ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಕಾರು ಪ್ರಯಾಣಿಸುತ್ತಿದ್ದ ಕಾರು ಪಂಜಾಬ್​ನಲ್ಲಿ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಗಾಯಗೊಂಡಿರುವ ಕುರುಬೂರ್ ಶಾಂತಕುಮಾರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಇದೀಗ ಕುರುಬೂರ್ ಶಾಂತಕುಮಾರ್ ಅವರನ್ನು ಪಂಜಾಬ್​ನಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಮಾಡಿಸಲು ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಕಲ ವ್ಯವಸ್ಥೆ ಮಾಡಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಕುರುಬೂರು ಶಾಂತಕುಮಾರ್: ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್
Kurubur Shanthakumar
Edited By:

Updated on: Feb 15, 2025 | 12:01 PM

ಬೆಂಗಳೂರು, (ಫೆಬ್ರವರಿ 15): ಪಂಜಾಬ್​ನ ಪಟಿಯಾಲ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಗಾಯಗೊಂಡಿದ್ದು, ಪಟಿಯಾಲದ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ, ಕುರುಬೂರ್ ಶಾಂತಕುಮಾರ್ ಅವರನ್ನು ಪಟಿಯಾಲ ಆಸ್ಪತ್ರೆಯಿಂದ ಬೆಂಗಳೂರಿಗೆ ಏರ್​ ಲಿಫ್ಟ್​ ಲಿಫ್ಟ್ ಮಾಡಲು ಕೇಂದ್ರ ರೈಲ್ವೆ  ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ವ್ಯವಸ್ಥೆ ಮಾಡಿದ್ದಾರೆ.

ಅಪಘಾತದಲ್ಲಿ ಶಾಂತಕುಮಾರ್ ಅವರಿಗೆ ಬೆನ್ನುಮೂಳೆಗೆ ತೀವ್ರ ಗಾಯಾವಾಗಿದ್ದು, ಬೆಂಗಳೂರಿನಲ್ಲೇ ಚಿಕಿತ್ಸೆ ಕೊಡಿಸಲು ಶಾಂತಕುಮಾರ್ ಅವರನ್ನು ಏರ್​ ಲಿಫ್ಟ್ ಮಾಡಿಸಲು ಸೋಮಣ್ಣ ತೀರ್ಮಾನಿಸಿದ್ದು, ಈ ಸಂಬಂಧ ಸೋಮಣ್ಣ ಅವರು ಈಗಾಗಲೇ ಪಟಿಯಾಲ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಪಂಜಾಬ್​ನಲ್ಲಿ ಕುರುಬೂರು ಶಾಂತಕುಮಾರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ನಿನ್ನೆ(ಫೆಬ್ರವರಿ 14) ಪಂಜಾಬ್​​ನ ಪಟಿಯಾಲ ರಸ್ತೆಯಲ್ಲಿ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿತ್ತು. ಈ ಘಟನೆಯಲ್ಲಿ ಕುರುಬೂರ್ ಶಾಂತಕುಮಾರ್ ಹಾಗೂ ಮಿಳುನಾಡಿನ ಪಾಂಡಿಯನ್ ಅವರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ವಿವಿಧ ಬೇಡಿಕೆಗಳ ಆಗ್ರಹಿಸಿ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಈ ಸಂಬಂಧ ಇಂದು (ಫೆಬ್ರವರಿ 14) ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿತ್ತು.

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us