ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ

Edited By:

Updated on: Jan 05, 2026 | 12:21 PM

ಹಾಡು, ನೃತ್ಯ, ನಾಟಕಗಳಲ್ಲಿ ಹೆಚ್ಚುತ್ತಿರುವ ಅಶ್ಲೀಲ ಪದಗಳ ಬಳಕೆಗೆ ಕಡಿವಾಣ ಹಾಕುವಂತೆ ಉತ್ತರ ಕರ್ನಾಟಕದ ಜನಪದ ಕಲಾವಿದರು ಆಗ್ರಹಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ಹೆಣ್ಣುಮಕ್ಕಳಿಗೆ ಆಗುತ್ತಿರುವ ಮುಜುಗರ ತಪ್ಪಿಸಲು ಮತ್ತು ಉತ್ತರ ಕರ್ನಾಟಕದ ಗೌರವ ಕಾಪಾಡಲು ಈ ಕ್ರಮ ಅಗತ್ಯ ಎಂದು ಪ್ರತಿಪಾದಿಸಿದ್ದಾರೆ.

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ ಘಟನೆಗಳು ನಡೆದಿರುವುದು ವರದಿಯಾಗಿತ್ತು. ಈ ಬಂಧನವು ಎಲ್ಲ ಕಲಾವಿದರಿಗೆ ಒಂದು ಪಾಠವಾಗಬೇಕು ಎಂದು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಆರ್ಕೆಸ್ಟ್ರಾ, ನಾಟಕ, ಆಲ್ಬಮ್ ಸಾಂಗ್, ನೃತ್ಯ ಮತ್ತು ಉಡುಪುಗಳಲ್ಲಿ ಅಶ್ಲೀಲತೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More