AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಅಜ್ಞಾನ ಸ್ಥಳಕ್ಕೆ ತರಳಿರುವ ಬಗ್ಗೆ ವರದಿಯಾಗಿದೆ. ಹಗರಣ ಸಂಬಂಧ ಶುಕ್ರವಾರ ಎಸ್​ಐಟಿ ವಿಚಾರಣೆಗೆ ಹಾಜರಾಗಿದ್ದ ಅವರು, ಇಡಿಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಡ್ರಾಮಾ ಮಾಡಿದ್ದರು. ತಮ್ಮನ್ನು ಬಂಧಿಸುವಂತೆ ಎಸ್​ಐಟಿಗೆ ದುಂಬಾಲು ಬಿದ್ದಿದ್ದರು.

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ
ಬಸನಗೌಡ‌ ದದ್ದಲ್Image Credit source: Facebook
Shivaprasad B
| Updated By: Ganapathi Sharma|

Updated on:Jul 13, 2024 | 12:16 PM

Share

ಬೆಂಗಳೂರು, ಜುಲೈ 13: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದಿಂದ ಬಂಧನ ಭೀತಿ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಬಸನಗೌಡ‌ ದದ್ದಲ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಶುಕ್ರವಾರ ವಿಚಾರಣೆ ಸಂಬಂಧ ಎಸ್​​ಐಟಿ ಮುಂದೆ ಹಾಜರಾಗಿದ್ದ ದದ್ದಲ್ ನಂತರ ಬೆಂಗಳೂರಿನ ನಿವಾಸಕ್ಕೆ ಬಂದೇ ಇಲ್ಲ. ಕುಟುಂಬಸ್ಥರ ಸಮೇತ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಯಲಹಂಕದ ಕೋಗಿಲು ಬಳಿ ಇರುವ ಬಸನಗೌಡ ದದ್ದಲ್ ವಿಲ್ಲಾದಲ್ಲಿ ಸದ್ಯ ಇಬ್ಬರು ಮನೆ ಕೆಲಸದವರು ಮಾತ್ರ ಇದ್ದಾರೆ.

ದದ್ದಲ್ ಕುಟುಂಬ ಸಮೇತ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎಂದು ಮನೆ ಕೆಲಸದವರು ಮಾಹಿತಿ ನೀಡಿದ್ದಾರೆ. ಯಾವಾಗ ವಾಪಸ್ ಬರುತ್ತಾರೆ ಎಂದು ತಿಳಿಸಿಲ್ಲ ಎಂದು ಅವರು ಹೇಳಿದ್ದಾರೆ.

ಹಗರಣ ಸಂಬಂಧ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗುವ ಭೀತಿ ಎದುರಿಸುತ್ತಿರುವ ದದ್ದಲ್, ತಮ್ಮನ್ನು ಬಂಧಿಸುವಂತೆ ವಿಶೇಷ ತನಿಖಾ ತಂಡದ ಬಳಿ ಶುಕ್ರವಾರ ಮನವಿ ಮಾಡಿದ್ದರು. ಈ ಮೂಲಕ ಇಡಿ ಬಂಧನದಿಂದ ತಪ್ಪಿಸಿಕೊಳ್ಳಬಹುದೆಂಬುದು ಅವರ ಲೆಕ್ಕಾಚಾರವಾಗಿತ್ತು. ಆದರೆ ಎಸ್ಐಟಿ ಅವರನ್ನು ಬಂಧಿಸಿಲ್ಲ. ಇದಾದ ನಂತರ ಅವರು ಅಜ್ಞಾತ ತಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ವಿರುದ್ಧ ಸಿಕ್ಕಿದೆ ಅನೇಕ‌ ಸಾಕ್ಷ್ಯ, ಶಾಮೀಲಾಗಿದ್ದನ್ನು ಪುಷ್ಟೀಕರಿಸುವ ಅಂಶಗಳು ಇಲ್ಲಿವೆ

ಪ್ರಕರಣ ಸಂಬಂಧ ಶುಕ್ರವಾರ ಬೆಳಗ್ಗೆಯಿಂದಲೂ ಇಡಿ ಅಧಿಕಾರಿಗಳು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ನಾಗೇಂದ್ರರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿದ್ದರು. ಆದರೆ ರಾತ್ರಿ ವೇಳೆಗೆ ಒಂದು ಹಂತದ ವಿಚಾರಣೆ ಪೂರ್ಣಗೊಳಿಸಿದ್ದ ಇಡಿ ಅಧಿಕಾರಿಗಳು, ರಾತ್ರಿ ನಾಗೇಂದ್ರರನ್ನು ಬಂಧಿಸಿದ್ದಾರೆ. ರಾತ್ರಿಯೇ ಶಿವಾಜಿನಗರ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ದದ್ದಲ್​ಗೆ ಇಡಿ ಬಂಧನ ಭೀತಿ ಹೆಚ್ಚಾಗಿದೆ.

4.31 ಎಕರೆ ಜಮೀನು ಖರೀದಿ ಕಂಟಕ?

ವಾಲ್ಮೀಕಿ ನಿಗಮದ ಹಗರಣದ ಮಧ್ಯೆಯೇ ಶಾಸಕ ಬಸನಗೌಡ ದದ್ದಲ್ 4 ಎಕರೆ 31 ಗುಂಟೆ ಜಮೀನು ಖರೀದಿಸಿದ್ದಾರೆಂಬ ಆರೋಪವಿದೆ. ಇಡಿ ದಾಳಿ ಬಳಿಕ ಭೂಮಿ ಖರೀದಿ ವಿಚಾರ ಬಯಲಾಗಿದ್ದು, ಪುತ್ರ ತ್ರಿಶೂಲ್ ಕುಮಾರ್ ನಾಯಕ್ ಹೆಸರಿನಲ್ಲಿ ರಾಯಚೂರು ಜಿಲ್ಲೆಯ ಗುಣದಿನ್ನಿ ಗ್ರಾಮದಲ್ಲಿ ದದ್ದಲ್ ತಂದೆ ಸಿದ್ದನಗೌಡರಿಂದ ಭೂಮಿ ಖರೀದಿಸಲಾಗಿದೆಯಂತೆ. ಇದೇ ಭೂಮಿಯನ್ನ ಜೂನ್27ರಂದು ಮ್ಯೂಟೇಶನ್ ಮಾಡಿಸಿಕೊಳ್ಳಲಾಗಿದೆ. ದದ್ದಲ್​ ಭೂಮಿ ಖರೀದಿ ಕುರಿತ ಪ್ರತಿ ಟಿವಿ9ಗೆ ಲಭ್ಯವಾಗಿದ್ದು, ಈ ಪ್ರತಿಯಲ್ಲಿ 23ಲಕ್ಷದ 88 ಲಕ್ಷ ರೂಪಾಯಿ ನೀಡಿ ಭೂಮಿ ಖರೀದಿಸಿರೋದು ಉಲ್ಲೇಖವಾಗಿದೆ. ಗಣದಿನ್ನಿ ಗ್ರಾಮದ ಸರ್ವೆ ನಂಬರ್ 33/1ರಲ್ಲಾದ ಭೂಮಿ ಖರೀದಿಗೆ, ರಾಯಚೂರಿನ ಖಾಸಗಿ ಬ್ಯಾಂಕ್​ನ ಚೆಕ್ ಮೂಲಕ ಹಣ ಸಂದಾಯವಾಗಿದೆ. ಖಾಸಗಿ ಅಡಚಣೆ ಹಾಗೂ ಮನೆ ಖರ್ಚಿಗಾಗಿ ಹಣದ ಅಗತ್ಯ ಹಿನ್ನೆಲೆ ಜಮೀನು ಮಾರಾಟ ಮಾಡಿದ್ದಾಗಿ ಖರೀದಿ ಪತ್ರದಲ್ಲಿ ಮಾಲೀಕ ಉಲ್ಲೇಖಿಸಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:05 pm, Sat, 13 July 24

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು