AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ನಿಗಮ ಹಗರಣ: ಕರ್ನಾಟಕದಲ್ಲಿ ಏಕಕಾಲಕ್ಕೆ 8 ಕಡೆ ಇ.ಡಿ ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಕರ್ನಾಟಕದ ಹಲವು ರಾಜಕಾರಣಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಮಾಜಿ ಸಚಿವರು, ಶಾಸಕರು ಮತ್ತು ಸಂಸದರ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ದಾಳಿ ನಡೆದಿದೆ.

ವಾಲ್ಮೀಕಿ ನಿಗಮ ಹಗರಣ: ಕರ್ನಾಟಕದಲ್ಲಿ ಏಕಕಾಲಕ್ಕೆ 8 ಕಡೆ ಇ.ಡಿ ದಾಳಿ
ಇಡಿ ರೇಡ್
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 11, 2025 | 11:30 AM

ಬೆಂಗಳೂರು, ಜೂನ್​ 11: ಮುಡಾ ಅಕ್ರಮ ಸೈಟ್​ ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ನಿನ್ನೆ ಇ.ಡಿ 100 ಕೋಟಿ ರೂ ಮೌಲ್ಯದ 92 ನಿವೇಶನಗಳನ್ನು ಮುಟ್ಟುಗೋಲು ಹಾಕಿತ್ತು. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ (Valmiki Corporation scam) ಸಂಬಂಧಿಸಿದಂತೆ ಇಂದು ಕರ್ನಾಟಕದ ಒಟ್ಟು 8 ಕಡೆ ಏಕಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ (ED raid) ಮಾಡಿದ್ದಾರೆ. ಕೆಲ ಸಂಸದರು, ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ.

ಎಲ್ಲೆಲ್ಲಿ, ಯಾರ್ಯಾರ ಮನೆ ಮೇಲೆ ದಾಳಿ?

ಬಳ್ಳಾರಿಯಲ್ಲಿ 5 ಸ್ಥಳ, ಬೆಂಗಳೂರಿನಲ್ಲಿ 3 ಕಡೆ ಇಡಿ ದಾಳಿ ನಡೆದಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್​.ಗಣೇಶ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಭರತ್ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಇಡಿ ಅಧಿಕಾರಿಗಳ ಪ್ರಶ್ನೆಗಳಿಗೆ ಕಕ್ಕಾಬಿಕ್ಕಿಯಾದ ಸಂಸದ ತುಕಾರಾಂ

ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಮನೆಯಿಂದ 2 ಕಿ.ಮೀ. ದೂರದಲ್ಲಿ ರಸ್ತೆಗೆ ಬ್ಯಾರಿಕೇಡ್ ಅವಳಡಿಕೆ ಮಾಡಲಾಗಿದೆ.

ಇದನ್ನೂ ಓದಿ
Image
ಸಿಂಗಾಪುರದ ಕಾರ್ಗೋ ಶಿಪ್ ಅಗ್ನಿಗಾಹುತಿ: ಪತ್ತೆಯಾಗದ ನಾಲ್ವರು ಸಿಬ್ಬಂದಿ
Image
ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ: ಜಾಹೀರಾತು ಮೊರೆ ಹೋದ BMRCL
Image
ಬೆಂಗಳೂರಿಗೆ ರಾತ್ರೋರಾತ್ರಿ ಮಳೆ ಎಂಟ್ರಿ: ರಸ್ತೆಗಳಲ್ಲಿ ನಿಂತ ನೀರು
Image
ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, ರೆಡ್ ಅಲರ್ಟ್​

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ: ಆದಾಯದ ಮೇಲೆ ಭಾರಿ ಹೊಡೆತ, ಜಾಹೀರಾತು ಮೊರೆ ಹೋದ ಬಿಎಂಆರ್​ಸಿಎಲ್​​

ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಬಗ್ಗೆ ಇಡಿ ವಿಚಾರಣೆ ನಡೆಸಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ಸಂಸದ ತುಕಾರಾಂ ಕಕ್ಕಾಬಿಕ್ಕಿಯಾಗಿದ್ದಾರೆ. ಬಿ.ನಾಗೇಂದ್ರ ಪಿಎ ಬಳಿ ಸಿಕ್ಕ ಡೈರಿ ಆಧಾರವಾಗಿಟ್ಟುಕೊಂಡು ಪ್ರಶ್ನೆ ಮಾಡಲಾಗಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ.

ಕಂಪ್ಲಿ ಶಾಸಕ ಜೆಎನ್​ ಗಣೇಶ್ ನಿವಾಸ ಮತ್ತು ಕಚೇರಿಯಲ್ಲಿ 10 ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಮಾಡಲಾಗುತ್ತಿದ್ದು, ಹಣ ಹಂಚಿಕೆ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅದೇ ರೀತಿಯಾಗಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ರೆಡ್ಡಿ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್​ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಶಾಸಕ ಬಿ.ನಾಗೇಂದ್ರ ನಿವಾಸದ ಮೇಲೂ ದಾಳಿ

ಇನ್ನು ಈಗಾಗಲೇ ಪ್ರಕರಣದಲ್ಲಿ ಅರೆಸ್ಟ್ ಆಗಿ ಬೇಲ್​ ಪಡೆದಿರುವ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ನಿವಾಸದ ಮೇಲೆ ಕೂಡ ರೇಡ್ ಮಾಡಲಾಗಿದೆ. ಬಿ.ನಾಗೇಂದ್ರಗೆ ಸೇರಿದ ಬೆಂಗಳೂರಿನಲ್ಲಿ ಶಾಸಕರ ಭವನದ ಕೊಠಡಿ ನಂಬರ್ 360ರಲ್ಲಿ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ. ತನಿಖೆ ಮುಗಿದಿದೆ ಎನ್ನುವ ಹೊತ್ತಿನಲ್ಲೇ ಮತ್ತೆ ದಾಳಿ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು 

ಕಾಂಗ್ರೆಸ್ ಸಂಸದರು,​​ ಶಾಸಕರ ಮನೆಗಳ ಮೇಲೆ ಇಡಿ ದಾಳಿ ವಿಚಾರವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಯಾರೇ ಆಗಲಿ ತಪ್ಪು ಮಾಡಿದ್ದರೆ ಕ್ರಮಕೈಗೊಳ್ಳಲಿ. ಯಾವುದೇ ಕಾರಣಕ್ಕೂ ತಪ್ಪುಗಳನ್ನು ನಾವು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:24 am, Wed, 11 June 25

Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!