ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ ಮತ್ತೆ ಎಸ್ಐಟಿ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇಂದು ಸಹ ವಿಚಾರಣೆಗೆ ಹಾಜರಾಗಿದ್ದರು.

ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್
ಇಡಿ ಬಿಟ್ಟರು ತಪ್ಪದ ಎಸ್​ಐಟಿ ಕಾಟ: ಪತ್ತೆ ವಿಚಾರಣೆಗೆ ಹಾಜರಾಗುವಂತೆ ದದ್ದಲ್​ಗೆ ನೋಟಿಸ್​
Edited By:

Updated on: Jul 12, 2024 | 8:42 PM

ಬೆಂಗಳೂರು, ಜುಲೈ 12: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation Scam) ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ, ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್​ಗೆ (Basanagouda Daddal) ಎಸ್ಐಟಿ ಮತ್ತೆ ನೋಟಿಸ್ ನೀಡಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಸೂಚಿಸಿದೆ. ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಮೇಲೆ ಎಸ್​ಐಟಿ ಮುಂದೆ ಬಂದಿದ್ದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದರು.

ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ವಿಚಾರಣೆ ಮಾಡಲಾಗಿತ್ತು. ಇಂದು ಇಡಿಯಿಂದ ಅರೆಸ್ಟ್ ಭಯದಲ್ಲೇ ಎಸ್​​ಐಟಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ನಾಲ್ಕು ಗಂಟೆಗೂ ಹೆಚ್ಚು ವಿಚಾರಣೆ ಮಾಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ಮಾಡಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ರಾಜ್ಯ, ಕೇಂದ್ರ ತನಿಖಾ ಸಂಸ್ಥೆಗಳ ನಡುವೆ ಶೀತಲ ಸಮರ

ಬೆಂಗಳೂರಿನ ಎಸ್​​ಐಟಿ ಕಚೇರಿ ಬಳಿ ಶಾಸಕ ದದ್ದಲ್​ ಪ್ರತಿಕ್ರಿಯಿಸಿದ್ದು, ನನ್ನ ಮನೆಯಲ್ಲಿ ಇಡಿ ಅಧಿಕಾರಿಗಳು ಕೆಲ ದಾಖಲೆ ಪರಿಶೀಲಿಸಿದ್ದಾರೆ. ಕೆಲ ಪ್ರಮುಖ ಮಾಹಿತಿಗಳನ್ನು ಕೂಡ ಕೇಳಿದ್ದಾರೆ. ಇಡಿ ಅಧಿಕಾರಿಗಳ ವಿಚಾರಣೆಗೆ ಸಂಪೂರ್ಣ ಸಹಕಾರ ನೀಡಿದ್ದೇನೆ. ಎಸ್​​​ಐಟಿ ನೋಟಿಸ್ ನೀಡಿದ ಹಿನ್ನೆಲೆ ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಹೇಳಿದ್ದಾರೆ.

ಇಡಿ ಕಣ್ಣು ತಪ್ಪಿಸಿ ಎಸ್​ಐಟಿ ಮುಂದೆ ಹಾಜರ: ನನ್ನನ್ನ ಅರೆಸ್ಟ್ ಮಾಡಿ ಎಂದ ಶಾಸಕ ದದ್ದಲ್

ಇಡಿ ಕಣ್ಣು ತಪ್ಪಿಸಿ ಶಾಸಕ ದದ್ದಲ್ ಎಸ್​ಐಟಿ ಮುಂದೆ ಹಾಜರಾಗಿದ್ದು, ನನ್ನನ್ನ ಅರೆಸ್ಟ್ ಮಾಡಿ ಎಂದು ಮನವಿ ಮಾಡಿದ್ದಾರೆ. ಎಸ್​ಐಟಿ ಅಧಿಕಾರಿ ಡಿವೈಎಸ್​ಪಿ ಶ್ರಿನಿವಾಸ್ ಮುಂದೆ ನನ್ನನ್ನ ಅರೆಸ್ಟ ಮಾಡುವಂತೆ ಕೇಳಿದ್ದಾರೆ. ಎಸ್​ಐಟಿ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಈ ಮಧ್ಯೆ ಇಡಿ ಅಧಿಕಾರಿಗಳು ರೇಡ್ ಮಾಡಿದ್ದರು. ಇಡಿ ರೇಡ್ ಅಂತ್ಯವಾದ ಬಳಿಕ ಎಸ್​ಐಟಿ ಮುಂದೆ ಬಂದ ದದ್ದಲ್ ತನ್ನನ್ನ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:04 pm, Fri, 12 July 24

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us