ವಾಲ್ಮೀಕಿ ನಿಗಮ ಹಗರಣ: ತನಿಖೆ ವಿವರ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ನೋಟಿಸ್

| Updated By: ಗಂಗಾಧರ​ ಬ. ಸಾಬೋಜಿ

Updated on: Nov 22, 2024 | 7:46 PM

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದ ನಂತರ, ಈಗ ಸಿಬಿಐ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮೊದಲು ಸಿಬಿಐ ತನಿಖೆಗೆ ಆಗ್ರಹಿಸಿ ಶಾಸಕರು ರಿಟ್ ಅರ್ಜಿ ಸಲ್ಲಿಸಿದ್ದರು.

ವಾಲ್ಮೀಕಿ ನಿಗಮ ಹಗರಣ: ತನಿಖೆ ವಿವರ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ನೋಟಿಸ್
ವಾಲ್ಮೀಕಿ ನಿಗಮ ಹಗರಣ: ತನಿಖೆ ವಿವರ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ನೋಟಿಸ್
Follow us on

ಬೆಂಗಳೂರು, ನವೆಂಬರ್​ 22: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Corporation scam) ಸಂಬಂಧಿಸಿದಂತೆ ಇತ್ತೀಚೆಗೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಇದರ ಬೆನ್ನಲ್ಲೇ ಇದೀಗ ತನಿಖೆಯ ವಿವರ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ.

ವಾಲ್ಮೀಕಿ ನಿಗಮ ಹಗರಣದ ತ್ವರಿತ ಸಿಬಿಐ ತನಿಖೆ‌ಗೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ವಾಲ್ಮೀಕಿ ಹಗರಣ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ಯೂನಿಯನ್ ಬ್ಯಾಂಕ್ ದೂರಿನ ಮೇರೆಗೆ ಈಗಾಗಲೇ ಸಿಬಿಐ ಕೇಸ್ ದಾಖಲಿಸಿದೆ. ಬ್ಯಾಂಕಿಂಗ್ ರೆಗ್ಯುಲೇಷನ್ ಕಾಯ್ದೆ ಸೆಕ್ಷನ್​ 35ಎ ಅಡಿ ಸಿಬಿಐ ತನಿಖೆಗೆ ಇತ್ತೀಚಿಗೆ ಹೈಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಸದ್ಯ ರಾಜ್ಯದೊಳಗೆ ತನಿಖೆ ನಡೆಸಲು ಸಿಬಿಐಗೆ ನಿರ್ಬಂಧಗಳಿವೆ.

ಯೂನಿಯನ್​ ಬ್ಯಾಂಕ್​ ಅರ್ಜಿಗೆ ರಾಜ್ಯ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಧಿಕಾರ ರಾಜ್ಯ ಪೊಲೀಸರಿಗೆ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಜುಲೈನಲ್ಲಿ ಬಂಧಿಸಲಾಗಿತ್ತು.

ನವೆಂಬರ್ 13 ರಂದು ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿರುವ ರಾಜ್ಯ ಪೊಲೀಸರನ್ನು ಹೊರತುಪಡಿಸಿ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸುವುದು ಸೂಕ್ತವಾಗಿದೆ ಎಂದು ತಿಳಿಸಿತ್ತು.

ಇದನ್ನೂ ಓದಿ: ವಾಲ್ಮೀಕಿ ಹಗರಣದಲ್ಲಿ ಬಂಧನವಾಗಿದ್ದ ಶಾಸಕ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ?

ಇನ್ನು ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಚಾರ್ಜ್‌ಶೀಟ್ ಸಲ್ಲಿಸಿದೆ. 187 ಕೋಟಿ ರೂಪಾಯಿ ಹಗರಣ ಸಂಬಂಧ 4ಸಾವಿರದ 970 ಪುಟಗಳ ಚಾರ್ಜ್‌ಶೀಟ್ ಜೊತೆಗೆ 144 ಪುಟಗಳ ದೂರು ಸಲ್ಲಿಸಲಾಗಿದೆ. ಇಡಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ A1 ಆಗಿದ್ದಾರೆ. ಆದರೆ ಇದೇ ಪ್ರಕರಣದಲ್ಲಿ ಇದೀಗ ರಾಜಕೀಯವೂ ಜೋರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.