‘ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ’

|

Updated on: Nov 18, 2019 | 1:55 PM

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ: ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ […]

ಸಿದ್ದರಾಮಯ್ಯ ಮೇಲಿನ ಹಠಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದೆ
Follow us on

ಮೈಸೂರು: ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದೆ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯನ ಮೇಲಿನ ಹಠಕ್ಕಾಗಿ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ. ಇಲ್ಲದಿದ್ದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತಿರಲಿಲ್ಲ. ಆದರೆ ಆ ಚುನಾವಣೆಯಲ್ಲಿ ಏನಾಯ್ತು ಎಂದು ಎಲ್ಲರಿಗೂ ಗೊತ್ತಲ್ಲಾ? ಎಂದು ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಹೆಚ್.ಡಿ.ದೇವೇಗೌಡ ಬಾಯಿ ತಪ್ಪಿಯಾದ್ರೂ ಸತ್ಯ ಹೇಳಿಲ್ಲ:
ಇದೇ ವೇಳೆ ಮಾತನಾಡಿದ ಶ್ರೀನಿವಾಸ ಪ್ರಸಾದ್ ಹೆಚ್.ಡಿ.ದೇವೇಗೌಡ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡರು ರಾಜಕೀಯವಾಗಿ ಸತ್ಯ ಹೇಳಿದ್ದಾರಾ? ಬಾಯಿ ತಪ್ಪಿಯಾದ್ರೂ ಅವರು ಯಾವತ್ತೂ ಸತ್ಯ ಹೇಳಿಲ್ಲ ಎಂದು ಹುಣಸೂರಿನಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ.