ಉತ್ತರಾಖಂಡ್ನಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ
Uttarakhand Flood Helpdesk: ಕರ್ನಾಟಕದ ಪ್ರವಾಸಿಗರು, ಯಾತ್ರಾರ್ಥಿಗಳಿಗಾಗಿ ಹೆಲ್ಪ್ಡೆಸ್ಕ್ ಆರಂಭ ಮಾಡಲಾಗಿದೆ. ಉತ್ತರಾಖಂಡ್ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ಹೆಲ್ಪ್ಡೆಸ್ಕ್ ಆರಂಭಿಸಲಾಗಿದೆ.
ಬೆಂಗಳೂರು: ಉತ್ತರಾಖಂಡ್ನಲ್ಲಿ ಜಲಪ್ರಳಯ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಮಂಗಳವಾರ ಹೆಲ್ಪ್ಡೆಸ್ಕ್ ಆರಂಭಿಸಲಾಗಿದೆ. ಕರ್ನಾಟಕದ ಪ್ರವಾಸಿಗರು, ಯಾತ್ರಾರ್ಥಿಗಳಿಗಾಗಿ ಹೆಲ್ಪ್ಡೆಸ್ಕ್ ಆರಂಭ ಮಾಡಲಾಗಿದೆ. ಉತ್ತರಾಖಂಡ್ ನೆರೆ ಸಂತ್ರಸ್ತರಾಗಿರುವ ಕರ್ನಾಟಕದ ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಸಹಾಯವಾಣಿ ತೆರೆಯಲಾಗಿದೆ.
ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಉತ್ತರಾಖಂಡ್ನಲ್ಲಿ ಸಿಲುಕಿರುವ ಕನ್ನಡಿಗರು ಅಥವಾ ಅವರ ಸಂಬಂಧಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಹಾಗೂ ಉತ್ತರಾಖಂಡ್ ನೆರೆಯಲ್ಲಿ ಸಿಲುಕಿರುವವರ ಬಗ್ಗೆ ಮಾಹಿತಿ ನೀಡಬಹುದು. ಅದನ್ನು ಅಲ್ಲಿನ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಕಾರ್ಯಾಚರಣೆಗೆ ಸಹಾಯವಾಗುವಂತೆ ಕಳುಹಿಸಿಕೊಡಲಾಗುತ್ತದೆ. ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕದ ತುರ್ತು ಸಹಾಯವಾಣಿ ಸಂಖ್ಯೆ: 080 – 1070 (Toll Free) ಮತ್ತು 080 – 2234 0676 -ಈ ಸಂಖ್ಯೆಯು ದಿನದ ಎಲ್ಲಾ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆ ಉತ್ತರಾಖಂಡ್ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ ಸರ್ಕಾರದಿಂದ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ.
ಇದನ್ನೂ ಓದಿ: Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಇದನ್ನೂ ಓದಿ: ಉತ್ತರಾಖಂಡ್ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಕ್ಷಣಾ ತಂಡಗಳು ಸಜ್ಜು
Published On - 9:46 pm, Tue, 19 October 21