ಇಡಿ ಬಿಟ್ಟರು ತಪ್ಪದ ಎಸ್ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್ಗೆ ನೋಟಿಸ್
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇಂದು ಸಹ ವಿಚಾರಣೆಗೆ ಹಾಜರಾಗಿದ್ದರು.
ಬೆಂಗಳೂರು, ಜುಲೈ 12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation Scam) ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ಗೆ (Basanagouda Daddal) ಎಸ್ಐಟಿ ಮತ್ತೆ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದೆ. ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಮೇಲೆ ಎಸ್ಐಟಿ ಮುಂದೆ ಬಂದಿದ್ದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದರು.
ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ಮಾಡಲಾಗಿತ್ತು. ಇಂದು ಇಡಿಯಿಂದ ಅರೆಸ್ಟ್ ಭಯದಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ನಾಲ್ಕು ಗಂಟೆಗೂ ಹೆಚ್ಚು ವಿಚಾರಣೆ ಮಾಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಮಾಡಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ರಾಜ್ಯ, ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಶೀತಲ ಸಮರ
ಬೆಂಗಳೂರಿನ ಎಸ್ಐಟಿ ಕಚೇರಿ ಬಳಿ ಶಾಸಕ ದದ್ದಲ್ ಪ್ರತಿಕ್ರಿಯಿಸಿದ್ದು, ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ಕೆಲ ದಾಖಲೆ ಪರಿಶೀಲಿಸಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಕೂಡ ಕೇಳಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ. ಎಸ್ಐಟಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದ್ದಾರೆ.
ಇಡಿ ಕಣ್ಣು ತಪ್ಪಿಸಿ ಎಸ್ಐಟಿ ಮುಂದೆ ಹಾಜರ: ನನ್ನನ್ನ ಅರೆಸ್ಟ್ ಮಾಡಿ ಎಂದ ಶಾಸಕ ದದ್ದಲ್
ಇಡಿ ಕಣ್ಣು ತಪ್ಪಿಸಿ ಶಾಸಕ ದದ್ದಲ್ ಎಸ್ಐಟಿ ಮುಂದೆ ಹಾಜರಾಗಿದ್ದು, ನನ್ನನ್ನ ಅರೆಸ್ಟ್ ಮಾಡಿ ಎಂದು ಮನವಿ ಮಾಡಿದ್ದಾರೆ. ಎಸ್ಐಟಿ ಅಧಿಕಾರಿ ಡಿವೈಎಸ್ಪಿ ಶ್ರಿನಿವಾಸ್ ಮುಂದೆ ನನ್ನನ್ನ ಅರೆಸ್ಟ ಮಾಡುವಂತೆ ಕೇಳಿದ್ದಾರೆ. ಎಸ್ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಬಳಿಕ ಎಸ್ಐಟಿ ಮುಂದೆ ಬಂದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:04 pm, Fri, 12 July 24