ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣ ಕಾಂಗ್ರೆಸ್​ ಸರ್ಕಾರದ ಮೊದಲ ಹಗರಣವಾಗಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಚಿವರು, ಶಾಸಕರ ಬುಡಕ್ಕೆ ಬಂದಿದೆ. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದ್ದು, ಇದೀಗ ತನಿಖಾ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಿದೆ.

ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ
ವಾಲ್ಮೀಕಿ ನಿಗಮ ಹಗರಣ: ಕೋರ್ಟ್​​ಗೆ ತನಿಖಾ ವರದಿ ಸಲ್ಲಿಸಿದ ಇಡಿ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Oct 09, 2024 | 7:00 PM

ಬೆಂಗಳೂರು, ಅಕ್ಟೋಬರ್​ 09: ವಾಲ್ಮೀಕಿ ನಿಗಮದಲ್ಲಿನ ಹಗರಣ (Valmiki Corporation Scam) ಇಡೀ ಕರ್ನಾಟಕದಲ್ಲೇ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶಾನಾಲಯ ಇದೀಗ ವರದಿ ಸಲ್ಲಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಇಡಿ ಮಾಹಿತಿ ಹಂಚಿಕೊಂಡಿದ್ದು, ಇಡಿ ಸಲ್ಲಿಸಿರುವ ವರದಿಯನ್ನು ವಿಶೇಷ ಕೋರ್ಟ್​ ಪರಿಜ್ಞಾನಕ್ಕೆ ಪಡೆದುಕೊಂಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರರ ತಲೆದಂಡವೂ ಆಗಿತ್ತು. ಇತ್ತೀಚೆಗೆ ಇಡಿ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಮಾಡಿತ್ತು. ಅದರಲ್ಲಿ ಪ್ರಕರಣದ ಮಾಸ್ಟರ್ ಮೈಂಡ್ ಮಾಜಿ ಸಚಿವ ಬಿ.ನಾಗೇಂದ್ರರೇ ಆಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿತ್ತು.

ಇದನ್ನೂ ಓದಿ: ವಾಲ್ಮಿಕಿ ನಿಗಮ ಹಗರಣ: ಬಳ್ಳಾರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆಗಳ ಮೇಲೆ ಮತ್ತೆ ಇಡಿ ದಾಳಿ

ಮಾಜಿ ಸಚಿವ ಬಿ.ನಾಗೇಂದ್ರ ಮೇಲೆ ಆರೋಪ ಹೊರಿಸಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿತ್ತು. ಚಾರ್ಜ್​ಶೀಟ್​ನಲ್ಲಿ ಬಿ.ನಾಗೇಂದ್ರನೇ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖ ಮಾಡಲಾಗಿತ್ತು. ಚಾರ್ಜ್​ಶೀಟ್​ನಲ್ಲಿ ವಾಲ್ಮೀಕಿ ನಿಗಮ ಹಗರಣದ ಸಂಪೂರ್ಣ ಮಾಹಿತಿ ಉಲ್ಲೇಖ ಮಾಡಲಾಗಿತ್ತು. ಸತ್ಯನಾರಾಯಣ ವರ್ಮಾ ಜತೆ ನಿಕಟ ಸಂಪರ್ಕ, ಹಣದ ಬಗ್ಗೆಯೂ ಉಲ್ಲೇಖಿಸಿಲಾಗಿತ್ತು.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಕಾಂಗ್ರೆಸ್​ ಶಾಸಕ ನಾಗೇಂದ್ರನನ್ನು ಅಧಿಕೃತವಾಗಿ ಬಂಧಿಸಿದ ಇಡಿ

ನಾಗೇಂದ್ರ ಸೂಚನೆಯಂತೆಯೇ ಸಂಪೂರ್ಣ ಹಣದ ವಹಿವಾಟು ನಡೆದಿದೆ, 187 ಕೋಟಿ ರೂ. ವಾಲ್ಮೀಕಿ ಅವ್ಯವಹಾರದ ಪೈಕಿ 97.32 ಕೋಟಿ ರೂ. ವರ್ಗಾವಣೆ ಆಗಿತ್ತು. ನಿಗಮಕ್ಕೆ ಸೇರಿದ್ದ 12 ಕೋಟಿ ರೂ. ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದನ್ನು ಬಯಲಾಗಿತ್ತು. ಇನ್ನು ಬೆಂಗಳೂರು, ಬಳ್ಳಾರಿಯಲ್ಲಿ ಹಣ ಹಂಚಿಕೆ ಬಗ್ಗೆ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಮಾಡಲಾಗಿತ್ತು. ಬಿ.ನಾಗೇಂದ್ರ ಸೇರಿ ಐವರ ವಿರುದ್ಧ ದೋಷಾರೋಪ ಪಟ್ಟಿಯನ್ನ ಸಲ್ಲಿಕೆ ಮಾಡಲಾಗಿತ್ತು.

ರಾಜ್ಯ ಸರ್ಕಾರ ರಚಿಸಿರುವ ಎಸ್​ಐಟಿ ಅಧಿಕಾರಿಗಳು ಕೂಡ ಪ್ರತ್ಯೇಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ ಇಡಿ ಮತ್ತು ಎಸ್​ಐಟಿ ಎರಡು ತಂಡಗಳ ಆರೋಪಪಟ್ಟಿಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ