ಪೋಕ್ಸೋ ಕೇಸ್​: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್

ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ (Vachanananda Swamiji) ಸ್ವಾಮೀಜಿ ಫೋಕ್ಸೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ದಾವಣಗೆರೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಆದ್ರೆ, ಇದಕ್ಕೆ ಕರ್ನಾಟಕ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದ್ದು, ನಿರೀಕ್ಷಣಾ ಜಾಮೀನು ನೀಡಿದ್ದು ಆಘಾತಕಾರಿ ಎಂದಿದೆ.

ಪೋಕ್ಸೋ ಕೇಸ್​: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್
Vachanananda Swamiji
Edited By:

Updated on: Jun 16, 2026 | 3:03 PM

ಬೆಂಗಳೂರು, (ಜೂನ್ 16): ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ (Davanagere) ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ (karnataka High Court) ಅಸಮಾಧನ ವ್ಯಕ್ತಪಡಿಸಿದೆ. ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ. ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿಯಾಗಿದೆ. ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯಾಂಶಗಳು

  • ಪೋಕ್ಸೋ ಕೇಸ್​ನಲ್ಲಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಹಿನ್ನೆಲೆ
  • ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಹೈಕೋರ್ಟ್​ಗೆ ಬಾಲಕನ ತಾಯಿ ಅರ್ಜಿ
  • ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್​​​ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ
  • ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ
  • ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್
  • ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ
  • ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ
  • ಅರ್ಜಿ ಸಂಬಂಧ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ನೋಟಿಸ್

ಸ್ವಾಮೀಜಿ ವಿರುದ್ಧ ಗಂಭೀರ ಸೆಕ್ಷನ್​​​ಗಳುಳ್ಳ ಪೋಕ್ಸೋ ಕೇಸ್ ದಾಖಲಾಗಿದೆ. ಆದರೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.

ಇದನ್ನೂ ಓದಿ: ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು?

ಇನ್ನು ದಾವಣಗೆರೆ ಜಿಲ್ಲಾ ಕೋರ್ಟ್ ನೀಡಿರುವ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್​ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಹೈಕೋರ್ಟ್, ಸ್ವಾಮೀಜಿಯ ಜಾಮೀನು ರದ್ದುಗೊಳಿಸುತ್ತಾ ಅಥವಾ ಏನು ತೀರ್ಪು ನೀಡುತ್ತೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಈ ಪ್ರಕರಣದ ಬೆಳವಣಿಗೆಗಳು ಹೀಗಿವೆ

ಪಂಚಮಸಾಲಿ ಪೀಠದಿಂದ ಸ್ವಾಮೀಜಿ ಉಚ್ಛಾಟನೆ: ಏಪ್ರಿಲ್​ ಆರಂಭದಲ್ಲಿ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 13 ಟ್ರಸ್ಟಿಗಳು ಭಾಗವಹಿಸಿ ನಿರ್ಣಯ ತೆಗೆದುಕೊಂಡು ಸ್ವಾಮೀಜಿಗಳನ್ನು ಮಠದ ಪೀಠದಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಕಾರಣವಾಗಿದ್ದು 2 ಪೀಠಗಳ ನಿರ್ವಹಣೆಯ ವಿಚಾರ. 2018ರಲ್ಲಿ ಶ್ರೀ ಅವರನ್ನು ಇಲ್ಲಿನ ಟ್ರಸ್ಟಿಗಳು ಜಗದ್ಗುರು ಮಾಡಿದ್ದರು. ಬಳಿಕ ಹಲವಾರು ಬಾರಿ ಎರಡು ಪೀಠಗಳ ಆಯ್ಕೆ ಮಾಡಿಕೊಳ್ಳುವಂತೆ ಹೇಳಿದ್ದರು. ಆದರೆ ಇದನ್ನು ವಚನಾನಂದ ಸ್ವಾಮೀಜಿ ಪಾಲಿಸದ ಆರೋಪದಲ್ಲಿ ಟ್ರಸ್ಟಿಗಳು ಸರ್ವಾನುಮತವಾಗಿ ಪದಚ್ಯುತಗೊಳಿಸಿದ್ದರು.

ವಚನಾನಂದ ಶ್ರೀಗಳ ವಿರುದ್ಧ ಮಠದ ಮಕ್ಕಳಿಂದ ದೂರು: ವಚನಾನಂದ ಸ್ವಾಮೀಜಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ, ಹಿಂಸೆ ನೀಡುತ್ತಾರೆ ಎಂದು ಸ್ವತಃ ಮಕ್ಕಳು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ವಿಚಾರಣೆ ನಡೆಸಿದ್ದರು. ಅಲ್ಲದೇ ವಚನಾನಂದ ಸ್ವಾಮೀಜಿ ವಿರುದ್ಧ ಮಠದ ಬಾಲಕನೋರ್ವನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈಗಾಗಲೇ ಇದೇ ಪ್ರಕರಣದಲ್ಲಿ ಸ್ವಾಮೀಜಿಯ ವಿಚಾರಣೆ ನಡೆದು, ಮೆಡಿಕಲ್ ಟೆಸ್ಟ್ ಕೂಡ ನಡೆಸಲಾಗಿದೆ.

ನಿರೀಕ್ಷಣಾ ಜಾಮೀನು ಮಂಜೂರು: ಸ್ವಾಮೀಜಿ ವಿರುದ್ಧ ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸ್ವಾಮೀಜಿ, ಏಪ್ರಿಲ್ 21ರಂದು ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಜಿಲ್ಲಾ ನ್ಯಾಯಾಲಯ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us