ಜನ ಸ್ಥಳದಲ್ಲೇ ಸಾವು, ಮೂವರು ಗಂಭೀರ
ಅರಬೈಲ್ ಘಾಟ್ ರಸ್ತೆ ಅಪಘಾತImage Credit source: Tv9 kannada
ಸೂರಜ್​, ಮಹಾವೀರ್​ ಉತ್ತುರೆ
| Edited By: |

Updated on:Jul 09, 2026 | 6:54 AM

Share

ಯಲ್ಲಾಪುರ, ಜು.9: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಬಳಿ ಇಂದು (ಜು.9) ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರವಾಸಿಗರು ಪ್ರಯಾಣಿಸುತ್ತಿದ್ದ ತೂಫಾನ್ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತಕ್ಕೊಳಗಾದ ತೂಫಾನ್ ಕ್ರೂಸರ್ ವಾಹನದಲ್ಲಿದ್ದ (KA 19 AA 5920) ಚಾಲಕ ಸೇರಿ ಒಟ್ಟು 9 ಜನರು ಧಾರವಾಡ ಮೂಲದವರಾಗಿದ್ದಾರೆ. ಇವರೆಲ್ಲರೂ ಸ್ವಿಗ್ಗಿ (Swiggy) ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ (ಜು.8) ರಾತ್ರಿ ಇವರೆಲ್ಲರೂ ಸೇರಿ ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆಂದು ಟೂರ್ ಹೊರಟಿದ್ದರು. ಆದರೆ, ಅರಬೈಲ್ ಘಟ್ಟದ ಬಳಗಾರ್ ತಲುಪುತ್ತಿದ್ದಂತೆ ಎದುರಿನಿಂದ ಬಂದ ಲಾರಿ (KA 22 AA 1008) ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಭೀಕರತೆಗೆ ಕ್ರೂಸರ್‌ನಲ್ಲಿದ್ದ ಆರು ಸಾವನ್ನಪ್ಪಿದ್ದು, ಮೃತರನ್ನು ಬಸವರಾಜ್ (48 ವರ್ಷ), ಅಭಿಷೇಕ್ ಈಶ್ವರ್ (28 ವರ್ಷ), ಅಕ್ಷಯ (26 ವರ್ಷ), ಅಭಿಷೇಕ್ (26 ವರ್ಷ), ಸಂಜೀವ / ಸಂಜಯ ಅಂಗಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ ಒಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರು ಎಳೆದಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವವರನ್ನು ತಕ್ಷಣವೇ ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳನ್ನು ಶಿವರಾಜ್ ದುರ್ಗಪ್ಪ ಮಡಿವಾಳ್ (22 ವರ್ಷ), ಮಂಜುನಾಥ್ ಅಶೋಕ್ ಚುಲಕಿ (32 ವರ್ಷ), ಸಚಿನ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ (28 ವರ್ಷ) ಎಂದು ಹೇಳಲಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು, ಅವಶೇಷಗಳಡಿ ಸಿಲುಕಿದ ನಾಲ್ವರಿಗಾಗಿ ಹುಡುಕಾಟ

ಘಟನಾ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಧಾರವಾಡದಲ್ಲಿರುವ ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:52 am, Thu, 9 July 26

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ