ಉತ್ತರಾಖಂಡ್​​ನಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ

| Updated By: ganapathi bhat

Updated on: Oct 19, 2021 | 10:45 PM

Uttarakhand Flood Helpdesk: ಕರ್ನಾಟಕದ ಪ್ರವಾಸಿಗರು, ಯಾತ್ರಾರ್ಥಿಗಳಿಗಾಗಿ ಹೆಲ್ಪ್​​ಡೆಸ್ಕ್ ಆರಂಭ ಮಾಡಲಾಗಿದೆ. ಉತ್ತರಾಖಂಡ್​ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ಹೆಲ್ಪ್​ಡೆಸ್ಕ್​ ಆರಂಭಿಸಲಾಗಿದೆ.

ಉತ್ತರಾಖಂಡ್​​ನಲ್ಲಿ ಜಲಪ್ರಳಯ: ಕನ್ನಡಿಗರ ರಕ್ಷಣೆಗೆ ಸಹಾಯವಾಣಿ ಆರಂಭಿಸಿದ ಕರ್ನಾಟಕ ಸರ್ಕಾರ
ಮಳೆ
Follow us on

ಬೆಂಗಳೂರು: ಉತ್ತರಾಖಂಡ್​​ನಲ್ಲಿ ಜಲಪ್ರಳಯ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಮಂಗಳವಾರ ಹೆಲ್ಪ್​​ಡೆಸ್ಕ್​​ ಆರಂಭಿಸಲಾಗಿದೆ. ಕರ್ನಾಟಕದ ಪ್ರವಾಸಿಗರು, ಯಾತ್ರಾರ್ಥಿಗಳಿಗಾಗಿ ಹೆಲ್ಪ್​​ಡೆಸ್ಕ್ ಆರಂಭ ಮಾಡಲಾಗಿದೆ. ಉತ್ತರಾಖಂಡ್ ನೆರೆ ಸಂತ್ರಸ್ತರಾಗಿರುವ ಕರ್ನಾಟಕದ ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಸಹಾಯವಾಣಿ ತೆರೆಯಲಾಗಿದೆ.

ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದಾರೆ. ಉತ್ತರಾಖಂಡ್​ನಲ್ಲಿ ಸಿಲುಕಿರುವ ಕನ್ನಡಿಗರು ಅಥವಾ ಅವರ ಸಂಬಂಧಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಹಾಗೂ ಉತ್ತರಾಖಂಡ್​ ನೆರೆಯಲ್ಲಿ ಸಿಲುಕಿರುವವರ ಬಗ್ಗೆ ಮಾಹಿತಿ ನೀಡಬಹುದು. ಅದನ್ನು ಅಲ್ಲಿನ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಕಾರ್ಯಾಚರಣೆಗೆ ಸಹಾಯವಾಗುವಂತೆ ಕಳುಹಿಸಿಕೊಡಲಾಗುತ್ತದೆ. ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಕರ್ನಾಟಕದ ತುರ್ತು ಸಹಾಯವಾಣಿ ಸಂಖ್ಯೆ: 080 – 1070 (Toll Free) ಮತ್ತು 080 – 2234 0676 -ಈ ಸಂಖ್ಯೆಯು ದಿನದ ಎಲ್ಲಾ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಮಾಹಿತಿ ನೀಡಲಾಗಿದೆ.

ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆ
ಉತ್ತರಾಖಂಡ್​​ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಉತ್ತರಾಖಂಡದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ ಸರ್ಕಾರದಿಂದ ತಲಾ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್​​ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ‌ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ.

ಇದನ್ನೂ ಓದಿ: Uttarakhand Rain: ಉತ್ತರಾಖಂಡದಲ್ಲಿ ಮಳೆಯಿಂದ 34 ಜನ ಸಾವು; ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಇದನ್ನೂ ಓದಿ: ಉತ್ತರಾಖಂಡ್​​ನಲ್ಲಿ ಭಾರಿ ಮಳೆ ಸಾಧ್ಯತೆ; 13 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ರಕ್ಷಣಾ ತಂಡಗಳು ಸಜ್ಜು

Published On - 9:46 pm, Tue, 19 October 21